ದಾವಣಗೆರೆ: ನಗರದಲ್ಲಿ ಶುಕ್ರವಾರ ಮುಂಜಾನೆ ಮಳೆರಾಯ ಆರ್ಭಟಿಸಿದ. ಜನ ನಿದ್ರೆಯಿಂದ ಎದ್ದೇಳುವ ಹೊತ್ತಿಗಾಗಲೇ ಶುರುವಾಗಿದ್ದ ಮಳೆಯು ಕೆಲ ಹೊತ್ತು ರಭಸವಾಗಿ ಸುರಿಯಿತು. ಇದರ ಪರಿಣಾಮ ನಗರದ ತಗ್ಗುಪ್ರದೇಶಗಳಲ್ಲಿನ ಮನೆಗಳಿಗೆ ನೀರು ನುಗ್ಗಿತು.

ಗುರುವಾರ ಬಿಸಿಲಿನಿಂದ ಕಂಗೆಟ್ಟಿದ್ದ ಜನರಿಗೆ ಮರುದಿನ ಸುರಿದ ಗುಡುಗು –ಸಿಡಿಲು, ಬಿರುಗಾಳಿ ಸಹಿತ ಮಳೆಯು ತಂಪಾದ ವಾತಾವರಣವನ್ನು ಸೃಷ್ಟಿಸಿತು.

ಜಗಳೂರು ರಸ್ತೆಯ ಬಸವನಾಳ್ ಬಳಿ ಮುಖ್ಯರಸ್ತೆಯ ಬದಿಯಲ್ಲಿ ಭಾರಿ ಮರವೊಂದು ಧರೆಗೆ ಉರುಳಿತು. ಮುಂಜಾನೆಯೇ ಮರ ಉರುಳಿ ಬಿದ್ದಿದ್ದರಿಂದ ಅದೃಷ್ಟವಶಾತ್ ಯಾವುದೇ ಜೀವಹಾನಿ ಸಂಭವಿಸಿಲ್ಲ. ಕೆಲಹೊತ್ತು ವಾಹನಗಳ ಸಂಚಾರಕ್ಕೆ ಸಮಸ್ಯೆಯಾಗಿತ್ತು. ಬಳಿಕ ಮರದ ಕೊಂಬೆಗಳನ್ನು ತೆರವುಗೊಳಿಸಲಾಯಿತು.

ಜಯನಗರ, ಹಳೆ ಚಿಕ್ಕಮ್ಮಣ್ಣಿ ದೇವರಾಜ ಅರಸು ಬಡಾವಣೆ, ಹಳೆ ಪಿ.ಬಿ ರಸ್ತೆಯ ಶಂಕರ್ ಬಡಾವಣೆ, ಹಳೆ ಬೇತೂರು ರಸ್ತೆ, ಭಾರತ್ ಕಾಲೊನಿ, ಎಚ್ಕೆಆರ್ ನಗರ ಸೇರಿದಂತೆ ಹಲವು ಬಡಾವಣೆಗಳಿಗೆ ನೀರು ನುಗ್ಗಿದ್ದರಿಂದ ಸ್ಥಳೀಯ ನಿವಾಸಿಗಳು ಸಮಸ್ಯೆ ಅನುಭವಿಸಿದರು.

‘ಜೋರು ಮಳೆಯಾದಾಗೆಲ್ಲಾ ಬಡಾವಣೆಯು ಜಲಾವೃತವಾಗುತ್ತದೆ. ಮನೆಗಳಿಗೂ ನೀರು ನುಗ್ಗುತ್ತದೆ. ಚರಂಡಿ ತುಂಬಿ ಹರಿಯುತ್ತವೆ. ಸಮಸ್ಯೆ ಬಗೆಹರಿಸುವಂತೆ ಸಂಬಂಧಪಟ್ಟ ಅಧಿಕಾರಿಗಳು, ಜನಪ್ರತಿನಿಧಿಗಳಿಗೆ ಹಲವು ಬಾರಿ ಮನವಿ ಮಾಡಿದರೂ ಕ್ರಮ ಕೈಗೊಂಡಿಲ್ಲ’ ಎಂದು ಶಂಕರ ಲೇಔಟ್ ನಿವಾಸಿಗಳು ದೂರಿದರು.

ಮಳೆಯಿಂದಾಗಿ ಈಗಾಗಲೇ ಜಿಲ್ಲೆಯಲ್ಲಿ ಅಡಿಕೆ, ತೆಂಗು, ಪಪ್ಪಾಯ ಸೇರಿದಂತೆ ಇನ್ನಿತರ ತೋಟಗಾರಿಕೆ ಬೆಳೆಗಳಿಗೆ ಅಪಾರ ಹಾನಿ ಸಂಭವಿಸಿದೆ. ಕೃಷಿ, ತೋಟಗಾರಿಕೆ ಹಾಗೂ ಕಂದಾಯ ಇಲಾಖೆಗಳಿಂದ ಬೆಳೆ ಹಾನಿ ಸಮೀಕ್ಷೆಯೂ ನಡೆಯುತ್ತಿದೆ. ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ಬೆಳೆ ಸಮೀಕ್ಷೆಗೂ ಅಡ್ಡಿಯಾಗಿದೆ ಎನ್ನುತ್ತಾರೆ ಅಧಿಕಾರಿಗಳು.

ಜಿಲ್ಲೆಯಲ್ಲಿ ರೈತರು ಮುಂಗಾರು ಹಂಗಾಮಿನ ಬಿತ್ತನೆಗೆ ಹೊಲಗಳನ್ನು ಸಜ್ಜುಗೊಳಿಸುತ್ತಿದ್ದಾರೆ. ಬಿತ್ತನೆ ಬೀಜ ಹಾಗೂ ರಸಗೊಬ್ಬರ ಖರೀದಿಗೂ ಮುಂದಾಗುತ್ತಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260523-43-700638323

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.