ದಾವಣಗೆರೆ: ಜಿ.ಎಂ. ವಿಶ್ವವಿದ್ಯಾಲಯದಲ್ಲಿ ಸ್ಥಾಪಿಸಿರುವ ನೂತನ ಸಂಶೋಧನಾ ಹಾಗೂ ಕೌಶಲ್ಯಾಭಿವೃದ್ಧಿ ಕೇಂದ್ರಗಳ ಉದ್ಘಾಟನಾ ಸಮಾರಂಭವನ್ನು ಜೂನ್ 5ರಂದು ಮಧ್ಯಾಹ್ನ 2ಕ್ಕೆ ಹಮ್ಮಿಕೊಳ್ಳಲಾಗಿದೆ ಎಂದು ವಿಶ್ವವಿದ್ಯಾಲಯದ ಸಂಶೋಧನಾ ಮತ್ತು ನಾವೀನ್ಯತೆ ವಿಭಾಗದ ಡೀನ್ ಕೆ.ಎನ್. ಭರತ್ ತಿಳಿಸಿದರು.

‘ಧಾರವಾಡದ ಕೃಷಿ ವಿಶ್ವವಿದ್ಯಾಲಯದ ಕುಲಪತಿ ಪಿ.ಯು. ಕೃಷ್ಣರಾಜ್, ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯ ಪ್ರೊ.ಕೆ. ರಾಜಣ್ಣ, ಇಂಟೆಲ್ ಕಾರ್ಪೊರೇಷನ್ನ ರಾಷ್ಟ್ರೀಯ ವ್ಯವಹಾರ ವ್ಯವಸ್ಥಾಪಕ ಗಿರೀಶ್ ಎಚ್., ಎಡ್ಗೇಟ್ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್ನ ನಿರ್ದೇಶಕ ಗುರ್ಪ್ರೀತ್ ಸಿಂಗ್ ಸೇರಿದಂತೆ ಹಲವರು ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ’ ಎಂದು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಇಆರ್ಪಿ ನಿರ್ದೇಶಕರಾದ ಕೀರ್ತಿ ಪ್ರಸಾದ್ ಮಾತನಾಡಿ, ‘ಜಿ.ಎಂ. ವಿಶ್ವವಿದ್ಯಾಲಯದ ಕುಲಾಧಿಪತಿ ಜಿ.ಎಂ. ಲಿಂಗರಾಜು ಅಧ್ಯಕ್ಷತೆ ವಹಿಸಲಿದ್ದಾರೆ. ಕುಲಪತಿ ಎಸ್.ಆರ್. ಶಂಕಪಾಲ್, ಸಹಕುಲಪತಿ ಎಂ.ವೇಣುಗೋಪಾಲ ರಾವ್ ಹಾಗೂ ಕುಲಸಚಿವ ಸುನೀಲ್ ಕುಮಾರ್ ಬಿ.ಎಸ್. ಪಾಲ್ಗೊಳ್ಳಲಿದ್ದಾರೆ. ಸಂಶೋಧನೆ, ನಾವೀನ್ಯತೆ, ಕೌಶಲ್ಯಾಭಿವೃದ್ಧಿ ಹಾಗೂ ಕೈಗಾರಿಕಾ ಸಹಭಾಗಿತ್ವವನ್ನು ಉತ್ತೇಜಿಸುವ ಉದ್ದೇಶದಿಂದ ಈ ಕೇಂದ್ರಗಳನ್ನು ಆರಂಭಿಸಲಾಗಿದೆ’ ಎಂದರು.

ಜೈವಿಕ ತಂತ್ರಜ್ಞಾನ ವಿಭಾಗದ ಮುಖ್ಯಸ್ಥ ಪ್ರಕಾಶ್ ಕೆ.ಕೆ, ವಾಣಿಜ್ಯ ಮತ್ತು ನಿರ್ವಹಣಾ ವಿಭಾಗದ ನಿರ್ದೇಶಕಿ ಶ್ವೇತಾ ಎಚ್.ಎಸ್., ಮಾರುಕಟ್ಟೆ ವಿಭಾಗದ ಡೀನ್ ಟಿ.ಎಂ. ವೀರ ಗಂಗಾಧರಸ್ವಾಮಿ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260604-43-1921409569

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.