ದಾವಣಗೆರೆ: ವೈಜ್ಞಾನಿಕ ಪ್ರಗತಿ ಸದಾ ಸಾರ್ವಜನಿಕ ಹಿತಾಸಕ್ತಿ ಮತ್ತು ಮಾನವೀಯ ಮೌಲ್ಯಗಳಿಂದ ಕೂಡಿರಬೇಕು. ಜ್ಞಾನವನ್ನು ವಿನಯ, ಪ್ರಾಮಾಣಿಕತೆ ಹಾಗೂ ಸಹಾನುಭೂತಿಯೊಂದಿಗೆ ಬಳಸಬೇಕು. ತಂತ್ರಜ್ಞಾನವು ಮಾನವತೆಗೆ ಸೇವೆ ಸಲ್ಲಿಸಬೇಕು ಎಂದು ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಸಲಹೆ ನೀಡಿದರು.

ಇಲ್ಲಿನ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಬಿಡಿಟಿ ಕಾಲೇಜಿನ ಅಮೃತ ಮಹೋತ್ಸವ ಸಮಾರಂಭವನ್ನು ಶುಕ್ರವಾರ ಉದ್ಘಾಟಿಸಿ ಅವರು ಮಾತನಾಡಿದರು.

‘ಭಾರತವು ತಂತ್ರಜ್ಞಾನ, ನಾವೀನ್ಯತೆ ಮತ್ತು ಯುವಶಕ್ತಿಯಿಂದ ಪ್ರೇರಿತವಾದ ಪರಿವರ್ತನಾ ಯುಗಕ್ಕೆ ಸಾಕ್ಷಿಯಾಗುತ್ತಿದೆ. ಡಿಜಿಟಲ್ ಇಂಡಿಯಾ, ಮೇಕ್ಇನ್ ಇಂಡಿಯಾ, ಸ್ಟಾರ್ಟ್ಅಪ್ ಇಂಡಿಯಾ, ಸ್ಕಿಲ್ ಇಂಡಿಯಾ, ಸೆಮಿಕಂಡಕ್ಟರ್ ತಯಾರಿಕೆ, ಹಸಿರು ಇಂಧನ ಮತ್ತು ಆತ್ಮನಿರ್ಭರ ಭಾರತದಂತಹ ಯೋಜನೆಗಳು ಯುವ ಎಂಜಿನಿಯರ್ಗಳು ಹಾಗೂ ಉದ್ಯಮಿಗಳಿಗೆ ಅಪೂರ್ವ ಅವಕಾಶಗಳನ್ನು ಸೃಷ್ಟಿಸುತ್ತಿವೆ’ ಎಂದರು.

ಸಂಶೋಧನೆ ಮತ್ತು ನಾವೀನ್ಯತೆಯನ್ನು ಬಲಪಡಿಸುವಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಬಿಡಿಟಿ ಕಾಲೇಜು ಪ್ರಯತ್ನಗಳನ್ನು ಶ್ಲಾಘಿಸಿದ ಅವರು, ಅಖಿಲ ಭಾರತೀಯ ತಾಂತ್ರಿಕ ಶಿಕ್ಷಣ ಪರಿಷತ್ತಿನ (ಎಐಸಿಟಿಇ) ಐಡಿಯಾ ಲ್ಯಾಬ್, ಡ್ರೋನ್ ತಂತ್ರಜ್ಞಾನ ಪ್ರಯೋಗಾಲಯ ಮತ್ತು ಕಾಲೇಜು ನಿರ್ಮಿಸಿರುವ ಉನ್ನತ ಸಂಶೋಧನಾ ಮೂಲಸೌಕರ್ಯಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

‘ಅಮೃತ ಮಹೋತ್ಸವವು ಪರಂಪರೆ ಮತ್ತು ಭವಿಷ್ಯದ ಆಶಯಗಳ ಆಚರಣೆಯಾಗಿದೆ. ಸಂಸ್ಥೆಯ 75 ವರ್ಷಗಳ ಪಯಣವು ದೃಷ್ಟಿಕೋನ, ಪರಿಶ್ರಮ, ಶೈಕ್ಷಣಿಕ ಶ್ರೇಷ್ಠತೆ ಮತ್ತು ಸಮಾಜಸೇವೆಯ ಪ್ರತಿಬಿಂಬವಾಗಿದೆ. ದೂರದೃಷ್ಟಿಯ ಸಂಸ್ಥಾಪಕರು, ಬದ್ಧತೆ ಹೊಂದಿದ ಪ್ರಾಧ್ಯಾಪಕರು, ಸಮರ್ಪಿತ ಆಡಳಿತಗಾರರು, ವಿದ್ಯಾರ್ಥಿಗಳ ಕೊಡುಗೆಗಳಿಂದ ಶ್ರೇಷ್ಠ ಸಂಸ್ಥೆಯಾಗಿ ರೂಪುಗೊಂಡಿದೆ’ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

