ದಾವಣಗೆರೆ: ತಾಲ್ಲೂಕಿನ ಕಾಡಜ್ಜಿ ಗ್ರಾಮದ ದೇಗುಲಗಳಲ್ಲಿ ನಿಧಿ ಶೋಧಿಸಲು ಯತ್ನಿಸಿದ ಆರೋಪದ ಮೇರೆಗೆ ಆರು ಜನರನ್ನು ಗ್ರಾಮಾಂತರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಕಾಡಜ್ಜಿ ಗ್ರಾಮದ ಬಸವರಾಜ (42), ಮಲೇಬೆನ್ನೂರಿನ ಪ್ರಕಾಶ ಆಚಾರಿ (48), ಮಂಜುನಾಥ (51), ಪ್ರಕಾಶ (42), ಹೊನ್ನಾವರ ತಾಲ್ಲೂಕಿನ ಇಡಗುಂಜಿ ಗ್ರಾಮದ ರಾಮನಾಥ ಪೈ (52), ಸಾಗರ ತಾಲ್ಲೂಕಿನ ಬ್ಯಾಕೋಡು ಗ್ರಾಮದ ಶ್ರೀಕಾಂತ ಭಟ್ (51) ಬಂಧಿತರು.

ಆರೋಪಿಗಳು ಏ. 22ರಂದು ರಾತ್ರಿ ಕಾಡಜ್ಜಿ ಗ್ರಾಮದ ಚೌಡಮ್ಮ ದೇಗುಲದಲ್ಲಿ ನಿಧಿ ಶೋಧ ಮಾಡಿದ್ದರು. ಏ.29ರಂದು ರಾತ್ರಿ ಪೇಟೆ ದುರುಗಮ್ಮ ದೇಗುಲದ ಬಳಿ ಜೆಸಿಬಿ ಮೂಲಕ ಗುಂಡಿ ತೆಗೆದಿದ್ದರು. ದುಷ್ಟ ಶಕ್ತಿ ಪೂಜೆ, ಹೋಮ– ಹವನ ಮಾಡಿ ಗರ್ಭಗುಡಿಯಲ್ಲಿ ನಿಧಿ ತೆಗೆಯಲು ಮುಂದಾಗಿದ್ದರು. ಇದನ್ನು ಗಮನಿಸಿದ ಸ್ಥಳೀಯರು ಆರೋಪಿಗಳನ್ನು ಹಿಡಿಯಲು ಯತ್ನಿಸಿದ್ದರು. ಪ್ರಕರಣ ದಾಖಲಿಸಿಕೊಂಡ ಗ್ರಾಮಾಂತರ ಠಾಣೆಯ ಪೊಲೀಸರು ಎಲ್ಲ ಆರೋಪಿಗಳನ್ನು ಬಂಧಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260502-43-1467020460

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.