ದಾವಣಗೆರೆ: ‘ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ಅವರ ಜನ್ಮದಿನಾಚರಣೆಯ ಅಂಗವಾಗಿ ಸಾಮೂಹಿಕ ವಿವಾಹ ಮಹೋತ್ಸವವನ್ನು ಎಂಬಿಎ ಕಾಲೇಜು ಮೈದಾನದಲ್ಲಿ ಜೂನ್ 17ರಂದು ಹಮ್ಮಿಕೊಳ್ಳಲಾಗಿದೆ’ ಎಂದು ಎಸ್.ಎಸ್. ಮಲ್ಲಿಕಾರ್ಜುನ್ ಅಭಿಮಾನಿ ಬಳಗದ ಮುದೇಗೌಡರ ಗಿರೀಶ್ ತಿಳಿಸಿದರು.

‘ಸಾಮೂಹಿಕ ವಿವಾಹದಲ್ಲಿ ಮದುವೆಯಾಗುವ ವಧುವಿಗೆ ಬಟ್ಟೆ, ಕಾಲುಂಗುರ ಮತ್ತು ವರನಿಗೆ ಬಟ್ಟೆಯನ್ನು ಉಚಿತವಾಗಿ ನೀಡಲಾಗುತ್ತದೆ. ಎಲ್ಲ ಧರ್ಮದ ವಧು–ವರರಿಗೆ ಆಯಾ ಧರ್ಮದ ಸಂಪ್ರದಾಯದ ಪ್ರಕಾರ ವಿವಾಹ ಮಹೋತ್ಸವ ನೆರವೇರಿಸಲಾಗುತ್ತದೆ’ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

‘ಮದುವೆಗೆ ಸರ್ಕಾರ ನಿಗದಿಪಡಿಸಿದ ವಯಸ್ಸಿಗೆ ಸಂಬಂಧಿಸಿದ ದಾಖಲೆಗಳನ್ನು ವಧು–ವರರು ಒದಗಿಸಬೇಕು. ವಿಧುರ–ವಿಧವೆ ಮದುವೆಗೂ ಅವಕಾಶವಿದ್ದು, ಅಗತ್ಯ ದಾಖಲೆಗಳನ್ನು ಕುಟುಂಬಗಳು ಪೂರೈಸಬೇಕು. ವಿವಾಹ ಮಹೋತ್ಸವಕ್ಕೆ ಆಗಮಿಸುವ ಎಲ್ಲರಿಗೂ ಊಟದ ವ್ಯವಸ್ಥೆ ಮಾಡಲಾಗುತ್ತದೆ. ಬೇರೆ ತಾಲ್ಲೂಕುಗಳಿಂದ ಬರುವವರಿಗೆ ಒಂದು ದಿನದ ವಸತಿ ಸೌಲಭ್ಯ ಕಲ್ಪಿಸಲಾಗುತ್ತದೆ’ ಎಂದು ವಿವರಿಸಿದರು.

‘ಆಸಕ್ತರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರ ಜನಸಂಪರ್ಕ ಕಚೇರಿಗೆ ಸಂಪರ್ಕಿಸಿ ಜೂನ್ 10ರೊಳಗೆ ಹೆಸರು ನೋಂದಣಿ ಮಾಡಿಕೊಳ್ಳಬೇಕು. ಹೆಚ್ಚಿನ ಮಾಹಿತಿಗೆ 98440 60804, 97428 91069ಗೆ ಸಂಪರ್ಕಿಸಬಹುದು’ ಎಂದರು.

ಮಹಾನಗರ ಪಾಲಿಕೆಯ ಮಾಜಿ ಸದಸ್ಯ ಎ. ನಾಗರಾಜ್, ಕಾಂಗ್ರೆಸ್ ಮುಖಂಡರಾದ ಎಸ್. ಮಲ್ಲಿಕಾರ್ಜುನ, ಗುರುಸ್ವಾಮಿ, ಜಿ.ಎಸ್. ನಿಂಗಪ್ಪ, ಮಂಜುನಾಥ್, ಕಕ್ಕರಗೊಳ್ಳದ ಶಾಂತರಾಜ್ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260512-43-369997168

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.