ದಾವಣಗೆರೆ: ಕಾಂಗ್ರೆಸ್‌ನ ಹಿರಿಯ ಮುಖಂಡ, ಕೇಂದ್ರದ ಮಾಜಿ ಸಚಿವ ಮಲ್ಲಿಕಾರ್ಜುನ ಖರ್ಗೆ ಹಾಗೂ ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಅಪರಿಚಿತ ವ್ಯಕ್ತಿಯೊಬ್ಬ ಜೀವ ಬೆದರಿಕೆ ಹಾಕಿರುವುದು ಖಂಡನೀಯ. ಶೀಘ್ರ ಆರೋಪಿಯನ್ನು ಬಂಧಿಸಬೇಕು ಎಂದು ಜಿಲ್ಲಾ ಛಲವಾದಿ ಮಹಾಸಭಾದ ಅಧ್ಯಕ್ಷ ಎಸ್.ಶೇಖರಪ್ಪ ಒತ್ತಾಯಿಸಿದರು.

ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಖರ್ಗೆ ಹಲವು ವರ್ಷಗಳಿಂದ ರಾಜಕೀಯದಲ್ಲಿದ್ದು, ಅಭಿವೃದ್ಧಿ ಕೆಲಸಗಳನ್ನು ಕೈಗೊಂಡಿದ್ದಾರೆ. ಇವರ ಏಳಿಗೆ ಸಹಿಸದ ಕೆಲವರು ಜೀವ ಬೆದರಿಕೆ ಹಾಕಿರುವುದು ಅಕ್ಷಮ್ಯ. ರಾಜ್ಯ ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು. ಶೀಘ್ರ ಆರೋಪಿಗಳನ್ನು ಪತ್ತೆ ಹಚ್ಚಿ ಶಿಕ್ಷೆಗೆ ಒಳಪಡಿಸಬೇಕು’ ಎಂದು ಆಗ್ರಹಿಸಿದರು.

ಸಭಾದ ಕಾರ್ಯಾಧ್ಯಕ್ಷ ಸಿ. ಜಯಪ್ಪ, ಮುಖಂಡರಾದ ಡಿ. ಜಗನ್ನಾಥ, ಉಮಾಮಹೇಶ್ವರ, ಬಸವನಾಳ ಹಾಲೇಶ್, ನವೀನ್, ಹನುಮಂತಪ್ಪ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.