ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಹೆಚ್ಚು ಉದ್ಯಾನಗಳನ್ನು ನಿರ್ಮಿಸಬೇಕು ಎಂದು ಶಾಸಕ ಸಮರ್ಥ್ ಶಾಮನೂರು ಸೂಚಿಸಿದರು.

ಮಹಾನಗರ ಪಾಲಿಕೆ ಸಭಾಂಗಣದಲ್ಲಿ ಸೋಮವಾರ ಅಧಿಕಾರಿಗಳೊಂದಿಗೆ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

‘ಪ್ರಗತಿಯಲ್ಲಿರುವ ಎಲ್ಲಾ ಕಾಮಗಾರಿಗಳ ವಿವರಗಳನ್ನು ಸಾರ್ವಜನಿಕರಿಗೆ ಅರ್ಥವಾಗುವ ರೀತಿಯಲ್ಲಿ ನೀಡಬೇಕು’ ಎಂದರು.

‘ಜಲಸಿರಿ ಕಾಮಗಾರಿಯಡಿ ಸಂಪರ್ಕ ಅಳವಡಿಸಿದ ಕೆಲವು ಮನೆಗಳಿಗೆ ದುಬಾರಿ ಮೊತ್ತದ ನೀರಿನ ಬಿಲ್ ಬರುತ್ತಿರುವುದರಿಂದ ನಾಗರಿಕರು ತೊಂದರೆ ಅನುಭವಿಸುತ್ತಿದ್ದಾರೆ. ಶಿವನಗರದಲ್ಲಿ ಜಲಸಿರಿ ಸಂಪರ್ಕ ಕಲ್ಪಿಸಲಾಗಿಲ್ಲ. ಜಲಸಿರಿ ಯೋಜನೆಯಲ್ಲಿನ ಸಮಸ್ಯೆ ಮತ್ತು ವಿಳಂಬದ ಕುರಿತು ಸಂಬಂಧಪಟ್ಟ ಅಧಿಕಾರಿಗಳು ವಿವರಣೆ ನೀಡಬೇಕು’ ಎಂದರು.

‘ಕುಡಿಯುವ ನೀರು, ಸ್ವಚ್ಛತೆ ಮತ್ತು ರಸ್ತೆಗಳಂತಹ ಮೂಲ ಸೌಕರ್ಯಗಳನ್ನು ಸಮರ್ಪಕವಾಗಿ ಕಲ್ಪಿಸಲು ಆದ್ಯತೆ ನೀಡಬೇಕು. ನಗರದಲ್ಲಿ ಪ್ರಗತಿಯಲ್ಲಿರುವ ಸ್ಮಾರ್ಟ್ ಸಿಟಿ ಕಾಮಗಾರಿಗಳನ್ನು ತ್ವರಿತವಾಗಿ ಮತ್ತು ಗುಣಮಟ್ಟದಿಂದ ಪೂರ್ಣಗೊಳಿಸಬೇಕು’ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

‘ಗಣೇಶ ಚತುರ್ಥಿ ವೇಳೆಗೆ ರಸ್ತೆಗಳಲ್ಲಿರುವ ವಿದ್ಯುತ್ ಕಂಬ, ತಂತಿಗಳನ್ನು ಸರಿಪಡಿಸಬೇಕು. ನಗರದಲ್ಲಿ ಏಕಕಾಲಕ್ಕೆ ವಿದ್ಯುತ್ ಕಡಿತಗೊಳಿಸಬಾರದು. ವಿದ್ಯುತ್ ತಂತಿಗಳನ್ನು ಸರಿಪಡಿಸಿಕೊಳ್ಳುವಾಗ ಮರಗಳನ್ನು ಕಡಿದು ಅಲ್ಲಿಯೇ ಬಿಡಬಾರದು, ವಿಲೇವಾರಿ ಮಾಡಬೇಕು’ ಎಂದು ಬೆಸ್ಕಾಂ ಅಧಿಕಾರಿಗಳಿಗೆ ಸೂಚಿಸಿದರು.

‘ಪೌರಕಾರ್ಮಿಕರ ಕೊರತೆ ಇರುವುದರಿಂದ ಕಸವಿಲೇವಾರಿ ಮಾಡಲು ಅನಾನುಕೂಲವಾಗುತ್ತಿದೆ’ ಎಂದು ಪಾಲಿಕೆ ಅಧಿಕಾರಿಗಳು ತಿಳಿಸಿದರು.

ಯೋಜನಾ ನಿರ್ದೇಶಕ ಕುಂದಗೋಳ, ಪಾಲಿಕೆ ಆಯುಕ್ತ ಮಹಾಂತೇಶ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260519-43-848629956

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.