ದಾವಣಗೆರೆ: ‘ದಾವಣಗೆರೆಯಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪಿಸಿ, ದಾವಣಗೆರೆ, ಚಿತ್ರದುರ್ಗ, ಶಿವಮೊಗ್ಗ, ವಿಜಯನಗರ ಹಾಗೂ ಹಾವೇರಿ ಜಿಲ್ಲೆಗಳನ್ನು ಒಳಪಡಿಸುವುದು ಅತ್ಯಂತ ಸೂಕ್ತವಾದ ನಿರ್ಧಾರವಾಗಲಿದೆ’ ಎಂದು ಜಿಲ್ಲಾ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರಾದ ಎಸ್.ಎಚ್. ಹೊಸಗೌಡರ್ ಅಭಿಪ್ರಾಯಪಟ್ಟಿದ್ದಾರೆ.

‘ದಾವಣಗೆರೆ ಭೌಗೋಳಿಕವಾಗಿ ಕರ್ನಾಟಕದ ಮಧ್ಯ ಭಾಗದಲ್ಲಿದೆ. ಬೆಂಗಳೂರು, ಹುಬ್ಬಳ್ಳಿ ಮತ್ತು ಮಂಗಳೂರು ನಗರಗಳಿಗೆ ಸಮಾನ ಅಂತರದಲ್ಲಿರುವುದರಿಂದ ಮಧ್ಯ ಕರ್ನಾಟಕ ಹಾಗೂ ಉತ್ತರ ಕರ್ನಾಟಕದ ಜನರು ಸುಲಭವಾಗಿ ತಲುಪಬಹುದಾಗಿದೆ. ನ್ಯಾಯಾಂಗ ಚಟುವಟಿಕೆಗಳಿಗೆ ಅನುಕೂಲಕರವಾದ ಶೈಕ್ಷಣಿಕ ಹಾಗೂ ಬೌದ್ಧಿಕ ವಾತಾವರಣ ನಗರದಲ್ಲಿದೆ’ ಎಂದು ಹೇಳಿದ್ದಾರೆ.

‘ದಾವಣಗೆರೆಯಲ್ಲಿ ರಸ್ತೆ ಮತ್ತು ರೈಲು ಸಂಪರ್ಕವೂ ಉತ್ತಮವಾಗಿದೆ. 1950ರಲ್ಲಿ ರಾಜ್ಯಗಳ ಪುನರ್ ವಿಂಗಡಣೆ ವೇಳೆ ಭೌಗೋಳಿಕ ಕೇಂದ್ರ ಸ್ಥಾನ ಹಾಗೂ ಮೂಲಸೌಕರ್ಯಗಳ ಆಧಾರದ ಮೇಲೆ ದಾವಣಗೆರೆಯನ್ನು ಕರ್ನಾಟಕದ ರಾಜಧಾನಿಯನ್ನಾಗಿಸುವ ಕುರಿತು ಗಂಭೀರ ಚರ್ಚೆ ನಡೆದಿತ್ತು. 1993ರಲ್ಲಿ ಚಿರಂಜೀವಿ ಸಿಂಗ್ ಸಮಿತಿ ಕೂಡ ಹರಿಹರ– ದಾವಣಗೆರೆ ಜೋಡಿ ನಗರಗಳನ್ನು ರಾಜ್ಯದ ದ್ವಿತೀಯ ರಾಜಧಾನಿಯಾಗಿ ಅಭಿವೃದ್ಧಿಪಡಿಸುವಂತೆ ಶಿಫಾರಸು ಮಾಡಿತ್ತು. ಆಡಳಿತ ವಿಕೇಂದ್ರೀಕರಣ ಹಾಗೂ ಸಮತೋಲನಾಭಿವೃದ್ಧಿಯ ಅಗತ್ಯವನ್ನು ಸಮಿತಿ ಒತ್ತಿ ಹೇಳಿತ್ತು’ ಎಂದು ತಿಳಿಸಿದ್ದಾರೆ.

‘ಪ್ರಸ್ತುತ ದಾವಣಗೆರೆ, ಚಿತ್ರದುರ್ಗ, ಶಿವಮೊಗ್ಗ, ವಿಜಯನಗರ ಮತ್ತು ಹಾವೇರಿ ಜಿಲ್ಲೆಗಳ ವಕೀಲರು ಹಾಗೂ ಸಾರ್ವಜನಿಕರು ರಿಟ್ ಅರ್ಜಿಗಳು, ಮೇಲ್ಮನವಿಗಳು ಹಾಗೂ ವಿಚಾರಣೆಗಳಿಗಾಗಿ ಬೆಂಗಳೂರು ಅಥವಾ ಧಾರವಾಡಕ್ಕೆ ತೆರಳಬೇಕಾಗುತ್ತಿದೆ. ಇದಕ್ಕಾಗಿ 6 ರಿಂದ 10 ಗಂಟೆಗಳ ಪ್ರಯಾಣ ಮಾಡಬೇಕಿದೆ. ಆರ್ಥಿವಾಗಿಯೂ ಹೆಚ್ಚಿನ ವೆಚ್ಚವಾಗುತ್ತಿದೆ’ ಎಂದಿದ್ದಾರೆ.

‘ಬೆಂಗಳೂರು ಪ್ರಧಾನ ಪೀಠ ಹಾಗೂ ಧಾರವಾಡ ಮತ್ತು ಕಲಬುರಗಿ ಪೀಠಗಳ ಮೇಲಿನ ಒತ್ತಡವೂ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ದಾವಣಗೆರೆಯಲ್ಲಿ ಸಂಚಾರಿ ಪೀಠ ಸ್ಥಾಪನೆಯಾದರೆ ಪ್ರಕರಣಗಳ ವಿಲೇವಾರಿ ವೇಗಗೊಳ್ಳುವುದರ ಜೊತೆಗೆ ನ್ಯಾಯಾಂಗದ ಮೇಲಿನ ಒತ್ತಡವೂ ಕಡಿಮೆಯಾಗಲಿದೆ. ಹೀಗಾಗಿ ಪೀಠವನ್ನು ತ್ವರಿತವಾಗಿ ಸ್ಥಾಪಿಸಬೇಕು’ ಎಂದು ಒತ್ತಾಯಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260527-43-634064208

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.