ದಾವಣಗೆರೆ: ಭದ್ರಾ ನಾಲೆಗೆ ಅಳವಡಿಸಿರುವ ಅಕ್ರಮ ಪಂಪ್ಸೆಟ್ಗಳನ್ನು ತೆರವುಗೊಳಿಸಿ ಅಚ್ಚುಕಟ್ಟು ಪ್ರದೇಶದ ಕೊನೆಯ ಭಾಗದ ರೈತರಿಗೆ ಅನುಕೂಲ ಮಾಡಿಕೊಡಬೇಕು ಎಂದು ಭಾರತೀಯ ರೈತ ಒಕ್ಕೂಟದ ಅಧ್ಯಕ್ಷ ಎಚ್.ಆರ್. ಲಿಂಗರಾಜ ಶಾಮನೂರು ಒತ್ತಾಯಿಸಿದರು.

‘ಬೇಸಿಗೆ ಹಂಗಾಮಿಗೆ ಭದ್ರಾ ಜಲಾಶಯದಿಂದ ನಾಲೆಗಳಿಗೆ ಜ.10ರಿಂದ ನೀರು ಹರಿಸಲಾಗುತ್ತಿದೆ. ಮೇ 10ಕ್ಕೆ ನೀರು ಸ್ಥಗಿತ ಮಾಡಲಾಗುತ್ತದೆ. ಅಚ್ಚುಕಟ್ಟು ಪ್ರದೇಶದಲ್ಲಿ ಭತ್ತ ಬೆಳೆಯಲಾಗಿದ್ದು, ಕಾಳು ಕಟ್ಟುವ ಹಂತದಲ್ಲಿ ಬೆಳೆ ಇದೆ. ಕೊನೆ ಭಾಗಕ್ಕೆ ಸಮರ್ಪಕ ನೀರು ಹರಿಯದೇ ರೈತರು ತೊಂದರೆ ಅನುಭವಿಸುವಂತಾಗಿದೆ’ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಅಸಮಾಧಾನ ವ್ಯಕ್ತಪಡಿಸಿದರು.

‘ಚನ್ನಗಿರಿ ತಾಲ್ಲೂಕಿನ ಮಾಡಾಳ್, ಗೆದ್ದಲಹಟ್ಟಿ ಸೇರಿ ಹಲವು ಹಳ್ಳಿಗಳಲ್ಲಿ ಅಕ್ರಮ ಪಂಪ್ಸೆಟ್ಗಳು ಸಾಕಷ್ಟಿವೆ. ಕಿಲೊ ಮೀಟರ್ ವರೆಗೆ ಪೈಪ್ಲೈನ್ ಮಾಡಿ ನೀರು ತೆಗೆದುಕೊಂಡು ಹೋಗಲಾಗುತ್ತಿದೆ. ಪಂಪ್ಸೆಟ್ಗಳಿಗೆ ರೈತರು ಅನಧಿಕೃತ ವಿದ್ಯುತ್ ಸಂಪರ್ಕ ಪಡೆದುಕೊಳ್ಳಲು ‘ಬೆಸ್ಕಾಂ’ ಅಧಿಕಾರಿಗಳು ಅವಕಾಶ ಮಾಡಿಕೊಟ್ಟು ಅಚ್ಚುಕಟ್ಟು ಪ್ರದೇಶದ ಕೊನೆಯ ಭಾಗದ ರೈತರಿಗೆ ಅನ್ಯಾಯ ಮಾಡುತ್ತಿದ್ದಾರೆ. ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಕೂಡಲೇ ಗಮನ ಹರಿಸಬೇಕು’ ಎಂದು ಆಗ್ರಹಿಸಿದರು.

ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಎ.ಎಂ. ಮಂಜುನಾಥ್, ಮುಖಂಡರಾದ ಅಂತರವಳ್ಳಿ ಹಾಲೇಶಪ್ಪ, ಮಹಂತಪ್ಪ, ಜುಂಜಪ್ಪ, ಎ.ಬಿ. ಕರಿಬಸಪ್ಪ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260421-43-1595060334

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.