ಬುಧವಾರ, ಆಗಸ್ಟ್ 4, 2021
23 °C

ದಾವಣಗೆರೆ: ಅಂತರ ಮರೆತು ಹುಟ್ಟುಹಬ್ಬ ಆಚರಿಸಿಕೊಂಡ ಮೇಯರ್ ಅಜಯ್ ಕುಮಾರ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದಾವಣಗೆರೆ: ಭಾನುವಾರದ ಲಾಕ್‌ಡೌನ್ ನಡುವೆಯೇ ಮಹಾನಗರ ಪಾಲಿಕೆ ಮೇಯರ್ ಬಿ.ಜಿ. ಅಜಯ್‌ಕುಮಾರ್ ಅವರು ಪಾಲಿಕೆ ಕಚೇರಿಯೊಳಗಡೆ ಜನ್ಮದಿನ ಆಚರಿಸಿಕೊಂಡಿರುವುದು ಚರ್ಚೆಗೆ ಗ್ರಾಸವಾಗಿದೆ.

ಅಂತರ ಕಾಯ್ದುಕೊಳ್ಳದೇ, ಮಾಸ್ಕ್ ಧರಿಸದೇ ಕಚೇರಿಯೊಳಗೆ ಹುಟ್ಟುಹಬ್ಬ ಆಚರಿಸಿಕೊಂಡಿರುವುದರಿಂದ ಸೋಂಕು ನಿಯಂತ್ರಣಕ್ಕೆ ತಮ್ಮದೇ ಸರ್ಕಾರ ರೂಪಿಸಿದ ನಿಯಮಗಳನ್ನು ಗಾಳಿಗೆ ತೂರಲಾಯಿತು.

ಪಾಲಿಕೆ ಕಚೇರಿ ಆವರಣದಲ್ಲಿ ಅಭಿಮಾನಿಗಳು ಹಾಗೂ ಪಾಲಿಕೆ ಸದಸ್ಯರು ಶುಭಾಶಯ ಮೇಯರ್ ಬಿ.ಜಿ. ಅಜಯ್‌ಕುಮಾರ್ ಅವರಿಗೆ ಕೋರಿದ್ದಾರೆ. ಆದರೆ ಯಾರೊಬ್ಬರೂ ಮಾಸ್ಕ್ ಧರಿಸಿಲ್ಲ ಎಂಬ ಆರೋಪ ಕೇಳಿಬಂದಿದೆ.

ನಗರದ ವಿವಿಧ ಕಡೆ ಜನ್ಮದಿನಕ್ಕೆ ಶುಭಾಶಯ ಕೋರಿದ ಬ್ಯಾನರ್ ಹಾಗೂ ಕಟೌಟ್‌ಗಳು ರಾರಾಜಿಸುತ್ತಿದ್ದವು. ಹಾಗೆಯೇ ಪಾಲಿಕೆ ಆವರಣದಲ್ಲಿ  ಹತ್ತಾರು ಕಾರುಗಳು ನಿಂತಿದ್ದು, ಹಲವರು ಬಂದು ಶುಭಾಶಯ ಕೋರಿದ್ದಾರೆ.

‘ಜನ್ಮದಿನ ಆಚರಿಸಿರುವುದು ನನ್ನ ಗಮನಕ್ಕೆ ಬಂದಿದೆ. ಸಂಬಂಧಿಸಿದ ಅಧಿಕಾರಿಗಳಿಂದ ಮಾಹಿತಿ ಪಡೆದು ಕಾಯ್ದೆ ಉಲ್ಲಂಘನೆಯಾಗಿದ್ದರೆ ಕ್ರಮ ಜರುಗಿಸಲಾಗುವುದು' ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು