ದಾವಣಗೆರೆ: ಯೂರಿಯಾ ಸೇರಿದಂತೆ ರಸಗೊಬ್ಬರವನ್ನು ರೈತರು ಮಿತವಾಗಿ ಬಳಕೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಸಲಹೆ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ನಡೆದ ಜಿಲ್ಲಾ ಮಟ್ಟದ ರಸಗೊಬ್ಬರ ಮತ್ತು ಬಿತ್ತನೆ ಬೀಜ ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಯೂರಿಯಾ ರಸಗೊಬ್ಬರವನ್ನು ಯಥೇಚ್ಛವಾಗಿ ಬಳಕೆ ಮಾಡುವುದರಿಂದ ಬೆಳೆಗಳಿಗೆ ಕೀಟ, ರೋಗ ಬಾಧೆ ಹೆಚ್ಚಾಗುತ್ತದೆ. ಜನರಿಗೆ ಕ್ಯಾನ್ಸರ್ ಸೇರಿದಂತೆ ಇತರ ಕಾಯಿಲೆ ಬರುವ ಸಾಧ್ಯತೆ ಹೆಚ್ಚು. ರಸಗೊಬ್ಬರದ ಮಿತ ಬಳಕೆಯತ್ತ ರೈತರು ಗಮನ ಹರಿಸಬೇಕು’ ಎಂದು ಮನವಿ ಮಾಡಿದರು.

‘ಜಿಲ್ಲೆಯಲ್ಲಿ ಮುಂಗಾರು ಪೂರ್ವ ಮಳೆಯಾಗುತ್ತಿದ್ದು, ಈವರೆಗೆ 43.9 ಮಿ.ಮೀ. ಮಳೆಯಾಗಿದೆ. ರೈತರು ಭೂಮಿ ಹದ ಮಾಡಿಕೊಳ್ಳುವ ಚಟುವಟಿಕೆಗಳು ನಡೆಯುತ್ತಿವೆ. ಅಗತ್ಯಕ್ಕೆ ತಕ್ಕಷ್ಟು ರಸಗೊಬ್ಬರ ಹಾಗೂ ಬಿತ್ತನೆ ಬೀಜದ ದಾಸ್ತಾನು ಇದೆ. ಉತ್ತಮ ಇಳುವರಿ ಪಡೆಯುವಲ್ಲಿ ಉತ್ತಮ ಗುಣಮಟ್ಟದ ಬಿತ್ತನೆ ಬೀಜಗಳ ಜೊತೆಗೆ ರಸಗೊಬ್ಬರಗಳ ಮಿತವಾದ ಬಳಕೆ ಅವಶ್ಯಕ’ ಎಂದರು.

‘ಮಧ್ಯಪ್ರಾಚ್ಯದ ಯುದ್ಧದಿಂದಾಗಿ ವ್ಯತ್ಯಯವಾಗುವುದರಿಂದ ಏಕದಳ ಧಾನ್ಯಗಳ ಬದಲಾಗಿ ಸೋಯಾಬೀನ್, ಸೂರ್ಯಕಾಂತಿ, ನೆಲೆಗಡಲೆಯಂತಹ ಎಣ್ಣೆಕಾಳು ಬೆಳೆಗಳನ್ನು ಹಾಗೂ ಸೋಯಾ ತೊಗರಿ, ಅವರೆ, ಅಲಸಂದೆ, ಹೆಸರು, ಉದ್ದಿನ ದ್ವಿದಳ ಧಾನ್ಯಗಳನ್ನು ಬೆಳಯಬೇಕು. ಮೆಕ್ಕೆಜೋಳದ ಬದಲಾಗಿ ರಾಗಿ, ಜೋಳ ಹೆಚ್ಚಾಗಿ ಬೆಳೆಯಬೇಕು’ ಎಂದು ಹೇಳಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಎಚ್.ಟಿ.ಶೇಖರ್, ‘ರಸಗೊಬ್ಬರ ಮಾರಾಟಗಾರರು ನಕಲಿ ಆ್ಯಪ್ಗಳಿಗೆ ಮಾರುಹೋಗಬಾರದು. ಅಧಿಕೃತ ‘ಕೆ-ಕಿಸಾನ್’ ತಂತ್ರಾಂಶದ ಮೂಲಕ ಮಾರಾಟ ಮಾಡಬೇಕು. ಚಿಲ್ಲರೆ ರಸಗೊಬ್ಬರ ಮಾರಾಟಗಾರರು, ಬಿತ್ತನೆ ಬೀಜ ಹಾಗೂ ಕೀಟನಾಶಕ ಮಾರಾಟ ಮಳಿಗೆಗಳಿಗೆ ಪೊಲೀಸ್ ಬ್ಯಾರಿಕೇಡ್ಗಳನ್ನು ಅಳವಡಿಸಲು ಕಾಯದೇ ಸೂಕ್ತ ಭದ್ರತಾ ವ್ಯವಸ್ಥೆ ಹಾಗೂ ಸಿಸಿಟಿವಿ ಕ್ಯಾಮೆರಾ ವ್ಯವಸ್ಥೆ ಮಾಡಿಕೊಳ್ಳಬೇಕು’ ಎಂದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗಿತ್ತೆ ಮಾಧವ ವಿಠ್ಠಲರಾವ್, ಜಂಟಿ ಕೃಷಿ ನಿರ್ದೇಶಕ ಜಿಯಾವುಲ್ಲಾ ಮಾತನಾಡಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260515-43-27562602

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.