ದಾವಣಗೆರೆ: ಕಾಯಮಾತಿ, ಸಮಾನ ಕೆಲಸಕ್ಕೆ ಸಮಾನ ವೇತನ, ಸೇವಾ ಭದ್ರತೆಯಂತಹ ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ನಗರದಲ್ಲಿ ಅಖಿಲ ಕರ್ನಾಟಕ ಸರ್ಕಾರಿ ಪರವಾನಗಿ ಭೂಮಾಪಕರ ಸಂಘದ ಸದಸ್ಯರು ಮಂಗಳವಾರ ಬೃಹತ್ ಪ್ರತಿಭಟನೆ ನಡೆಸಿದರು. ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ಭೂಮಾಪಕರು ಹೋರಾಟದ ಮೂಲಕ ಶಕ್ತಿ ಪ್ರದರ್ಶಿಸಿದರು.

ಹೈಸ್ಕೂಲ್ ಮೈದಾನದಿಂದ ಪ್ರತಿಭಟನಾ ಮೆರವಣಿಗೆ ಆರಂಭಿಸಿದ ಪ್ರತಿಭಟನಕಾರರು ಜಯದೇವ ವೃತ್ತಕ್ಕೆ ಆಗಮಿಸಿ ಮಾನವ ಸರಪಳಿ ನಿರ್ಮಿಸಿದರು.

‘ಅಯ್ಯಯ್ಯೋ ಅನ್ಯಾಯ..’ ‘ಬೇಕೇ ಬೇಕು ನ್ಯಾಯ ಬೇಕು..’ ‘ಭೂಮಾಪಕರನ್ನು ಕಾಯಂಗೊಳಿಸಿ’ ಇತ್ಯಾದಿ ಘೋಷಣೆಗಳನ್ನು ಕೂಗಿದರು. ಭೂಮಾಪಕರಿಗೆ ವಿವಿಧ ರೈತ ಸಂಘಟನೆಗಳ ಮುಖಂಡರು ಬೆಂಬಲ ಸೂಚಿಸಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

‘ದಶಕಗಳಿಂದ ಕಾರ್ಯ ನಿರ್ವಹಿಸುತ್ತಿರುವ ಪರವಾನಗಿ ಹೊಂದಿರುವ ಭೂಮಾಪಕರನ್ನು ಕಾಯಂಗೊಳಿಸಬೇಕು. ಸಮಾನ ವೇತನವನ್ನು ನೀಡಬೇಕು. ಈ ಬಗ್ಗೆ ಸರ್ಕಾರ ಕ್ರಮ ವಹಿಸಬೇಕು. ಭೂಮಾಪಕರ ಹೋರಾಟಕ್ಕೆ ನಮ್ಮ ಬೆಂಬಲ ಇದೆ’ ಎಂದು ಚಿತ್ರದುರ್ಗದ ಅಖಿಲ ಭಾರತ ಶ್ರೀಕೃಷ್ಣ ಯಾದವ ಮಹಾಸಂಸ್ಥಾನ ಮಠದ ಯಾದವಾನಂದ ಸ್ವಾಮೀಜಿ ಹೇಳಿದರು.

‘ಇದೊಂದು ಐತಿಹಾಸಿಕ ಹೋರಾಟವಾಗಿದೆ. ಸಿದ್ದರಾಮಯ್ಯ ಅವರು ವಿರೋಧ ಪಕ್ಷದ ನಾಯಕರಾಗಿದ್ದಾಗ ವಿಧಾನಸೌಧದಲ್ಲಿ ಭೂಮಾಪಕರ ಪರ ಧ್ವನಿ ಎತ್ತಿದ್ದರು. ಆದರೀಗ ಅವರೇ ಮುಖ್ಯಮಂತ್ರಿ ಆಗಿದ್ದರೂ, ಬೇಡಿಕೆ ಈಡೇರಿಸುತ್ತಿಲ್ಲ. ನುಡಿದಂತೆ ನಡೆದಿದ್ದೇವೆ ಎನ್ನುವ ರಾಜ್ಯ ಕಾಂಗ್ರೆಸ್ ಸರ್ಕಾರ ಭೂಮಾಪಕರ ಬೇಡಿಕೆಗಳನ್ನು ಈಡೇರಿಸಲಿ’ ಎಂದು ರೈತ ಮುಖಂಡ ಹುಚ್ಚವ್ವನಹಳ್ಳಿ ಮಂಜುನಾಥ್ ಆಗ್ರಹಿಸಿದರು.

