ದಾವಣಗೆರೆ: ದಾವಣಗೆರೆ-ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ (ಧೂಡಾ) 2026-27ನೇ ಸಾಲಿನ ಆಯವ್ಯಯವನ್ನು ಅಧ್ಯಕ್ಷ ದಿನೇಶ್ ಕೆ.ಶೆಟ್ಟಿ ಅವರು ಗುರುವಾರ ಮಂಡಿಸಿದರು.

‘ಪ್ರಸಕ್ತ ಆರ್ಥಿಕ ವರ್ಷ ₹ 187 ಕೋಟಿ ಆದಾಯ ನಿರೀಕ್ಷಿಸಲಾಗಿದೆ. ಸಾಮಾನ್ಯ ಆಡಳಿತದ ನಿಶ್ಚಿತ ವೆಚ್ಚಗಳನ್ನು ಒಳಗೊಂಡಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ₹186 ಕೋಟಿ ಖರ್ಚು ಮಾಡಲಾಗುತ್ತಿದೆ. ಪ್ರಾಧಿಕಾರವು ₹ 1.02 ಕೋಟಿಗಳ ಉಳಿತಾಯ ಮಾಡಲಿದೆ’ ಎಂದು ದಿನೇಶ್ ಶೆಟ್ಟಿ ತಿಳಿಸಿದರು.

ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ವಿಡಿಯೊ ಕಾನ್ಫರೆನ್ಸ್ ಮೂಲಕ ಬಜೆಟ್ ಮಂಡನೆಯ ಸಭೆಯಲ್ಲಿ ಪಾಲ್ಗೊಂಡಿದ್ದರು. ಶಾಸಕ ಸಮರ್ಥ್ ಶಾಮನೂರು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಎಚ್.ಟಿ. ಶೇಖರ್, ‘ಧೂಡಾ’ ಸದಸ್ಯರಾದ ವಾಣಿ ಬಕ್ಕೇಶ್, ತಕ್ಕಡಿ ಮಂಜುನಾಥ್, ಜಬ್ಬರ್ ಖಾನ್, ಆಯುಕ್ತೆ ರೇಣುಕಾದೇವಿ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260522-43-1511205428

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.