ದಾವಣಗೆರೆ: ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಮತದಾನದ ಪ್ರಮಾಣವನ್ನು ಹೆಚ್ಚಿಸಲು ಜಿಲ್ಲಾ ಸ್ವೀಪ್ ಸಮಿತಿಯಿಂದ ಹೈಸ್ಕೂಲ್ ಮೈದಾನದಲ್ಲಿ ಮಂಗಳವಾರ ಜುಂಬಾ ಡಾನ್ಸ್ ಕಾರ್ಯಕ್ರಮ ನಡೆಯಿತು.

ಜಿಲ್ಲಾ ಪಂಚಾಯಿತಿ ಸಿಇಒ ಗಿತ್ತೆ ಮಾಧವ ವಿಠ್ಠಲರಾವ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ನಂತರ ಮಾತನಾಡಿದ ಅವರು, ‘ಮತದಾರರಲ್ಲಿ ಅರಿವು ಮೂಡಿಸುವ ಮೂಲಕ ಈ ಬಾರಿ ದಾಖಲೆ ಪ್ರಮಾಣದ ಮತದಾನ ಮಾಡಿಸುವ ಗುರಿಯನ್ನು ಜಿಲ್ಲಾಡಳಿತ ಹೊಂದಿದೆ. ಮತದಾರರನ್ನು ಪ್ರೇರೇಪಿಸಲು ಸಮಿತಿಯು ಪ್ರತಿದಿನ ವಿಭಿನ್ನ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ. ಪ್ರಮುಖವಾಗಿ ಈಗಾಗಲೇ ನಗರದ ಪ್ರಮುಖ ರಸ್ತೆಗಳಲ್ಲಿ ಬೈಕ್ ರ್ಯಾಲಿ ಮತ್ತು ಜನಜಾಗೃತಿ ಜಾಥಾಗಳನ್ನು ಯಶಸ್ವಿಯಾಗಿ ನಡೆಸಲಾಗಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಅಧಿಕಾರಿಗಳು, ಸಿಬ್ಬಂದಿ, ನಾಗರಿಕರು ಡಾನ್ಸ್ ಮಾಡಿ ಸಂಭ್ರಮಿಸಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಮಮತಾ ಗೌಡರ್, ಮುಖ್ಯ ಯೋಜನಾ ನಿರ್ದೇಶಕ ಮಲ್ಲಾ ನಾಯ್ಕ, ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಮತದಾನ ಜಾಗೃತಿ ಮೂಡಿಸಲು ಮಾರ್ಚ್ 25ರಂದು ಬೆಳಿಗ್ಗೆ 7 ಗಂಟೆಗೆ ನಗರದ ಹೈಸ್ಕೂಲ್ ಮೈದಾನದಿಂದ ಸೈಕಲ್ ಜಾಥಾ ಆಯೋಜಿಸಲಾಗಿದೆ. ಗಡಿಯಾರ ಕಂಬ - ಬಿಎಸ್ಸಿ ಅಂಗಡಿ- ದುರ್ಗಾಂಬಿಕಾ ದೇವಸ್ಥಾನ- ಹೊಂಡ ಸರ್ಕಲ್- ಜಾಲಿ ನಗರ- ಶಿವಾಜಿ ಸರ್ಕಲ್- ಕೋರ್ಟ್ ರಸ್ತೆ ಮೂಲಕ ಸಾಗಿ ರೈಲ್ವೆ ನಿಲ್ದಾಣದಲ್ಲಿ ಜಾಥಾ ಅಂತ್ಯಗೊಳ್ಳಲಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260325-44-1215026800

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.