‘ನಮ್ಮ ಕಷ್ಟಕರ ಕೆಲಸಕ್ಕೆ ಸರ್ಕಾರ ಬಿಸ್ಕತ್ತು ಹಾಕುವಂತೆ ವರ್ತಿಸುತ್ತಿದೆ. ನಮ್ಮ ಶ್ರಮಕ್ಕೆ ಸರ್ಕಾರ ಸರಿಯಾಗಿ ಸ್ಪಂದಿಸಿಲ್ಲ. ಇದುವರೆಗೂ ನಮ್ಮ ಕೈಹಿಡಿದು ಬದುಕಿಗೆ ಆಸರೆಯಾದವರು ರೈತರು ಮಾತ್ರ. ರೈತಾಪಿ ವರ್ಗ ನಮ್ಮ ಬದುಕಿಗೆ ಬಲ ನೀಡಿದೆ. ಇನ್ನಾದರೂ ಸರ್ಕಾರ ಎಚ್ಚೆತ್ತುಕೊಂಡು ನಮ್ಮ ಹೋರಾಟಕ್ಕೆ ಸ್ಪಂದಿಸಲಿ. ಇಲ್ಲವಾದರೆ ರೈತರೊಂದಿಗೆ ಸೇರಿ ಚಳವಳಿಯನ್ನು ತೀವ್ರಗೊಳಿಸಲಾಗುವುದು’ ಎಂದು ಸಂಘದ ಗೌರವಾಧ್ಯಕ್ಷ ಕೆ.ಪಿ.ಭಾರ್ಗವಲು ಎಚ್ಚರಿಸಿದರು.

‘ಭೂಮಾಪಕರು ಯಾರ ಪಾಲನ್ನೂ ಕೇಳುತ್ತಿಲ್ಲ. ಕೆಲಸಕ್ಕೆ ಗೌರವಯುತವಾದ ಕೂಲಿ ಕೊಡಿ ಎಂದು ಕೇಳುತ್ತಿದ್ದಾರೆ. ಇಲ್ಲಿ ಸೇರಿರುವವರು ಬಿಎ, ಬಿಕಾಂನಂತಹ ಪದವಿಗಳನ್ನು ಮುಗಿಸಿದ್ದಾರೆ. ಕೂಲಿ ಕಾರ್ಮಿಕರು, ಕಟ್ಟಡ ಕಾರ್ಮಿಕರಿಗೂ ಕನಿಷ್ಠ ವೇತನ ದೊರೆಯುತ್ತಿದೆ. ಆದರೆ, ರೈತರ ಬದುಕನ್ನು ಹಸನುಗೊಳಿಸಲು ಶ್ರಮಿಸುತ್ತಿರುವ ಭೂಮಾಪಕರ ಬೆವರಿಗೆ ತಕ್ಕ ಪ್ರತಿಫಲ ಸಿಗುತ್ತಿಲ್ಲ’ ಎಂದು ನವನಿರ್ಮಾಣ ವೇದಿಕೆಯ ಅಧ್ಯಕ್ಷ ಮಹಲಿಂಗಪ್ಪ ಆಕ್ರೋಶ ವ್ಯಕ್ತಪಡಿಸಿದರು.

ಬಳಿಕ ಪ್ರತಿಭಟನಕಾರರು ಜಯದೇವ ವೃತ್ತದಿಂದ ಅರುಣ ಸರ್ಕಲ್, ಕೋರ್ಟ್ ವೃತ್ತ ಹಾಗೂ ಸಂಗೊಳ್ಳಿ ರಾಯಣ್ಣ ವೃತ್ತದ ಮೂಲಕ ಕಾಲ್ನಡಿಗೆ ಜಾಥಾ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಮನವಿ ಪತ್ರ ಸಲ್ಲಿಸಿದರು.

ರೈತ ಮುಖಂಡ ತೇಜಸ್ವಿ ಪಟೇಲ್ ಸೇರಿದಂತೆ ಸಂಘಟನೆಯ ಪದಾಧಿಕಾರಿಗಳು, ಸದಸ್ಯರು ಹಾಗೂ ರೈತರು ಹೋರಾಟದಲ್ಲಿ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260520-43-1540468918

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.