ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅನರ್ಹರು ಬಿಪಿಎಲ್ ಕಾರ್ಡ್‌ಗಳನ್ನು ವಾಪಸ್ ನೀಡಿ: ಮಹಾಂತೇಶ ಬೀಳಗಿ

Last Updated 16 ಫೆಬ್ರುವರಿ 2021, 1:59 IST
ಅಕ್ಷರ ಗಾತ್ರ

ದಾವಣಗೆರೆ:ಅನರ್ಹರು ತಮ್ಮ ಬಳಿ ಇರುವ ಬಿಪಿಎಲ್ ಪಡಿತರ ಚೀಟಿಗಳನ್ನು ಸರ್ಕಾರಕ್ಕೆ ವಾ‍ಪಸ್ ನೀಡಬೇಕು ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ತಿಳಿಸಿದ್ದಾರೆ.

‘ಸರ್ಕಾರಿ ನೌಕರರು ವೇತನವನ್ನು ಗಣನೆಗೆ ತೆಗೆದುಕೊಳ್ಳದೆ ಎಲ್ಲಾ ಖಾಸಗಿ ನೌಕರರು, ಸರ್ಕಾರಿ ಅನುದಾನಿತ ನೌಕರರು, ನಿಗಮಗಳು, ಮಂಡಳಿಗಳು ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು ಇತ್ಯಾದಿ ಒಳಗೊಂಡಂತೆ ಆದಾಯ ತೆರಿಗೆ, ಸೇವಾ ತೆರಿಗೆ, ವ್ಯಾಟ್, ವೃತ್ತಿ ತೆರಿಗೆ ಪಾವತಿಸುವ ಎಲ್ಲಾ ಕುಟುಂಬಗಳು ಇದರ ವ್ಯಾಪ್ತಿಗೆ ಬರುತ್ತವೆ’ ಎಂದು ತಿಳಿಸಿದ್ದಾರೆ.

‘ಗ್ರಾಮೀಣ ಪ್ರದೇಶದಲ್ಲಿ 3 ಹೆಕ್ಟೇರ್ ಒಣಭೂಮಿ ಅಥವಾ ನೀರಾವರಿ ಭೂಮಿ ಹೊಂದಿರುವ ಕುಟುಂಬಗಳು, ನಗರ ಪ್ರದೇಶದಲ್ಲಿ 1000 ಚದರ ಅಡಿಗಿಂತಲೂ ಹೆಚ್ಚಿನ ವಿಸ್ತೀರ್ಣದ ಪಕ್ಕಾ ಮನೆಯನ್ನು ಸ್ವಂತವಾಗಿ ಹೊಂದಿರುವವರು ಮತ್ತು ಟ್ರ್ಯಾಕ್ಟರ್, ಮ್ಯಾಕ್ಸಿಕ್ಯಾಬ್, ಟ್ಯಾಕ್ಸಿ ಹೊಂದಿರುವ ಕುಟುಂಬಗಳ ವಾರ್ಷಿಕ ಆದಾಯ ₹1.20 ಲಕ್ಷಕ್ಕಿಂತಲೂ ಹೆಚ್ಚು ಇರುವ ಕುಟುಂಬಗಳು, ಒಂದೇ ಕುಟುಂಬದಲ್ಲಿದ್ದು, ಒಟ್ಟಿಗೆ ವಾಸಿಸುತ್ತಿದ್ದರೂ ಪ್ರತ್ಯೇಕ ಪಡಿತರ ಚೀಟಿ ಹೊಂದಿರುವವರು ಬಿಪಿಎಲ್ ಪಡಿತರ ಚೀಟಿಗಳನ್ನು ಹೊಂದಿರುವುದು ಕಾನೂನು ಬಾಹಿರವಾಗಿರುತ್ತದೆ’ ಎಂದು ಹೇಳಿದ್ದಾರೆ.

‘ಒಂದು ವೇಳೆ ವಾಪಸ್ ನೀಡದೇ ಹೋದಲ್ಲಿ ಕಾನೂನು ರೀತಿ ಕ್ರಮ ಕೈಗೊಳ್ಳಲಾಗುವುದು’ ಎಂದು ಜಿಲ್ಲಾಧಿಕಾರಿ ಎಚ್ಚರಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT