ದಾವಣಗೆರೆ: ಎಸ್ಎಸ್ ವೈದ್ಯಕೀಯ ಮಹಾವಿದ್ಯಾಲಯದ ಚರ್ಮ ರೋಗ ವಿಭಾಗ, ಜೆ.ಜೆ.ಎಂ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ದಾವಣಗೆರೆ ಡರ್ಮಟಾಲಾಜಿಸ್ಟ್ ಅಸೋಸಿಯೇಷನ್ ಆಶ್ರಯದಲ್ಲಿ ನಗರದಲ್ಲಿ ಭಾನುವಾರ ರಾಜ್ಯಮಟ್ಟದ ಡರ್ಮಟೋಸರ್ಜರಿ ಕಾರ್ಯಾಗಾರ ನಡೆಯಿತು.

ಕಾರ್ಯಕ್ರಮದಲ್ಲಿ 100ಕ್ಕೂ ಹೆಚ್ಚು ಪ್ರತಿನಿಧಿಗಳು ಭಾಗವಹಿಸಿದ್ದರು. ಐಎಡಿವಿಎಲ್ನ ಅಧ್ಯಕ್ಷರಾದ ಡಾ.ಸವಿತಾ ಸೋಮಯ್ಯ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ಎಸ್ಎಸ್ ಇನ್ಸ್ಟಿಟ್ಯೂಟ್ನ ನಿರ್ದೇಶಕ ಡಾ.ಅರುಣ್ ಕುಮಾರ್ ಅಜ್ಜಪ್ಪ ಮಾತನಾಡಿ, ‘ಚರ್ಮರೋಗ ವಿಜ್ಞಾನವು ಇಂದಿನ ವೈದ್ಯಕೀಯ ಕ್ಷೇತ್ರದಲ್ಲಿ ವೇಗವಾಗಿ ಬೆಳೆಯುತ್ತಿದೆ. ಅತ್ಯಂತ ಬೇಡಿಕೆ ಇರುವ ವಿಭಾಗವಾಗಿದೆ’ ಎಂದು ಅಭಿಪ್ರಾಯಪಟ್ಟರು.

ನವೀನ ತಂತ್ರಜ್ಞಾನ ಹಾಗೂ ಮೊಡವೆ ಕಲೆಗಳ ಶಸ್ತ್ರಚಿಕಿತ್ಸೆಯ ಬಗ್ಗೆ ಉಪನ್ಯಾಸ, ಚರ್ಚೆ ನಡೆಯಿತು.

ಡಾ. ಮಂಜುನಾಥ್ ಹುಲ್ಮನಿ, ಡಾ.ಮಧುರ ಸಿ., ಡಾ. ಹರೀಶ್ ಪ್ರಸಾದ್, ಡಾ.ಶ್ರೇಣಿಕ್ ಬಳೆಗಾರ್ ಅವರು ಮಾತನಾಡಿದರು.

ಜೆಜೆಎಂ ವೈದ್ಯಕೀಯ ಮಹಾವಿದ್ಯಾಲಯದ ಡರ್ಮಟಾಲಜಿ ವಿಭಾಗದ ಮುಖ್ಯಸ್ಥ ಡಾ. ಸೂಗಾರೆಡ್ಡಿ, ದಾವಣಗೆರೆ ಡರ್ಮಟಲಜಿಸ್ಟ್ ಅಸೋಸಿಯೇಷನ್ ಅಧ್ಯಕ್ಷ ಡಾ.ವಿಶ್ವನಾಥ್ ಹಾಗೂ ಕಾರ್ಯದರ್ಶಿ ಡಾ. ರೂಪಾ ಎಂ.ಸಿ. ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260414-43-287208310

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.