ದಾವಣಗೆರೆ: ಜಿಲ್ಲೆಯ ಶಾಲೆ– ಕಾಲೇಜು, ಅಂಗನವಾಡಿ ಕೇಂದ್ರಗಳು, ಆಸ್ಪತ್ರೆ ಹಾಗೂ ಇನ್ನಿತರ ಕಡೆಗಳಲ್ಲಿ ನೀರು ನಿಂತ ಪ್ರದೇಶಗಳನ್ನು ಸ್ವಚ್ಛಗೊಳಿಸಿರುವ ಬಗ್ಗೆ ತಪ್ಪದೇ ವರದಿ ನೀಡಬೇಕು ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಸೋಮವಾರ ಆಯೋಜಿಸಿದ್ದ ಪಲ್ಸ್ ಪೋಲಿಯೊ, ಅಂತರ್ ಇಲಾಖಾ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

‘ಅಂಗನವಾಡಿ ಕೇಂದ್ರಗಳಲ್ಲಿ ಸೊಳ್ಳೆ ಪರದೆಯನ್ನು ಅಳವಡಿಸಬೇಕು. ಬಳಸುವ ನೀರಿಗೆ ಬೇವಿನ ಎಣ್ಣೆಯನ್ನು ಬೆರೆಸಬೇಕು. ವಿದ್ಯಾರ್ಥಿಗಳಿಗೆ ಒಡಮಸ್ ಹಚ್ಚಿಕೊಂಡು ಬರುವಂತೆ ತಿಳಿಸಬೇಕು. ಗ್ಯಾರೇಜ್ ಸುತ್ತಮುತ್ತ ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ಬಯೋಮೆಡಿಕಲ್ ತ್ಯಾಜ್ಯವನ್ನು ಸರಿಯಾಗಿ ನಿರ್ವಹಣೆ ಮಾಡಬೇಕು. ವೈದ್ಯರು ತಮಗೆ ನಿಯೋಜಿಸಿದ ಕರ್ತವ್ಯವನ್ನು ಸಾಮಾಜಿಕ ಕಳಕಳಿಯಿಂದ ಮಾಡಬೇಕು’ ಎಂದರು.

‘ಸಾಂಕ್ರಾಮಿಕ ರೋಗ ತಡೆಗೆ ಹೆಚ್ಚಿನ ಪ್ರಾಮುಖ್ಯತೆ ನೀಡಬೇಕು. ಮಳೆಗಾಲ ಪ್ರಾರಂಭವಾಗಿದ್ದು, ಮಲೇರಿಯಾ ಹರಡುವ ಕಾಲ ಇದಾಗಿದೆ. ಹೀಗಾಗಿ ನೀರು ನಿಲ್ಲದಂತೆ ನೋಡಿಕೊಳ್ಳಬೇಕು, ನೀರು ಹರಿದುಹೋಗುವ ಚರಂಡಿಗಳನ್ನು ಶುಚಿಗೊಳಿಸಬೇಕು, ಮಲೇರಿಯಾ ಹರಡದಂತೆ ಎಚ್ಚರ ವಹಿಸಬೇಕು’ ಎಂದು ಸೂಚಿಸಿದರು.

‘ಸೊಳ್ಳೆಪರದೆ ಉಪಯೋಗಿಸಬೇಕು. ಕಿಟಕಿಗಳಿಗೆ ಜಾಲರಿ ಹಾಕಿದರೆ ಮನೆಯೊಳಗೆ ಸೊಳ್ಳೆ ಬರುವುದನ್ನು ತಡೆಗಟ್ಟಬಹುದು. ಚರಂಡಿ ವ್ಯವಸ್ಥೆಯನ್ನು ಸರಿಪಡಿಸಿ ನೀರು ಸರಾಗವಾಗಿ ಹರಿಯುವಂತೆ ನೋಡಿಕೊಳ್ಳಬೇಕು. ಸೊಳ್ಳೆರಹಿತ ಓವರ್ ಹೆಡ್ ಟ್ಯಾಂಕ್ ಹಾಗೂ ಅಂಡರ್ ಗ್ರೌಂಡ್ ಟ್ಯಾಂಕ್ಗಳನ್ನು ನಿರ್ಮಿಸುವಂತೆ ಅಗತ್ಯವಾದ ನಿಯಮಾವಳಿಗಳನ್ನು ಜಾರಿಗೊಳಿಸಬೇಕು. ಅವುಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಎಚ್ಚರಿಸಬೇಕು. ವಾರಕೊಮ್ಮೆ ಸೊಳ್ಳೆನಾಶಕ ದ್ರಾವಣವನ್ನು ಸೊಳ್ಳೆ ಉತ್ಪತ್ತಿ ತಾಣಗಳಲ್ಲಿ ಸಿಂಪಡಿಸಬೇಕು’ ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಚ್.ಟಿ.ಶೇಖರ್, ಹೆಚ್ಚುವರಿ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್, ಜಿಲ್ಲಾ ಸರ್ಜನ್ ಡಾ.ನಾಗೇಂದ್ರಪ್ಪ, ಡಿಎಚ್ಒ ಡಾ.ಷಣ್ಮುಖಪ್ಪ, ಪಾಲಿಕೆ ಆಯುಕ್ತ ಮಹಾಂತೇಶ್ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260602-43-1374212848

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.