ದಾವಣಗೆರೆ: ನಗರದ ಜಿಎಂ ವಿಶ್ವವಿದ್ಯಾಲಯದ ಶೈಕ್ಷಣಿಕ ಸಾಧನೆ ಮತ್ತು ಸಾಂಸ್ಕೃತಿಕ ಪ್ರತಿಭೆಗಳ ಅಪೂರ್ವ ಸಂಗಮವಾಗಿರುವ ‘ಮಲ್ಲಿಕಾ’ ಸಾಂಸ್ಕೃತಿಕ ಉತ್ಸವ ಮೇ 8 ಮತ್ತು 9ರಂದು ನಡೆಯಲಿದೆ ಎಂದು ವಿಶ್ವವಿದ್ಯಾಲಯದ ವಿದ್ಯಾರ್ಥಿ ವ್ಯವಹಾರಗಳ ನಿರ್ದೇಶನಾಲಯದ ನಿರ್ದೇಶಕ ಎಚ್.ಎಸ್. ಕಿರಣ್ಕುಮಾರ್ ತಿಳಿಸಿದರು.

‘ಅಂತರ ಕಾಲೇಜು ಉತ್ಸವದಲ್ಲಿ ಮಣಿಪಾಲ್, ಮೈಸೂರು, ಬೆಳಗಾವಿ ಹಾಗೂ ಬಳ್ಳಾರಿ ಸೇರಿದಂತೆ ರಾಜ್ಯದ ವಿವಿಧ ಭಾಗಗಳ 20ಕ್ಕೂ ಹೆಚ್ಚು ಶಿಕ್ಷಣ ಸಂಸ್ಥೆಗಳ 900ಕ್ಕೂ ಅಧಿಕ ಎಂಜಿನಿಯರಿಂಗ್ ಮತ್ತು ಪದವಿ ಕಾಲೇಜು ವಿದ್ಯಾರ್ಥಿಗಳು ಪಾಲ್ಗೊಳ್ಳಲಿದ್ದಾರೆ. ಕಲೆ, ಸಂಗೀತ, ನೃತ್ಯ, ನಾಟಕ ಮತ್ತು ಕ್ರೀಡೆಗಳಂತಹ ವಿವಿಧ ಕ್ಷೇತ್ರಗಳಲ್ಲಿ ವಿದ್ಯಾರ್ಥಿಗಳ ಪ್ರತಿಭೆ ಅನಾವರಣಗೊಳ್ಳಲಿದೆ’ ಎಂದು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

‘ಕೆಎಲ್ಇ ಸಂಸ್ಥೆಯ ಗೌರವ ಕಾರ್ಯಾಧ್ಯಕ್ಷ ಪ್ರಭಾಕರ್ ಕೋರೆ ಅವರು ಮೇ 8 ರಂದು ಸಂಜೆ 6.30ಕ್ಕೆ ಉತ್ಸವಕ್ಕೆ ಚಾಲನೆ ನೀಡಲಿದ್ದಾರೆ. ನಟ ಪ್ರೇಮ್, ಕೇಂದ್ರದ ಮಾಜಿ ಸಚಿವ ಜಿ.ಎಂ. ಸಿದ್ದೇಶ್ವರ, ಕುಲಾಧಿಪತಿ ಜಿ.ಎಂ. ಲಿಂಗರಾಜು, ಕುಲಪತಿ ಎಸ್.ಆರ್. ಶಂಕಪಾಲ್ ಪಾಲ್ಗೊಳ್ಳಲಿದ್ದಾರೆ. ಉದ್ಘಾಟನೆಗೂ ಮುನ್ನ ರಾಕ್ಬ್ಯಾಂಡ್ ಪ್ರದರ್ಶನವಿದೆ’ ಎಂದರು.

‘ಶೈಕ್ಷಣಿಕ ಸಾಧನೆ ಮಾಡಿದ ಜಿಎಂ ಶಿಕ್ಷಣ ಸಂಸ್ಥೆಯ ಪ್ರತಿಭಾನ್ವಿತ ನಾಲ್ವರು ವಿದ್ಯಾರ್ಥಿಗಳಿಗೆ ತಲಾ 10 ಗ್ರಾಂ ‘ಚಿನ್ನದ ಪದಕ’ ನೀಡಿ ಗೌರವಿಸಲಾಗುವುದು. ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಮಟ್ಟದಲ್ಲಿ ರ್ಯಾಂಕ್ ವಿಜೇತ ಆರು ವಿದ್ಯಾರ್ಥಿಗಳ ಕಾಲೇಜು ಶುಲ್ಕವನ್ನು ವಾಪಸ್ ನೀಡಲಾಗುವುದು’ ಎಂದು ವಿವರಿಸಿದರು.

‘ಮೇ 9ರಂದು ಸಂಜೆ 6.30ಕ್ಕೆ ಸಮಾರೋಪ ಸಮಾರಂಭ ನಡೆಯಲಿದೆ. ಶ್ರೀಶೈಲ ಎಜುಕೇಷನಲ್ ಟ್ರಸ್ಟ್ ಅಧ್ಯಕ್ಷ ಜಿ.ಎಂ. ಪ್ರಸನ್ನ ಕುಮಾರ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಗಾಯಕ ವಿಜಯ್ ಪ್ರಕಾಶ್ ಸಂಗೀತ ಸಂಜೆ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ. ಶಾಸ್ತ್ರೀಯ ನೃತ್ಯ, ಗಾಯನ, ಕಿರುನಾಟಕ, ‘ರಿಮಿಕ್ಸ್’, ರಂಗೋಲಿ, ಮೆಹಂದಿ ಸೇರಿ ಹಲವು ಸ್ಪರ್ಧೆಗಳು ನಡೆಯಲಿವೆ’ ಎಂದು ಸಂತೋಷ್ ಕುಮಾರ್ ಎಂ. ತಿಳಿಸಿದರು.

ವಿಶ್ವವಿದ್ಯಾಲಯದ ಮಾರುಕಟ್ಟೆ ವಿಭಾಗದ ಡೀನ್ ಟಿ.ಎಂ. ವೀರಗಂಗಾಧರಸ್ವಾಮಿ, ಸಾಂಸ್ಕೃತಿಕ ಕಾರ್ಯದರ್ಶಿಗಳಾದ ಅಭಿಷೇಕ್ ಮತ್ತು ಅರ್ಜುನ್, ಸಹಾಯಕ ಪಿಆರ್ಒ ವಸಂತ್ ಕುಮಾರ್ ಜಿ.ಎಸ್ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260507-43-2137682746

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.