ದಾವಣಗೆರೆ: ತಾಲ್ಲೂಕಿನ ಆನಗೋಡು ಗ್ರಾಮದ ಈದ್ಗಾ ಮೈದಾನದಲ್ಲಿ ಈದ್ ಉಲ್ ಫಿತ್ರ್ ಅಂಗವಾಗಿ ಸಾಮೂಹಿಕ ಪ್ರಾರ್ಥನೆಯಲ್ಲಿ ತೊಡಗಿದ್ದ ಮುಸ್ಲಿಂ ಸಮುದಾಯದವರ ಮೇಲೆ ಹೆಜ್ಜೇನು ದಾಳಿ ನಡೆಸಿವೆ.

ಘಟನೆಯಲ್ಲಿ ಮಕ್ಕಳೂ ಸೇರಿದಂತೆ 50 ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ.

ಗಂಭೀರವಾಗಿ ಗಾಯಗೊಂಡಿದ್ದ 11 ಜನರನ್ನು ಜಿಲ್ಲಾ ಚಿಗಟೇರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಮಾಯಕೊಂಡ ಶಾಸಕ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು.
.ಬೀದರ್ ಜಿಲ್ಲೆಯಾದ್ಯಂತ ಸಂಭ್ರಮದಿಂದ ಈದ್–ಉಲ್–ಫಿತ್ರ್ ಆಚರಣೆ.ಕಲಬುರಗಿ ಜಿಲ್ಲೆಯಾದ್ಯಂತ ಈದ್ ಉಲ್ ಫಿತ್ರ್ ಹಬ್ಬದ ಸಂಭ್ರಮ.
ಈದ್ಗಾ ಮೈದಾನದಲ್ಲಿ ಭದ್ರತೆಗೆ ನಿಯೋಜಿಸಿದ್ದ ಎಎಸ್ ಐ ನಾರಪ್ಪ, ಮೂವರು ಸಿಬ್ಬಂದಿ ಹಾಗೂ ಸಾರ್ವಜನಿಕರೂ ಗಾಯಗೊಂಡಿದ್ದಾರೆ.

ಜಿಲ್ಲಾ ಆಸ್ಪತ್ರೆಗೆ ದಾಖಲಾಗಿರುವ ಮೂವರು ಮಕ್ಕಳು ಸೇರಿದಂತೆ 11 ಜನರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹೃದಯ ಸಂಬಂಧಿತ ಸಮಸ್ಯೆಯಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರಿಗೆ ಮಾತ್ರ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಎಲ್ಲರ ಆರೋಗ್ಯವೂ ಸ್ಥಿರವಾಗಿದೆ ಎಂದು ಜಿಲ್ಲಾ ಆಸ್ಪತ್ರೆಯ ಅಧೀಕ್ಷಕ ಎಂ.ಬಿ.ನಾಗೇಂದ್ರಪ್ಪ 'ಪ್ರಜಾವಾಣಿ'ಗೆ ತಿಳಿಸಿದರು.
.ಗುರುದೇವ ರವಿಶಂಕರ್ ಬರಹ: ನವರಾತ್ರಿ ಮತ್ತು ನಮ್ಮೊಳಗಿರುವ ಸಪ್ತಮಾತೃಕಾ ಶಕ್ತಿಗಳು.ಎಡೆದೊರೆ ನಾಡಿನಲ್ಲಿ ಈದ್ ಉಲ್ ಫಿತ್ರ್ ಸಂಭ್ರಮ: ಬಿಸಿಲಲ್ಲೇ ಸಾಮೂಹಿಕ ಪ್ರಾರ್ಥನೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.