‘ಬ್ರಹ್ಮಪ್ಪ ಮತ್ತು ದೇವೇಂದ್ರಪ್ಪ ತವನಪ್ಪ ಅವರ ದೂರದೃಷ್ಟಿಯ ದಾನಶೀಲತೆಯು ಕಾಲೇಜು ಆರಂಭಕ್ಕೆ ಬುನಾದಿಯಾಗಿದೆ. ಮೈಸೂರು ಸಂಸ್ಥಾನದ ಅರಸರಾಗಿದ್ದ ಜಯಚಾಮ ರಾಜೇಂದ್ರ ಒಡೆಯರ್ ಕಾಲೇಜು ಸ್ಥಾಪನೆಗೆ ನೀಡಿದ ನೆರವು ಸ್ಮರಣೀಯ. ಸ್ವಾತಂತ್ರ್ಯ ಸಿಕ್ಕ ಬಳಿಕ ರಾಜ್ಯದಲ್ಲಿ ಸ್ಥಾಪನೆಯಾದ ಮೊದಲ ಸರ್ಕಾರಿ ತಾಂತ್ರಿಕ ಕಾಲೇಜು ಎಂಬ ಹೆಗ್ಗಳಿಕೆ ಕೂಡ ಇದಕ್ಕಿದೆ. ಇಂತಹ ಸಂಸ್ಥೆಗಳು ಶಿಕ್ಷಣ ಮತ್ತು ರಾಷ್ಟ್ರ ನಿರ್ಮಾಣಕ್ಕೆ ಹಾಗೂ ಯುವ ತಲೆಮಾರುಗಳಿಗೆ ಸ್ಫೂರ್ತಿ ನೀಡಿವೆ’ ಎಂದರು.

ರಾಜ್ಯಪಾಲ ಥಾವರ ಚಂದ್ ಗೆಹಲೋತ್, ‘ರಾಷ್ಟ್ರದ ಪ್ರಗತಿಯು ಶಿಕ್ಷಣ ಸಂಸ್ಥೆಗಳ ಗುಣಮಟ್ಟ ಆಧಾರಿಸಿದೆ. ಎಂಜಿನಿಯರಿಂಗ್ ಕಾಲೇಜುಗಳು ತಾಂತ್ರಿಕ ಶಿಕ್ಷಣದ ಜೊತೆಗೆ ಹೊಸ ಆವಿಷ್ಕಾರ, ಸಂಶೋಧನೆ, ನಾಯಕತ್ವ ಮತ್ತು ಸಮಾಜ ಸೇವೆಯಂತಹ ಮನೋಭಾವ ಬೆಳೆಸುತ್ತವೆ. ಶಿಕ್ಷಣ, ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಕರ್ನಾಟಕ ದೇಶದಲ್ಲೇ ಮುಂಚೂಣಿ ಯಲ್ಲಿದೆ’ ಎಂದು ಶ್ಲಾಘಿಸಿದರು.

‘ಯುಬಿಡಿಟಿ ಕಾಲೇಜು ಏಳು ದಶಕಗಳಿಗಿಂತ ಹೆಚ್ಚು ಅವಧಿಯಲ್ಲಿ ಸಾವಿರಾರು ಎಂಜಿನಿಯರ್ಗಳು, ವಿಜ್ಞಾನಿಗಳು ಹಾಗೂ ಆಡಳಿತಗಾರರನ್ನು ರೂಪಿಸಿದೆ. ಈ ಪದವೀಧರರು ದೇಶ ಮತ್ತು ವಿದೇಶಗಳಲ್ಲಿದ್ದಾರೆ. ಕೃತಕ ಬುದ್ಧಿಮತ್ತೆ (ಎ.ಐ), ಮಷಿನ್ ಲರ್ನಿಂಗ್, ಹಸಿರು ತಂತ್ರಜ್ಞಾನ, ಸೈಬರ್ ಭದ್ರತೆ, ಸೆಮಿಕಂಡಕ್ಟರ್ ಮತ್ತು ಡಿಜಿಟಲ್ ಅನ್ವೇಷಣೆಯಂತಹ ಕ್ಷೇತ್ರಗಳಲ್ಲಿ ಭಾರತವು ಜಗತ್ತನ್ನು ಮುನ್ನಡೆಸುವ ಸಾಮರ್ಥ್ಯವನ್ನು ಹೊಂದಿದೆ’ ಎಂದರು.

ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಡಾ.ಪ್ರಭಾ ಮಲ್ಲಿಕಾರ್ಜುನ್, ರಾಷ್ಟ್ರೀಯ ಆಹಾರ ತಂತ್ರಜ್ಞಾನ, ಉದ್ಯಮಶೀಲತೆ ಮತ್ತು ನಿರ್ವಹಣಾ ಸಂಸ್ಥೆಯ ಆಡಳಿತ ಮಂಡಳಿ ಅಧ್ಯಕ್ಷ ಪ್ರೊ.ಟಿ.ಜಿ. ಸೀತಾರಾಂ, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕುಲಪತಿ ಎಸ್. ವಿದ್ಯಾಶಂಕರ್ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260530-43-732299091

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.