ದಾವಣಗೆರೆ: ವಿದ್ಯಾರ್ಥಿಗಳು ಆಯ್ಕೆ ಮಾಡಿಕೊಂಡ ಕ್ಷೇತ್ರ ಅತ್ಯುತ್ತಮವಾಗಿದ್ದರೆ ಮಾತ್ರ ಯಶಸ್ಸನ್ನು ನಿರೀಕ್ಷಿಸಬಹುದು ಎಂದು ಸ್ಪರ್ಧಾತ್ಮಕ ಪರೀಕ್ಷೆಗಳ ಮಾರ್ಗದರ್ಶಕ ಆರ್. ಸುರೇಶ್ ಶಾಸ್ತ್ರಿ ಅಭಿಪ್ರಾಯಪಟ್ಟರು.

ಇಲ್ಲಿನ ಬ್ರಾಹ್ಮಣ ವಿದ್ಯಾರ್ಥಿ ನಿಲಯದಲ್ಲಿ ಬ್ರಾಹ್ಮಣ ಸಮಾಜ ಸೇವಾ ಸಂಘದ ವತಿಯಿಂದ ಈಚೆಗೆ ನಡೆದ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಅವರು ಮಾತನಾಡಿದರು.

‘ವಿದ್ಯಾರ್ಥಿಗಳ ಅಭ್ಯಾಸ ಕ್ರಮ, ಗಟ್ಟಿ ಮತ್ತು ದೊಡ್ಡ ಕನಸುಗಳು ಅಗತ್ಯ. ಇಂತಹ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಲು ಸದಾ ಸಿದ್ಧ’ ಎಂದರು.

ಸಂಘದ ಅಧ್ಯಕ್ಷ ಎಂ.ಸಿ. ಶಶಿಕಾಂತ್ ‘ಸಾಮಾಜಿಕ ಜಾಲತಾಣದಲ್ಲಿ ಸಮಯ ವ್ಯರ್ಥ ಮಾಡದೆ ಓದಿನ ಕಡೆ ಹೆಚ್ಚಿನ ಗಮನ ಹರಿಸಿ’ ಎಂದು ಸಲಹೆ ನೀಡಿದರು.

ಎಸ್ಎಸ್ಎಲ್ಸಿಯಲ್ಲಿ ಶೇ 90 ಮತ್ತು ಪಿಯುಸಿಯಲ್ಲಿ ಶೇ 85 ಹಾಗೂ ಪದವಿ ಪರೀಕ್ಷೆಗಳಲ್ಲಿ ಶೇ 70 ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದ 42 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.

ಗೌರವ ಕಾರ್ಯದರ್ಶಿ ಎಸ್. ಗೋಪಾಲದಾಸ್, ಮುಖಂಡರಾದ ಎಲ್. ರಾಮಚಂದ್ರರಾವ್, ಭಾಸ್ಕರ್ ಭಟ್, ಎಸ್.ಪಿ. ಸತ್ಯನಾರಾಯಣರಾವ್, ಗಿರೀಶ್ ನಾಡಿಗ್, ಶೇಷಾಚಲ, ಉಮೇಶ್ ಕುಲಕರ್ಣಿ, ಎಚ್.ಎಸ್. ನಾಗರಾಜ್, ಭೀಮಾಶಂಕರ್ ಜೋಶಿ, ವಿಜಯ್ ಕುಮಾರ್ ಜೋಶಿ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260604-43-122474814

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.