ದಾವಣಗೆರೆ: ಎಚ್.ಐ.ವಿ ಸೋಂಕನ್ನು ಪರಿಣಾಮಕಾರಿಯಾಗಿ ತಡೆಗಟ್ಟಲು ಮತ್ತು ಸೋಂಕಿತರಿಗೆ ಉತ್ತಮ ಚಿಕಿತ್ಸೆ ಒದಗಿಸುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಹಾಗೂ ವಿವಿಧ ಸ್ವಯಂಸೇವಾ ಸಂಸ್ಥೆಗಳ ಸಹಯೋಗದಲ್ಲಿ ಮಹತ್ವದ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಜಿಲ್ಲೆಯನ್ನು ಎಚ್.ಐ.ವಿ ಮುಕ್ತವಾಗಿಸಲು ಹೆಚ್ಚಿನ ಒತ್ತು ನೀಡುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಜಿ.ಎಂ ಗಂಗಾಧರಸ್ವಾಮಿ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಮಿಷನ್ ಏಡ್ಸ್ ಸುರಕ್ಷಾ ಅಭಿಯಾನ ಸಭೆಯಲ್ಲಿ ಮಾತನಾಡಿದರು.

‘ಜಿಲ್ಲೆಯ ಎಲ್ಲಾ ಪ್ರಮುಖ ಖಾಸಗಿ ಆಸ್ಪತ್ರೆಗಳು ಮತ್ತು ಆರೋಗ್ಯ ಕೇಂದ್ರಗಳಲ್ಲಿ ಎಚ್.ಐ.ವಿ ತಪಾಸಣೆ ಕಡ್ಡಾಯಗೊಳಿಸಲಾಗಿದೆ. ಪಾಸಿಟಿವ್ ಪ್ರಕರಣಗಳು ಕಂಡುಬಂದಲ್ಲಿ ತಕ್ಷಣವೇ ಎಆರ್ಟಿ ಉಚಿತ ಚಿಕಿತ್ಸೆಗೆ ಶಿಫಾರಸು ಮಾಡಲು ಸೂಚಿಸಲಾಗಿದೆ’ ಎಂದು ಜಿಲ್ಲಾ ಕಾರ್ಯಕ್ರಮ ಅಧಿಕಾರಿ ಡಾ.ಪಿ.ಡಿ. ಮುರಳೀಧರ್ ತಿಳಿಸಿದರು.

‘ಲಾರಿ ಚಾಲಕರು ಮತ್ತು ವಲಸೆ ಕಾರ್ಮಿಕರು ಹೆಚ್ಚಾಗಿ ಸೇರುವ ರಸ್ತೆಬದಿಯ ಡಾಬಾಗಳು ಹಾಗೂ ರಾಷ್ಟ್ರೀಯ ಹೆದ್ದಾರಿಯನ್ನು ಸಂಪರ್ಕಿಸುವ ಕಡೆ ವಿಶೇಷ ತಪಾಸಣಾ ಶಿಬಿರಗಳನ್ನು ಆಯೋಜಿಸಲು ಎನ್ಜಿಒಗಳಿಗೆ ಜವಾಬ್ದಾರಿ ನೀಡಲಾಗಿದೆ. 4,500 ನೋಂದಾಯಿತ ಲೈಂಗಿಕ ಕಾರ್ಯಕರ್ತೆಯರಿಗೆ ಪ್ರತಿ ಆರು ತಿಂಗಳಿಗೊಮ್ಮೆ ನಿಯಮಿತ ಆರೋಗ್ಯ ತಪಾಸಣೆ ನಡೆಸಲಾಗುತ್ತಿದೆ. ಇದರೊಂದಿಗೆ ಅವರಿಗೆ ಸರ್ಕಾರದ ಸಾಮಾಜಿಕ ಭದ್ರತಾ ಯೋಜನೆಗಳ ಲಾಭವನ್ನು ತಲುಪಿಸಲಾಗುತ್ತಿದೆ’ ಎಂದರು.

ಕಾರ್ಮಿಕರ ವಿವರಗಳನ್ನು ಸುಲಭವಾಗಿ ದಾಖಲಿಸಲು ಮತ್ತು ಸ್ಕ್ಯಾನ್ ಮಾಡಲು ಕ್ಯೂಆರ್ ಕೋಡ್ಗಳನ್ನು ಬಳಸುವ ಬಗ್ಗೆ ಪೋಸ್ಟರ್ ಬಿಡುಗಡೆ ಮಾಡಲಾಯಿತು.

ಡಿಎಚ್ಒ ಡಾ.ಷಣ್ಮುಖಪ್ಪ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ದೇವೆಂದ್ರಪ್ಪ, ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕಿ ರೇಷ್ಮಾ ಕೌಸರ್, ತಾಲ್ಲೂಕು ವೈದ್ಯಾಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260424-43-520531164

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.