ಭಾನುವಾರ, 14 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹರಿಹರ: ನದಿ ತೀರದಲ್ಲಿ ನಿಷೇಧಾಜ್ಞೆ ಜಾರಿ

ನದಿಯಿಂದ ಜಮೀನಿಗೆ ನೀರು ಹರಿಸದಂತೆ ಸೂಚನೆ
Published 21 ಫೆಬ್ರುವರಿ 2024, 15:52 IST
Last Updated 21 ಫೆಬ್ರುವರಿ 2024, 15:52 IST
ಅಕ್ಷರ ಗಾತ್ರ

ಹರಿಹರ: ಮೈಲಾರ ಲಿಂಗೇಶ್ವರ ಸ್ವಾಮಿ ಜಾತ್ರಾ ಮಹೋತ್ಸವಕ್ಕೆ ಬರುವ ಭಕ್ತಾದಿಗಳಿಗೆ ಹಾಗೂ ವಿವಿಧ ತಾಲ್ಲೂಕುಗಳ ಕುಡಿಯುವ ನೀರಿನ ಸಲುವಾಗಿ ಭದ್ರಾ ಜಲಾಶಯದಿಂದ ತುಂಗಭದ್ರಾ ನದಿಗೆ ನೀರು ಹರಿಸಲಾಗುತ್ತಿದೆ.

ಕುಡಿಯುವ ನೀರಿನ ತೊಂದರೆ ಇರುವುದರಿಂದ ಹರಿಹರ ತಾಲ್ಲೂಕಿನ ರೈತರು ಪಂಪ್‌ಸೆಟ್‌ಗಳ ಮೂಲಕ ನದಿಯಿಂದ ಜಮೀನಿಗೆ ನೀರು ಹರಿಸುವುದನ್ನು ನಿಷೇಧಿಸಿದೆ. ರೈತರು ಜಮೀನಿಗೆ ನೀರು ಹರಿಸಲೆಂದು ನದಿಗೆ ಅಳವಡಿಸಿರುವ ಅಕ್ರಮ ಪಂಪ್‌ಸೆಟ್‌ಗಳ ತೆರವು ಕಾರ್ಯವೂ ನಡೆಯುತ್ತಿದೆ. ಇದಕ್ಕಾಗಿ ತಾಲ್ಲೂಕಿನ ನದಿ ತೀರದಲ್ಲಿ 144 ಕಲಂ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿದೆ ಎಂದು ತಹಶೀಲ್ದಾರ್ ಗುರುಬಸವರಾಜ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT