ದಾವಣಗೆರೆ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಣೆ ಮಾಡಬೇಕು ಎಂದು ಹಿಂದೂ ರಾಷ್ಟ್ರ ಸಮನ್ವಯ ಸಮಿತಿ ಮುಖಂಡ ರಾಜು ವೀರಣ್ಣ ಮನವಿ ಮಾಡಿದರು.

‘ಗೋಮಾತೆ ದೇವರ ಸಮಾನ. ಭಾರತೀಯ ಸಂಸ್ಕೃತಿ, ಸಂಪ್ರದಾಯ, ಸಂಸ್ಕಾರಗಳು ಗೋವಿನೊಂದಿಗೆ ಬೆರೆತು ಹೋಗಿವೆ. ಗ್ರಾಮೀಣ ಪರಿಸರ, ಕೃಷಿಯಲ್ಲಿ ಗೋವು ಅಗತ್ಯ ಪ್ರಾಣಿಯಾಗಿದೆ. ಇದನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಣೆ ಮಾಡಿದರೆ ಅನುಕೂಲವಾಗುತ್ತದೆ’ ಎಂದು ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಅಭಿಪ್ರಾಯಪಟ್ಟರು.

‘ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಣೆ ಮಾಡುವಂತೆ ಒತ್ತಾಯಿಸಿ ಏ.27ರಂದು ಬೆಳಿಗ್ಗೆ 10ಕ್ಕೆ ಉಪವಿಭಾಗಾಧಿಕಾರಿ ಕಚೇರಿ ಎದುರು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ರಾಷ್ಟ್ರಪತಿ, ಪ್ರಧಾನಿ ಹಾಗೂ ಎಲ್ಲ ರಾಜ್ಯಗಳ ಮುಖ್ಯಮಂತ್ರಿ ಕಚೇರಿಗೆ ಮನವಿ ಪತ್ರ ರವಾನಿಸಲಾಗುತ್ತದೆ’ ಎಂದು ಮಾಹಿತಿ ನೀಡಿದರು.

ಹಿಂದೂ ರಾಷ್ಟ್ರ ಸಮನ್ವಯ ಸಮಿತಿ ಮುಖಂಡರಾದ ಆಲೂರು ನಿಂಗರಾಜ್, ಪರಶುರಾಮ ನಡುಮನಿ, ಮಲ್ಲೇಶ್, ಪ್ರವೀಣ್ ಜಾಧವ್, ಅಜಯ್ಕುಮಾರ್ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260420-43-74696939

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.