ದಾವಣಗೆರೆ: ‘ಪರಿಸರ ಸಂರಕ್ಷಣೆ ಮತ್ತು ಸುಸ್ಥಿರ ಜೀವನಶೈಲಿ ಅಳವಡಿಸಿಕೊಂಡಿರುವ ನಾಗರಿಕರಿಗೆ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿ ಉತ್ತೇಜನ ನೀಡಲಿದೆ’ ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ತಿಳಿಸಿದರು.

ಇಲ್ಲಿನ ಶಿವಕುಮಾರಸ್ವಾಮಿ ಬಡಾವಣೆಯಲ್ಲಿರುವ ಮಹಾನಗರ ಪಾಲಿಕೆಯ ಎಂಜಿನಿಯರ್ ಉದಯ್ಕುಮಾರ್ ಮನೆಗೆ ಬುಧವಾರ ಭೇಟಿ ನೀಡಿ ಪರಿಸರ ಸ್ನೇಹಿ ಚಟುವಟಿಕೆಗಳನ್ನು ವೀಕ್ಷಿಸಿ ಮಾತನಾಡಿದರು.

‘ಮಳೆ ನೀರು ಸಂಗ್ರಹ, ಸೌರಶಕ್ತಿ ಅಳವಡಿಕೆ ಹಾಗೂ ತ್ಯಾಜ್ಯ ವಿಂಗಡಣೆ ಯಂತಹ ಮಾದರಿ ಕಾರ್ಯಗಳನ್ನು ಮಾಡುತ್ತಿರುವ ನಾಗರಿಕರ ಮನೆಗಳಿಗೆ ಖುದ್ದು ಭೇಟಿ ನೀಡಿ ಪರಿಶೀಲಿಸಲಾಗುವುದು. ಇಂತಹ ಮೂರು ಮನೆಗಳಿಗೆ ಈಗಾಗಲೇ ಭೇಟಿ ನೀಡಲಾಗಿದೆ’ ಎಂದರು.

‘ಉದಯ್ ಕುಮಾರ್ ಅವರು ಮನೆಯಲ್ಲಿ ಹಣ್ಣು ಮತ್ತು ತರಕಾರಿ ತೋಟ ವನ್ನು ಬೆಳೆಸಿದ್ದಾರೆ. ಈ ತೋಟದಲ್ಲಿ ಕರಿಬೇವು, ಮಾವಿನಕಾಯಿ, ಡ್ರ್ಯಾಗನ್ ಫ್ರೂಟ್, ಸೀಬೆಕಾಯಿ, ಸ್ಟಾರ್ ಫ್ರೂಟ್, ನುಗ್ಗೆಕಾಯಿ ಹಾಗೂ ಸೇಬು ಮತ್ತು ದ್ರಾಕ್ಷಿ ಗಿಡಗಳಿವೆ. ಮಳೆ ನೀರು ಸಂಗ್ರಹ ಹಾಗೂ ಪ್ಲಾಸ್ಟಿಕ್ ಮುಕ್ತ ಪರಿಸರ ನಿರ್ಮಾಣಕ್ಕೆ ಆದ್ಯತೆ ನೀಡಲಾಗಿದೆ’ ಎಂದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗಿತ್ತೆ ಮಾಧವ ವಿಠ್ಠಲರಾವ್, ನೆಲ-ಜಲ ಸಂರಕ್ಷಣಾ ಸಮಿತಿಯ ಬಲ್ಲೂರು ರವಿಕುಮಾರ್ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260507-43-773696171

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.