ಚನ್ನಗಿರಿ: ‘ಜಿಲ್ಲಾ ಮಾದಿಗ ಮಹಾಸಭಾದಿಂದ ಮೇ 25ರಂದು ದಾವಣಗೆರೆಯ ಶಿವಯೋಗಿ ಮಂದಿರದಲ್ಲಿ ಜಿಲ್ಲಾಮಟ್ಟದ ಕಾರ್ಯಾಗಾರ, ಪ್ರತಿಭಾ ಪುರಸ್ಕಾರ ಮತ್ತು ಅಭಿನಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ’ ಎಂದು ಮಾದಿಗ ಸಮಾಜದ ತಾಲ್ಲೂಕು ಘಟಕದ ಅಧ್ಯಕ್ಷ ಎಚ್. ಪ್ರಕಾಶ್ ತಿಳಿಸಿದರು.

‘ಜಿಲ್ಲಾ ಮಾದಿಗ ಮಹಾಸಭಾ ಅಂಬೇಡ್ಕರ್ ಆಶಯದಂತೆ ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡಿದೆ. ಸಮುದಾಯದ ವಿದ್ಯಾರ್ಥಿಗಳನ್ನು ಉನ್ನತ ಶಿಕ್ಷಣಕ್ಕೆ ಸಜ್ಜುಗೊಳಿಸುವ ಸಲುವಾಗಿ ಶೈಕ್ಷಣಿಕ ಕಾರ್ಯಾಗಾರ, ವಿಚಾರ ಸಂಕಿರಣ ಆಯೋಜಿಸುತ್ತಿದ್ದು, ಸಂಪನ್ಮೂಲ ವ್ಯಕ್ತಿಗಳಿಂದ ಮಾಹಿತಿ ನೀಡಲಾಗುತ್ತಿದೆ. 2025-26ನೇ ಸಾಲಿನಲ್ಲಿ ತಾಲ್ಲೂಕಿನಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಅತಿಹೆಚ್ಚು ಅಂಕ ಗಳಿಸಿದ 132 ಹಾಗೂ ಪಿಯು ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ 42 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಸನ್ಮಾನಿಸಲಾಗುವುದು’ ಎಂದು ಈಚೆಗೆ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

‘ಎಡಗೈ ಸಮುದಾಯಕ್ಕೆ ಕಾಂಗ್ರೆಸ್ ಸರ್ಕಾರ ಶೇ 5.25ರಷ್ಟು ಒಳ ಮೀಸಲಾತಿ ಕಲ್ಪಿಸಿದೆ. ಇದಕ್ಕಾಗಿ ಸಚಿವ ಸಂಪುಟದ ಸದಸ್ಯರು, ಶಾಸಕರಿಗೆ ಅಭಿನಂದನಾ ಸಮಾರಂಭ ನಡೆಸಲಾಗುತ್ತಿದೆ. ತಾಲ್ಲೂಕಿನ ಮಾದಿಗ ಸಮಾಜದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು’ ಎಂದು ಮನವಿ ಮಾಡಿದರು.

ಬಗರ್ ಹುಕುಂ ಸಮಿತಿ ಸದಸ್ಯ ಶೇಖರಪ್ಪ, ಮಾದಿಗ ಸಮಾಜದ ಗೌರವಾಧ್ಯಕ್ಷ ಬಿ.ಮಂಜುನಾಥ್, ಕಾರ್ಯದರ್ಶಿ ಸಿ.ಎಚ್. ದೀಪಕ್ ಕುಮಾರ್, ಪಿ.ರುದ್ರಪ್ಪ, ಆರ್. ಮಂಜಣ್ಣ, ಮಹೇಶ್ವರಪ್ಪ, ಡಿ.ಎಸ್. ರಮೇಶ್ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260524-43-1590269693

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.