ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಾವಣಗೆರೆ: ಡಿಕೆಶಿ ಪದಗ್ರಹಣ ಸಮಾರಂಭಕ್ಕೆ ಅನುಮತಿ ನೀಡಲು ಒತ್ತಾಯ

Last Updated 11 ಜೂನ್ 2020, 14:06 IST
ಅಕ್ಷರ ಗಾತ್ರ

ದಾವಣಗೆರೆ: ‘ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಪದಗ್ರಹಣ ಸಮಾರಂಭಕ್ಕೆ ರಾಜ್ಯ ಸರ್ಕಾರ ಅನುಮತಿ ನೀಡದಿರುವುದು ಖಂಡನೀಯ. ಅನುಮತಿ ನೀಡದಿದ್ದರೆ ಜಿಲ್ಲಾಧಿಕಾರಿ ಕಚೇರಿ ಎದುರು ಜೂನ್‌ 13ರಂದು ಪ್ರತಿಭಟನೆ ನಡೆಸುತ್ತೇವೆ’ ಎಂದು ಜಿಲ್ಲಾ ಕಾಂಗ್ರೆಸ್‌ ಸಮಿತಿ ಪರಿಶಿಷ್ಟ ಜಾತಿ ಇಲಾಖೆ ಘಟಕದ ಅಧ್ಯಕ್ಷ ಬಿ.ಎಚ್‌. ವೀರಭದ್ರಪ್ಪ ಹೇಳಿದರು.

‘ಆಹಾರದ ಕಿಟ್‌ ವಿತರಿಸಲು ಶಾಸಕ ಎಂ.ಪಿ. ರೇಣುಕಾಚಾರ್ಯ ಅವರಿಗೆ ಅನುಮತಿ ಇದೆ. ಆದರೆ ಪದಗ್ರಹಣ ಸಮಾರಂಭಕ್ಕೆ ಅನುಮತಿ ಏಕಿಲ್ಲ. ಇದು ಖಂಡನೀಯ.ಡಿ.ಕೆ. ಶಿವಕುಮಾರ್‌ ನೇತೃತ್ವದಲ್ಲಿ ರಾಜ್ಯದಲ್ಲಿ ಬಿಜೆಪಿ ಓಡಿಸಿ ಕಾಂಗ್ರೆಸ್‌ ಅಧಿಕಾರಕ್ಕೆ ತರುತ್ತೇವೆ’ ಎಂದು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ಪದಗ್ರಹಣ ಸಮಾರಂಭದ ಅಂಗವಾಗಿ ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳ 14 ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷರು ಕಡ್ಡಾಯವಾಗಿ ಪರಿಶಿಷ್ಟ ಕಾಲೊನಿಯ ನಾಲ್ಕು ಕಡೆ ಕಾರ್ಯಕ್ರಮ ಆಯೋಜಿಸಬೇಕು. ರಾಷ್ಟ್ರ ಧ್ವಜ, ಕಾಂಗ್ರೆಸ್‌ ಪಕ್ಷ ಧ್ವಜ, ಬಂಟಿಂಗ್‌ ಪ್ರದರ್ಶಿಸಬೇಕು. ಕಾರ್ಯಕ್ರಮದ ಸ್ಥಳದಲ್ಲಿ ಯುಪಿಎಸ್‌, ಟಿವಿ ಇಡಬೇಕು ಎಂದು ಒತ್ತಾಯಿಸಿದರು.

ಮುಖಂಡರಾದ ಬಿ.ಎಂ. ಈಶ್ವರ್, ಉಮಾಮಹೇಶ್ವರ, ಬಸವನಾಳ್‌ ಹಾಲೇಶ್‌, ಬಿ.ಎನ್‌. ರಂಗನಾಥ್, ನಿಖಿಲ್‌, ರಾಕೇಶ್ ಜಿ., ಅಂಜಿನಪ್ಪ, ಪರಶುರಾಂ, ನಾಗರಾಜನಾಯ್ಕ್‌ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT