ಭಾನುವಾರ, 8 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

‘ದ ರೂಲರ್ಸ್‘ ಚಿತ್ರದ ಪ್ರಚಾರ ಕಾರ್ಯಕ್ರಮ 25ಕ್ಕೆ

Published 22 ಆಗಸ್ಟ್ 2024, 15:30 IST
Last Updated 22 ಆಗಸ್ಟ್ 2024, 15:30 IST
ಅಕ್ಷರ ಗಾತ್ರ

ನ್ಯಾಮತಿ: ದ ರೂಲರ್ಸ್ ಚಲನಚಿತ್ರದ ಪ್ರಮೋಷನ್ ಕಾರ್ಯಕ್ರಮವನ್ನು ಆಗಸ್ಟ್ 25ರಂದು ಬೆಳಿಗ್ಗೆ 10 ಗಂಟೆಗೆ ದಾವಣಗೆರೆ ಶಾಮನೂರು ಶಿವಶಂಕರಪ್ಪ ಪಾರ್ವತಮ್ಮ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಅಂಬೇಡ್ಕರ್ ಸೇವಾ ಸಮಿತಿಯ ಜಿಲ್ಲಾ ಘಟಕದ ಅಧ್ಯಕ್ಷ ಎ.ಕೆ.ರಂಗನಾಥ ಬೆಳಗುತ್ತಿ ತಿಳಿಸಿದರು.

ಪಟ್ಟಣದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ಅಂಬೇಡ್ಕರ್ ಸೇವಾ ಸಮಿತಿ ಸಂಸ್ಥಾಪಕ ಅಧ್ಯಕ್ಷ ಕೆ.ಎಂ.ಸಂದೇಶ ಅವರು ನಾಯಕ ನಟರಾಗಿ ನಟಿಸಿರುವ,  ಶೋಷಿತರು, ಹಿಂದುಳಿದ ವರ್ಗದವರ ಪರವಾಗಿ ಮಾಡಿರುವ ಚಲನಚಿತ್ರ ಇದಾಗಿದ್ದು, ನೈಜ ಘಟನೆಗಳನ್ನು ಆಧರಿಸಿದೆ ಎಂದರು.

ಚಿತ್ರ ಇದೇ 30ರಂದು ಬಿಡುಗಡೆಯಾಗಲಿದೆ. ಈ ಸಂಬಂಧ ದಾವಣಗೆರೆಯಲ್ಲಿ ಆಯೋಜಿಸಿರುವ ಪ್ರಚಾರ ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಅಭಿಮಾನಿಗಳು, ಸಂದೇಶ ಅವರ ಅಭಿಮಾನಿಗಳು, ದಲಿತಪರ, ಪ್ರಗತಿಪರ ಸಂಘಟನೆಯವರು, ರೈತ, ಕೂಲಿ ಕಾರ್ಮಿಕರ ಸಂಘಟನೆಯ ಪದಾಧಿಕಾರಿಗಳು ಹಾಗೂ ನ್ಯಾಮತಿ-ಹೊನ್ನಾಳಿ ತಾಲ್ಲೂಕಿನ ದಲಿತ ಸಂಘಟನೆಗಳ ಸದಸ್ಯರು ಭಾಗವಹಿಸುವಂತೆ ಮನವಿ ಮಾಡಿದರು.

ಜಿಲ್ಲಾ ಸಂಘಟನಾ ಸಂಚಾಲಕ ಚೀಲೂರು ಎ.ಕೆ.ಕುಮಾರ, ನ್ಯಾಮತಿ ತಾಲ್ಲೂಕು ಘಟಕದ ಅಧ್ಯಕ್ಷ ಜೀನಹಳ್ಳಿ ಟಿ.ಅಶೋಕ, ತಾಲ್ಲೂಕು ಸಂಘಟನಾ ಸಂಚಾಲಕ ಚೀಲೂರು ಬಿ.ಸೋಮಶೇಖರ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT