ಮಲೇಬೆನ್ನೂರು: ರೈತರು ಪಡೆದ ಕೃಷಿ ಹಾಗೂ ನಿಗದಿತ ಅವಧಿಯ ಸಾಲ ವಸೂಲಾತಿಗೆ ಬ್ಯಾಂಕ್ ತೆಗೆದುಕೊಂಡ ಕ್ರಮವನ್ನು ವಿರೋಧಿಸಿ ಸಮೀಪದ ನಂದಿತಾವರೆ ಗ್ರಾಮದ ಕರ್ನಾಟಕ ಗ್ರಾಮೀಣ ಬ್ಯಾಂಕ್ ಎದುರು ಸೋಮವಾರ ರೈತರು ಪ್ರತಿಭಟನೆ ನಡೆಸಿದರು.

ರೈತರ ಬೆಳೆಸಾಲ ವಸೂಲು ಮಾಡಲು ಕಾನೂನಿನಲ್ಲಿ ಅವಕಾಶ ಇಲ್ಲ ಎಂದು ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಜಿಲ್ಲಾ ಘಟಕದ ಅಧ್ಯಕ್ಷ ಹಾಳೂರು ನಾಗರಾಜ್ ಕಿಡಿಕಾರಿದರು.

ಸಾಲ ನೀಡಿದ ಬ್ಯಾಂಕ್ ನ್ಯಾಯಾಧೀಕರಣದ ಆದೇಶದಂತೆ ಹೊಲ ಹರಾಜು ಹಾಕಿ ಬಲವಂತವಾಗಿ ವಸೂಲಾತಿ ಮಾಡಲು ಮುಂದಾಗಿರುವ ಕ್ರಮವನ್ನು ಪ್ರತಿಭಟನಕಾರರು ಖಂಡಿಸಿದರು. ಬೆಳೆಸಾಲ ವಸೂಲು ಕಾನೂನು ಕುರಿತು ಲಿಖಿತ ದಾಖಲೆ ನೀಡುವಂತೆ ಆಗ್ರಹಿಸಿದರು.

ಸ್ಥಳಕ್ಕೆ ರೈತ ಮುಖಂಡ ತೇಜಸ್ವಿ ಪಟೇಲ್ ಭೇಟಿ ನೀಡಿದ್ದರು. ಬ್ಯಾಂಕ್ ಅಧಿಕಾರಿಗಳೊಂದಿಗೆ ಚರ್ಚಿಸಿ ಸಾಲ ವಸೂಲಾತಿ ಕ್ರಮಗಳ ಬಗ್ಗೆ ಮಾಹಿತಿ ಪಡೆದರು. ಬಲವಂತವಾಗಿ ಸಾಲ ವಸೂಲಿ ಮಾಡಿ ರೈತರನ್ನು ಸಂಕಷ್ಟಕ್ಕೆ ದೂಡಬೇಡಿ ಎಂದು ಮನವಿ ಮಾಡಿದರು.

‘ರೈತರು ಪಡೆದ ಸಾಲ ₹ 20 ಲಕ್ಷ ಮೀರಿದ ನಂತರ ಕಾನೂನು ಕ್ರಮ ಜರುಗಿಸುವುದು ಅನಿವಾರ್ಯ’ ಎಂದು ಪ್ರಾದೇಶಿಕ ವ್ಯವಸ್ಥಾಪಕ ಕೆ.ವಿ.ಕಾಮತ್ ಹೇಳಿದರು.

ಪ್ರಾದೇಶಿಕ ಕಚೇರಿಯಲ್ಲಿ ಬುಧವಾರ ಚರ್ಚಿಸಿ ಪರಿಹಾರ ಕಂಡುಕೊಳ್ಳುವ ಕುರಿತು ತೀರ್ಮಾನಿಸಿದ ನಂತರ ರೈತರು ಧರಣಿ ಅಂತ್ಯಗೊಳಿಸಿದರು.

ಶಾಖಾ ವ್ಯವಸ್ಥಾಪಕ ಮಹಾಂತೇಶ್, ರೈತ ಮುಖಂಡರಾದ ಶಂಭಣ್ಣ, ತಿಪ್ಪೇಸ್ವಾಮಿ, ನಂದೀಶಪ್ಪ, ನಾಗಪ್ಪ, ಪರಮೇಶ್ವರಪ್ಪ, ಚಂದ್ರಣ್ಣ, ಬಸವರಾಜ್, ನಾರಾಯಣಪ್ಪ, ಸೋಮಶೇಖರಪ್ಪ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260414-43-1689761109

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.