ದಾವಣಗೆರೆ: ದಕ್ಷಿಣ ವಿಧಾನಸಭಾ ಕ್ಷೇತ್ರದ ಜನರ ವೈದ್ಯಕೀಯ ಸೌಲಭ್ಯಕ್ಕಾಗಿ 100 ಹಾಸಿಗೆ ಸಾಮರ್ಥ್ಯದ ಸರ್ಕಾರಿ ಆಸ್ಪತ್ರೆಯನ್ನು ಮಾಗನಹಳ್ಳಿ ಮುಖ್ಯರಸ್ತೆಯ ಮುಸ್ತಾಫಾ ನಗರದಲ್ಲಿ ನಿರ್ಮಾಣ ಮಾಡಬೇಕು ಎಂದು ಅಂಬೇಡ್ಕರ್ ಮಹಾಸೇನೆ ಯುವ ಘಟಕ ರಾಜ್ಯ ಘಟಕದ ಅಧ್ಯಕ್ಷ ನೂರುಲ್ಲಾ ಒತ್ತಾಯಿಸಿದರು.

‘ರಾಮಕೃಷ್ಣ ಹೆಗಡೆ ನಗರದಲ್ಲಿ ಅಗತ್ಯ ಭೂಮಿ ಲಭ್ಯವಿದೆ. ಇಲ್ಲಿ ಆಸ್ಪತ್ರೆ ನಿರ್ಮಿಸಿದರೆ ಜನರಿಗೂ ಅನುಕೂಲವಾಗಲಿದೆ. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಇತ್ತ ಗಮನ ಹರಿಸಬೇಕು’ ಎಂದು ಆಗ್ರಹಿಸಿದರು.

ಸಂಘದ ಮುಖಂಡರಾದ ಅನಿಲ್ಕುಮಾರ್, ಸೈಯದ್ ಆರೀಫ್, ಜಿಲಾನಿ, ಮುಬಾರಕ್ ಅಲಿ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260501-43-189502104

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.