ಚನ್ನಗಿರಿ: ಇಲ್ಲಿನ ಸರ್ಕಾರಿ ಆರೋಗ್ಯ ಕೇಂದ್ರಕ್ಕೆ ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ ಭಾನುವಾರ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಹೊರ ಮತ್ತು ಒಳ ರೋಗಿಗಳ ವಿಭಾಗ ಹಾಗೂ ಆರೋಗ್ಯ ಕೇಂದ್ರದ ಶೌಚಾಲಯಗಳಿಗೆ ಭೇಟಿ ನೀಡಿ ಸ್ವಚ್ಛತೆ ಪರಿಶೀಲಿಸಿದರು.

‘ಒಳ ಚರಂಡಿ ವ್ಯವಸ್ಥೆ ಸ್ವಲ್ಪ ಹದಗೆಟ್ಟಿದೆ. ಇದನ್ನು ಕೂಡಲೇ ಸರಿಪಡಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಲಾಗಿದೆ. ಭಾನುವಾರ ರಜೆಯ ಕಾರಣ ಇಬ್ಬರು ವೈದ್ಯರು ಕಾರ್ಯ ನಿರ್ವಹಿಸುತ್ತಿದ್ದಾರೆ. ರೋಗಿಗಳಿಗೆ ಹೊರಗಡೆ ಔಷಧ ಖರೀದಿಸಲು ಚೀಟಿ ಬರೆದುಕೊಡಬಾರದು. ಅಗತ್ಯ ಔಷಧಿಗಳನ್ನು ದಾಸ್ತಾನು ಮಾಡಿಟ್ಟುಕೊಳ್ಳಬೇಕು. ಗುಣಮಟ್ಟದ ಚಿಕಿತ್ಸೆ ನೀಡಬೇಕು’ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.