ದಾವಣಗೆರೆ: ಜಿಲ್ಲೆಯಲ್ಲಿ ದಾಸ್ತಾನು ಇರುವ ರಸಗೊಬ್ಬರದ ಕುರಿತು ಸ್ಪಷ್ಟನೆ ನೀಡುವಂತೆ ಕೋರಿ ಜಿಲ್ಲಾ ರೈತ ಒಕ್ಕೂಟದ ನಿಯೋಗ ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಕೆ.ಜಿಯಾವುಲ್ಲಾ ಅವರನ್ನು ಮಂಗಳವಾರ ಭೇಟಿ ಮಾಡಿತು.

‘ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದ ಪರಿಣಾಮವಾಗಿ ರಸಗೊಬ್ಬರ ತಯಾರಿಕೆಯಲ್ಲಿ ಸಮಸ್ಯೆ ಉಂಟಾಗಿದೆ. ರಸಗೊಬ್ಬರದ ಕೊರತೆ ಎದುರಾಗುವ ಆತಂಕದಿಂದ ರೈತರು ದಾಸ್ತಾನು ಮಾಡಿಕೊಳ್ಳಲು ಆರಂಭಿಸಿದ್ದಾರೆ. ರಸಗೊಬ್ಬರ ಮಾರಾಟಗಾರರು ಕೃತಕ ಆಭಾವ ಸೃಷ್ಟಿಸಿ ಬೆಲೆ ಹೆಚ್ಚು ಮಾಡುತ್ತಿದ್ದಾರೆ’ ಎಂದು ಜಿಲ್ಲಾ ರೈತರ ಒಕ್ಕೂಟದ ಅಧ್ಯಕ್ಷ ಕೊಳೇನಹಳ್ಳಿ ಬಿ.ಎಂ. ಸತೀಶ್ ತಿಳಿಸಿದರು.

‘ಜಿಲ್ಲೆಯಲ್ಲಿ ರಸಗೊಬ್ಬರದ ಕೊರತೆ ಇಲ್ಲ. 13,000 ಮೆಟ್ರಿಕ್ ಟನ್ ಯೂರಿಯಾ, 5,943 ಮೆಟ್ರಿಕ್ ಟನ್ ಡಿಎಪಿ, 54,710 ಮೆಟ್ರಿಕ್ ಟನ್ ಕಾಂಪ್ಲೆಕ್ಸ್, 3,074 ಮೆಟ್ರಿಕ್ ಟನ್ ಪೋಟ್ಯಾಷ್ ರಸಗೊಬ್ಬರ ದಾಸ್ತಾನು ಇದೆ. ನಿಗದಿಗಿಂತ ಹೆಚ್ಚಿನ ಬೆಲೆಗೆ ಮಾರಾಟ ಮಾಡುವವರ ವಿರುದ್ಧ ಶಿಸ್ತು ಕ್ರಮ ವಹಿಸಲಾಗುವುದು’ ಎಂದು ಜಿಯಾವುಲ್ಲಾ ಅವರು ರೈತರ ನಿಯೋಗಕ್ಕೆ ಭರವಸೆ ನೀಡಿದ್ದಾರೆ ಎಂಬುದಾಗಿ ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260422-43-1851489799

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.