ದಾವಣಗೆರೆ: ‘ಜಿಲ್ಲೆಯಲ್ಲಿ ಕೆರೆಗಳ ಅಭಿವೃದ್ಧಿಗೆ ವಿಶೇಷ ಒತ್ತು ನೀಡಲಾಗುತ್ತಿದೆ. ₹ 10 ಕೋಟಿ ವೆಚ್ಚದಲ್ಲಿ ಕೆರೆ ಅಭಿವೃದ್ಧಿ ಕಾರ್ಯವನ್ನು ಕೈಗೆತ್ತಿಕೊಳ್ಳಲು ನಿರ್ಧರಿಸಲಾಗಿದೆ’ ಎಂದು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದರು.

ಇಲ್ಲಿನ ಜಿಲ್ಲಾಡಳಿತ ಭವನದಲ್ಲಿ ನೆಲ-ಜಲ, ಪರಿಸರ ವೃದ್ಧಿ ಮತ್ತು ಜಿಲ್ಲಾ ಕೆರೆಗಳ ನಿರ್ವಹಣೆ ಕುರಿತು ಮಂಗಳವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ‘ಮೂರು ವರ್ಷಗಳಲ್ಲಿ ಜಿಲ್ಲೆಯ 36 ಕೆರೆ ಮತ್ತು ಕುಂಟೆಗಳ ನಿರ್ಮಾಣ, ಪುನಶ್ಚೇತನ ಮಾಡಲಾಗಿದೆ’ ಎಂದರು.

‘ಮುದ್ದಪ್ಪನ ಕೆರೆಯು ಅರಣ್ಯ ಇಲಾಖೆಯ ವ್ಯಾಪ್ತಿಗೆ ಬರುತ್ತದೆ. ಈ ಕೆರೆ ಅಭಿವೃದ್ಧಿಪಡಿಸುವಲ್ಲಿ ಯಾವುದೇ ಕ್ರಮವಹಿಸಿಲ್ಲ’ ಎಂದು ರೈತ ಮುಖಂಡ ಬಲ್ಲೂರು ರವಿಕುಮಾರ್ ಸಭೆಯ ಗಮನ ಸೆಳೆದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗಿತ್ತೆ ಮಾಧವ ವಿಠ್ಠಲ ರಾವ್, ‘ಸಾರ್ವಜನಿಕರಲ್ಲಿ ಪರಿಸರ ಪ್ರೇಮ ಹೆಚ್ಚಿಸಲು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ‘ಸ್ಮರಣಾರ್ಥ ಗಿಡ’ ಎಂಬ ವಿನೂತನ ಪರಿಕಲ್ಪನೆ ಜಾರಿಗೆ ತರಲಾಗುತ್ತಿದೆ. ಕುಟುಂಬದ ಹಿರಿಯರು ಅಥವಾ ಮರಣ ಹೊಂದಿದವರ ಸವಿನೆನಪಿನಲ್ಲಿ ಸಾರ್ವಜನಿಕರು ಗಿಡಗಳನ್ನು ನೆಡಬಹುದು’ ಎಂದರು.

‘ಈ ಗಿಡಗಳಿಗೆ ಅವರ ಹೆಸರಿನ ಫಲಕವನ್ನು ಅಳವಡಿಸಲು ಅವಕಾಶ ಕಲ್ಪಿಸಲಾಗುತ್ತದೆ. ಇದರಿಂದ ಸಾರ್ವಜನಿಕರಿಗೆ ಗಿಡಗಳ ಮೇಲಿನ ಭಾವನಾತ್ಮಕ ಸಂಬಂಧ ಹೆಚ್ಚಲಿದ್ದು, ಗಿಡಗಳ ರಕ್ಷಣೆಯೂ ಸುಲಭವಾಗುತ್ತದೆ. ಹುಟ್ಟುಹಬ್ಬದ ನೆನಪಿಗಾಗಿಯೂ ಇಂತಹ ಗಿಡಗಳನ್ನು ನೆಡಲು ಪ್ರೋತ್ಸಾಹ ನೀಡಲಾಗುತ್ತಿದೆ’ ಎಂದು ತಿಳಿಸಿದರು.

‘ನಗರದಲ್ಲಿ ತೆಂಗಿನ ಗರಿಗಳು, ಅಡಿಕೆ ಸಿಪ್ಪೆ ಹಾಗೂ ಒಣಗಿದ ರೆಂಬೆಗಳ ವಿಲೇವಾರಿ ದೊಡ್ಡ ಸಮಸ್ಯೆಯಾಗಿದೆ’ ಎಂದು ಪರಿಸರವಾದಿ ಈಶ್ವರಯ್ಯ ಸಭೆಯ ಗಮನಕ್ಕೆ ತಂದರು.

ಇದಕ್ಕೆ ಸ್ಪಂದಿಸಿದ ಜಿಲ್ಲಾಧಿಕಾರಿ ಗಂಗಾಧರಸ್ವಾಮಿ, ‘ಇಂತಹ ತ್ಯಾಜ್ಯಗಳನ್ನು ಸುಲಭವಾಗಿ ಪುಡಿ ಮಾಡುವ ಯಂತ್ರಗಳನ್ನು ಖರೀದಿಸಬೇಕು. ಈ ಹೊಣೆಯನ್ನು ಸ್ತ್ರೀಶಕ್ತಿ ಸಂಘಗಳಿಗೆ ವಹಿಸಲಾಗುವುದು. ಅವರಿಗೆ ಸ್ವಯಂ ಉದ್ಯೋಗಾವಕಾಶ ದೊರೆಯುವುದಲ್ಲದೆ, ಯಂತ್ರದಿಂದ ಉತ್ಪಾದನೆಯಾಗುವ ಪುಡಿಯನ್ನು ಅತ್ಯುತ್ತಮ ಗೊಬ್ಬರವಾಗಿ ಮರುಬಳಕೆ ಮಾಡಲು ಸಾಧ್ಯವಾಗುತ್ತದೆ’ ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಎಚ್.ಟಿ.ಶೇಖರ್, ‘ಧೂಡಾ’ ಆಯುಕ್ತೆ ರೇಣುಕಾ, ಮಹಾನಗರ ಪಾಲಿಕೆ ಕಂದಾಯ ಆಯುಕ್ತ ಉದಯ್, ಡಿಡಿಪಿಯು ಪಳಿನಿವೇಲು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-43-125594500

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.