ಭಾನುವಾರ, ಜುಲೈ 25, 2021
22 °C

ದಾವಣಗೆರೆ: ಟ್ರ್ಯಾಕ್ಟರ್ ನಿಂದ ಬಿದ್ದು ವ್ಯಕ್ತಿ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನ್ಯಾಮತಿ: ಸಮೀಪದ ಕುಂಕುವ ಗ್ರಾಮದಲ್ಲಿ ಟ್ರ್ಯಾಕ್ಟರ್ ಪಲ್ಟಿಯಾಗಿ ವ್ಯಕ್ತಿಯೊಬ್ಬರು ಶನಿವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ.

ಗ್ರಾಮದ  ಟ್ರಾಕ್ಟರ್ ಮಾಲೀಕ ಲೋಕೇಶಯ್ಯ (55) ಮೃತಪಟ್ಟವರು. ವಾಹನವೊಂದನ್ನು ಹಿಂದಿಕ್ಕುವ ಭರದಲ್ಲಿ ವೇಗವಾಗಿ ಹೋಗುತ್ತಿದ್ದಾಗ ರಸ್ತೆ ಬದಿಯಲ್ಲಿ ಕಾಮಗಾರಿಗೆಂದು ರಾಶಿ ಹಾಕಿದ್ದ ಜಲ್ಲಿಕಲ್ಲುಗಳ ಮೇಲೆ ಟ್ರೈಲರ್ ಹತ್ತಿದೆ. ಲೋಕೇಶಯ್ಯ ಅವರು ಭಯದಿಂದ ಸೀಟಿನಿಂದ ಕೆಳಗೆ ಜಿಗಿದು ತೀವ್ರವಾಗಿ ಗಾಯಗೊಂಡು ಮೃತಪಟ್ಟಿದ್ದಾರೆ.

ನ್ಯಾಮತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು