ದಾವಣಗೆರೆ: ‘ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಚುನಾವಣೆಗೂ ಮುನ್ನ ಭರವಸೆ ನೀಡಿದ್ದ ಐದು ಗ್ಯಾರಂಟಿಗಳನ್ನು ಜಾರಿಗೊಳಿಸಲು ಕ್ರಮ ತೆಗೆದುಕೊಂಡಿರುವುದರಿಂದ ಬಿಜೆಪಿ ನಾಯಕರು ಕಂಗಾಲಾಗಿದ್ದಾರೆ’ ಎಂದು ಕೆಪಿಸಿಸಿ ವಕ್ತಾರ ಡಿ.ಬಸವರಾಜ್ ಹೇಳಿದ್ದಾರೆ.

‘ಗ್ಯಾರಂಟಿ ಘೋಷಣೆ ದೇಶದಲ್ಲೇ ಕ್ರಾಂತಿಕಾರಿ ಹೆಜ್ಜೆಯಾಗಿದ್ದು, ಗ್ಯಾರಂಟಿಗಳನ್ನು ಜಾರಿಗೊಳಿಸುತ್ತಿರುವುದು ಕಾಂಗ್ರೆಸ್ ಆಡಳಿತದ ಬದ್ಧತೆಗೆ ಸಾಕ್ಷಿಯಾಗಿದೆ’ ಎಂದು ಅವರು ತಿಳಿಸಿದ್ದಾರೆ.

‘ರಾಜ್ಯದ ಕೆಂಪು ಬಸ್‌ಗಳನ್ನು ಡಕೋಟಾ ಬಸ್ಸುಗಳೆಂದು ಟೀಕಿಸಿರುವ ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಅವರು ರಾಜ್ಯದ ಜನರ ಕ್ಷಮೆಯಾಚಿಸಬೇಕು’ ಎಂದು ಒತ್ತಾಯಿಸಿದ್ದಾರೆ.

‘ಬಿಜೆಪಿಯವರು ಮೊದಲು ಗ್ಯಾರಂಟಿಗಳ ಜಾರಿ ಬಗ್ಗೆ ಜನರನ್ನು ಎತ್ತಿ ಕಟ್ಟುತ್ತಿದ್ದರು. ಇದೀಗ ರಾಜ್ಯದ ಆರ್ಥಿಕ ಸ್ಥಿತಿಗತಿ ಬಗ್ಗೆ ಮಾತನಾಡುತ್ತಿದ್ದಾರೆ. ಅವರು ದ್ವಿಮುಖ ನೀತಿ ಅನುಸರಿಸುತ್ತಿದ್ದು, ಜನರೇ ತಕ್ಕ ಪಾಠ ಕಲಿಸಲಿದ್ದಾರೆ’ ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.