ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊನೆಯ ದಿನ 232 ನಾಮಪತ್ರ ಸಲ್ಲಿಕೆ

Last Updated 1 ನವೆಂಬರ್ 2019, 11:10 IST
ಅಕ್ಷರ ಗಾತ್ರ

ದಾವಣಗೆರೆ: ನವೆಂಬರ್‌ 12ರಂದು ನಡೆಯಲಿರುವ ಮಹಾನಗರ ಪಾಲಿಕೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದ್ದ ಗುರುವಾರ ಒಂದೇ ದಿನ 45 ವಾರ್ಡ್‌ಗಳಿಗೆ ಒಟ್ಟು 232 ನಾಮಪತ್ರಗಳು ಸಲ್ಲಿಕೆಯಾದವು. ಇದುವರೆಗೂ ಒಟ್ಟು 375 ನಾಮಪತ್ರಗಳು ಸಲ್ಲಿಕೆಯಾಗಿವೆ.

ಕಾಂಗ್ರೆಸ್‌ ಪಕ್ಷದಿಂದ 53, ಬಿಜೆಪಿಯಿಂದ 46, ಜೆಡಿಎಸ್‌ನಿಂದ 18, ಸಿಪಿಐನಿಂದ 2, ಬಿಎಸ್‌ಪಿಯಿಂದ 2, ಕೆಪಿಜೆಪಿಯಿಂದ 2, ವೆ.ಪಾ.ಆ.ಇಂ ನಿಂದ 1 ಹಾಗೂ ಪಕ್ಷೇತರರಾಗಿ 108 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ.

ಕೊನೆಯ ದಿನವಾಗಿದ್ದರಿಂದ ಗುರುವಾರ ಬೆಳಿಗ್ಗೆಯಿಂದಲೇ ಅಭ್ಯರ್ಥಿಗಳು ಹಾಗೂ ಬೆಂಬಲಿಗರು ಚುನಾವಣಾಧಿಕಾರಿಗಳ ಕಚೇರಿಯತ್ತ ಬಂದು ಸೇರುತ್ತಿದ್ದರು. ಕೆಲವು ಅಭ್ಯರ್ಥಿಗಳು ಬೆಂಬಲಿಗರೊಂದಿಗೆ ಮೆರವಣಿಗೆಯಲ್ಲಿ ಬಂದು ನಾಮಪತ್ರ ಸಲ್ಲಿಸಿದರು. ಜಿಲ್ಲಾ ಕ್ರೀಡಾಂಗಣ, ಡಿಡಿಪಿಐ ಕಚೇರಿ, ತೋಟಗಾರಿಕೆ ಇಲಾಖೆ ಕಚೇರಿ ಆವರಣದಲ್ಲಿ ಜನಜಾತ್ರೆಯೇ ಸೇರಿತ್ತು. ಟಿಕೆಟ್‌ ತಪ್ಪಿದ ಆಕಾಂಕ್ಷಿಗಳು ಹಾಗೂ ಬೆಂಬಲಿಗರು ಪಕ್ಷದನಾಯಕರ ವಿರುದ್ಧ ಅಸಮಾಧಾನ ಹೊರ ಹಾಕುತ್ತಿದ್ದರು. ಕೆಲವರು ಬಂಡಾಯ ಎದ್ದು,ಪಕ್ಷೇತರರಾಗಿ ನಾಮಪತ್ರ ಸಲ್ಲಿಸಿದರು.

ನ. 2ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ನಾಮಪತ್ರ ವಾಪಸ್‌ ಪಡೆಯಲು ನ. 4 ಕೊನೆಯ ದಿನವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT