ದಾವಣಗೆರೆ: ‘ಕೆರೆಗಳ ಅತಿಕ್ರಮಣ ತೆರವಿಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಜ.14ರಂದು ಸೂಚಿಸಿದ್ದಾರೆ. ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯಿತಿ ಸಿಇಒ ತಾಕೀತು ಮಾಡಿದರೂ ಮಂದಗತಿಯಲ್ಲಿ ಕೆಲಸ ನಡೆಯುತ್ತಿದೆ. ಕೆಳ ಹಂತದ ಅಧಿಕಾರಿಗಳು ಸ್ಪಂದಿಸುತ್ತಿಲ್ಲ’ ಎಂದು ನೆಲ ಜಲ ಹಾಗೂ ಪರಿಸರ ಸಂರಕ್ಷಣಾ ಆಂದೋಲನ ಸಮಿತಿ ಒಕ್ಕೂಟದ ರಾಜ್ಯ ಸಂಚಾಲಕ ಬಲ್ಲೂರು ರವಿಕುಮಾರ್ ಹೇಳಿದರು.

‘ಜಿಲ್ಲೆಯಲ್ಲಿನ ಕೆರೆಗಳ ಸಂರಕ್ಷಣೆ ಹಾಗೂ ಒತ್ತುವರಿ ತೆರವು ಸಂಬಂಧ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಹಾಗೂ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರಿಗೆ ಸಭೆ ನಡೆಸುವಂತೆ ಮನವಿ ಮಾಡಲಾಗುವುದು’ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

‘ಈ ವರ್ಷ ಸಣ್ಣ ನೀರಾವರಿ ಇಲಾಖೆಯಿಂದ 98 ಹಾಗೂ ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಸಂಘದಿಂದ 36 ಸೇರಿ 134 ಕೆರೆಗಳ ಹೂಳೆತ್ತಲಾಗಿದೆ. ಈ ಬಾರಿ ಕೆರೆಗಳಲ್ಲಿ ನೀರು ಕಡಿಮೆ ಇರುವ ಹಿನ್ನೆಲೆಯಲ್ಲಿ ಹೂಳೆತ್ತಬಹುದಿತ್ತು’ ಎಂದರು.

‘ಭೂ ದಾಖಲೆ ಇಲಾಖೆ ನೀಡಿದ ವರದಿಯಲ್ಲಿ ಬೋರಗೊಂಡನಹಳ್ಳಿ, ಮಾಯಕೊಂಡ, ಅಗಸನಕಟ್ಟೆ, ಕಾಟನಾಯಕನ ಹೊಸಳ್ಳಿ ಹಾಗೂ ಪವಾಡರಂಗವ್ವನಹಳ್ಳಿ ಕೆರೆಗಳು ಕಾಣೆಯಾಗಿವೆ’ ಎಂದು ಹೇಳಿದರು.

‘ಅಂತರ್ಜಲ ವೃದ್ಧಿ, ಸಸಿ ನೆಡುವ ಕಾರ್ಯಕ್ರಮ ಆಗುತ್ತಿಲ್ಲ. ಪಾಲಿಕೆ ವ್ಯಾಪ್ತಿಯಲ್ಲಿ ಮನೆಗಳನ್ನು ನಿರ್ಮಿಸುವಾಗ ಮಳೆನೀರು ಕೊಯ್ಲು ಕಡ್ಡಾಯವಾಗಿ ಮಾಡಬೇಕು. ಪಾಲಿಕೆ ಸೇರಿ ಎಲ್ಲ ಸ್ಥಳೀಯ ಸಂಸ್ಥೆಗಳೂ ಏನೂ ಗೊತ್ತಿಲ್ಲ ಎಂಬಂತೆ ನಟಿಸುತ್ತಿವೆ’ ಎಂದು ದೂರಿದರು.

‘ಅಂತರ್ಜಲ ವೃದ್ಧಿಗಾಗಿ ಗಿಡ ನೆಡದೇ ಹೋದರೆ ಮುಂದಿನ ದಿನಗಳಲ್ಲಿ ಎಲ್ಲದಕ್ಕೂ ಹಾಹಾಕಾರ ಪಡಬೇಕಾಗಲಿದೆ. ಇದೇ ವಿಚಾರದ ಬಗ್ಗೆ ರಾಜ್ಯ ಮಟ್ಟದ ಸಭೆಯನ್ನು ದಾವಣಗೆರೆಯಲ್ಲಿ ನಡೆಸುವ ಉದ್ದೇಶವಿದೆ’ ಎಂದು ತಿಳಿಸಿದರು.

ಮುಖಂಡರಾದ ಪೂಜಾರ್ ಅಂಜಿನಪ್ಪ, ರಾಂಪುರ ಬಸವರಾಜ್, ಮೀಯಾಪುರ ತಿರುಮಲೇಶ್, ಹೆಬ್ಬಾಳು ಶಿವಯೋಗಿ, ನಾಗರಕಟ್ಟೆ ಜಯನಾಯ್ಕ, ಸೋಮಗೊಂಡು ಇತರರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260426-43-93005794

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.