ಶುಕ್ರವಾರ, ಮೇ 27, 2022
23 °C

ದಾವಣಗೆರೆ: ಮಾರ್ಚ್‌ 13ರಿಂದ 16ರವರೆಗೆ ದುಗ್ಗಮ್ಮನ ಜಾತ್ರೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದಾವಣಗೆರೆ: ನಗರ ದೇವತೆ ದುರ್ಗಾಂಬಿಕಾ ದೇವಿಯ ಜಾತ್ರಾ ಮಹೋತ್ಸವ ಮಾರ್ಚ್ 13ರಿಂದ 16ರ ವರೆಗೆ ನಡೆಯಲಿದೆ ಎಂದು ದೇವಸ್ಥಾನ ಆಡಳಿತ ಸಮಿತಿಯ ಗೌರವಾಧ್ಯಕ್ಷ, ಶಾಸಕ ಶಾಮನೂರು ಶಿವಶಂಕರಪ್ಪ ತಿಳಿಸಿದರು.

ದುರ್ಗಾಂಬಿಕಾ ದೇವಸ್ಥಾನದ ಸಭಾಂಗಣದಲ್ಲಿ ಗುರುವಾರ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಕೊರೊನಾ ಕಡಿಮೆಯಾಗುವ ನಿರೀಕ್ಷೆ ಇದೆ. ಅಲ್ಲದೇ ಈಗ ಕೊರೊನಾದಿಂದ ಜೀವಾಪಾಯಗಳು ಉಂಟಾಗುತ್ತಿಲ್ಲ. ಹಾಗಾಗಿ ಜಾತ್ರೆ ನಡೆಸಲಾಗುವುದು ಎಂದು ತಿಳಿಸಿದರು.

ಮಾರ್ಚ್ 13ರಂದು ಬೆಳಿಗ್ಗೆ ದೇವಿಗೆ ಪಂಚಾಮೃತ ಅಭಿಷೇಕ, ರಾತ್ರಿ ಕಂಕಣಧಾರಣೆ ಮಾಡಲಾಗುವುದು. ಅಲ್ಲದೇ ಸಾರ ಹಾಕಲಾಗುವುದು. ಮಾರ್ಚ್ 14 ಮತ್ತು 15ರಂದು ದೇವಿಗೆ ವಿಶೇಷ ಪೂಜೆ ನಡೆಯಲಿದೆ. ಮಾರ್ಚ್‌ 16ರಂದು ಚರಗ ಚೆಲ್ಲುವ ಕಾರ್ಯಕ್ರಮ ನಡೆಸಲಾಗುವುದು ಎಂದು ಮಾಹಿತಿ ನೀಡಿದರು.

ಸಭೆಯಲ್ಲಿ ಧರ್ಮದರ್ಶಿ ಗೌಡ್ರ ಚನ್ನಬಸಪ್ಪ ಸೇರಿದಂತೆ ಟ್ರಸ್ಟಿಗಳು, ಸಾರ್ವಜನಿಕರು, ಪುರೋಹಿತರು ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು