ದಾವಣಗೆರೆ: ‘ವಿದ್ಯುತ್ ವಿತರಣಾ ವ್ಯವಸ್ಥೆಯನ್ನು 19 ಜಿಲ್ಲೆಗಳಲ್ಲಿ ಖಾಸಗಿಯವರಿಗೆ ವಹಿಸುತ್ತಿರುವ ಸರ್ಕಾರದ ನಡೆ ಹಾಗೂ ಚುನಾವಣಾ ಆಯೋಗ ಹಮ್ಮಿಕೊಂಡಿರುವ ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ವಿಧಾನವನ್ನು ವಿರೋಧಿಸಿ ನಗರದಲ್ಲಿ ಮೇ 30ರ ಶನಿವಾರ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ’ ಎಂದು ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯ ಘಟಕದ ಉಪಾಧ್ಯಕ್ಷ ಹೊನ್ನೂರು ಮುನಿಯಪ್ಪ ಹೇಳಿದರು.

‘ಬೆಳಿಗ್ಗೆ 11.30ಕ್ಕೆ ಜಯದೇವ ವೃತ್ತದಲ್ಲಿ ವಿವಿಧ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟಿಸಲಾಗುವುದು’ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

‘ವಿದ್ಯುತ್ ವಲಯವು ಖಾಸಗಿಯವರ ಹಿಡಿತಕ್ಕೆ ಸಿಕ್ಕರೆ ಭಾಗ್ಯಜ್ಯೋತಿ, ಕುಟೀರ ಜ್ಯೋತಿ ಯೋಜನೆಗಳು ರದ್ದಾಗುವ ಸಂಭವವಿದೆ. ಎಲ್ಲ ನೌಕರರು ಕೆಲಸ ಕಳೆದುಕೊಳ್ಳುವ ಸಂಭವವಿದೆ. ಯಾವ ಕಾರಣಕ್ಕೂ ಸರ್ಕಾರ ವಿದ್ಯುತ್ ಖಾಸಗೀಕರಣಕ್ಕೆ ಮುಂದಾಗಬಾರದು’ ಎಂದು ಒತ್ತಾಯಿಸಿದರು.

‘ಸರ್ಕಾರವು ರೈತರಿಗೆ ಮಳೆ ಹಾನಿ ಪರಿಹಾರ ನೀಡಿಲ್ಲ. ಭತ್ತದ ಖರೀದಿ ಕೇಂದ್ರಗಳನ್ನು ತೆರೆದಿಲ್ಲ. ಗೊಬ್ಬರ ಹಾಗೂ ಬಿತ್ತನೆ ಬೀಜಗಳು ಮಾರುಕಟ್ಟೆ ದರಕ್ಕಿಂತ ₹400 ಹೆಚ್ಚು ಬೆಲೆಗೆ ಕಾಳಸಂತೆಯಲ್ಲಿ ಮಾರಾಟವಾಗುತ್ತಿದ್ದು, ರೈತರಿಗೆ ಸಮರ್ಪಕವಾಗಿ ದೊರೆಯುತ್ತಿಲ್ಲ’ ಎಂದು ದೂರಿದರು.

‘ದೇಶದ ಜನರನ್ನು ಮತದಾನದ ಹಕ್ಕಿನಿಂದ ವಂಚಿತರನ್ನಾಗಿಸುವ ಉದ್ದೇಶದಿಂದ ಎಸ್ಐಆರ್ ಜಾರಿ ಮಾಡಲಾಗಿದ್ದು, ಮತದಾರರ ಪಟ್ಟಿ ಪರಿಷ್ಕರಣೆ ವಸ್ತುನಿಷ್ಠವಾಗಿರಲಿ’ ಎಂದು ಮುಖಂಡ ಮಧು ತೊಗಲೇರಿ ಹೇಳಿದರು.

‘ಬೆಂಬಲ ಬೆಲೆ ನೀಡಲು ಅನುಸರಿಸುತ್ತಿರುವ ‘ಸಿ2+50%’ ಮಾನದಂಡಕ್ಕಿಂತ ಕಡಿಮೆ ದರವನ್ನು ನಿಗದಿಪಡಿಸಲಾಗುತ್ತಿದೆ’ ಎಂದು ಆಕ್ಷೇಪಿಸಿದರು.

ರೈತ ಸಂಘದ ಜಿಲ್ಲಾ ಘಟಕದ ಉಪಾಧ್ಯಕ್ಷ ಪಿ.ಪಿ. ಮರುಳಸಿದ್ದಪ್ಪ, ವಿವಿಧ ಸಂಘಟನೆಗಳ ಮುಖಂಡರಾದ ಆವರಗೆರೆ ಉಮೇಶ್, ಮಧು ತೊಗಲೇರಿ, ಕೆ.ಟಿ.ಗಣೇಶ್, ಬಿ. ಗಣೇಶಾಚಾರ್, ಲಕ್ಷ್ಮಣ್ ಹಾಗೂ ಸತೀಶ್ ಅರವಿಂದ್, ಸಂತೋಷ್ ನಾಯ್ಕ ಕಬ್ಬಳ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260530-43-216063841

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.