ದಾವಣಗೆರೆ: ರಾಜ್ಯ ಸರ್ಕಾರ ರೂಪಿಸಿದ ‘ಗ್ಯಾರಂಟಿ ಯೋಜನೆ’ಯ ಅನುಷ್ಠಾನದಲ್ಲಿ ದಾವಣಗೆರೆ ಜಿಲ್ಲೆ ಶೇ 98ರಷ್ಟು ಪ್ರಗತಿ ಸಾಧಿಸುವ ಮೂಲಕ ಇಡೀ ರಾಜ್ಯಕ್ಕೆ ಮಾದರಿಯಾಗಿದೆ ಎಂದು ರಾಜ್ಯ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್.ಎಂ. ರೇವಣ್ಣ ಅಭಿಪ್ರಾಯಪಟ್ಟರು.

ನಗರದ ಗುಂಡಿ ಮಹಾದೇವಪ್ಪ ಕಲ್ಯಾಣ ಮಂಟಪದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ, ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಗಳ ವತಿಯಿಂದ ಬುಧವಾರ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.

‘ಗ್ಯಾರಂಟಿ ಯೋಜನೆಗಳು ಎಲ್ಲರಿಗೂ ಶಕ್ತಿ ನೀಡುತ್ತಿವೆ. ಇವುಗಳು ಸರ್ವೋದಯ ತತ್ವವವನ್ನು ಒಳಗೊಂಡಿವೆ. ಗದಗ ಜಿಲ್ಲೆಯ ತಿಮ್ಮಾಪುರ ಗ್ರಾಮದ ಮಹಿಳೆಯರು ಗ್ಯಾರಂಟಿ ಯೋಜನೆಯ ಹಣವನ್ನು ಒಟ್ಟುಗೂಡಿಸಿ ₹ 17 ಲಕ್ಷ ವೆಚ್ಚದಲ್ಲಿ ದೇವಸ್ಥಾನ ಕಟ್ಟಿದ್ದಾರೆ. ಇದು ಈ ಯೋಜನೆಗಳ ಯಶಸ್ಸಿಗೆ ಸಾಕ್ಷಿಯಾಗಿದೆ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

‘ಡಿಜಿಟಲ್ ಕ್ರಾಂತಿಯ ಮೂಲಕ ಮಧ್ಯವರ್ತಿಗಳಿಲ್ಲದೆ ನೇರವಾಗಿ ಫಲಾನುಭವಿಗಳ ಖಾತೆಗೆ ಹಣ ತಲುಪುತ್ತಿದೆ. ಇದು ಪಾರದರ್ಶಕತೆಯನ್ನು ದೃಢೀಕರಿಸಿದೆ. ಈ ಯೋಜನೆಗಳಿಂದ ರಾಜ್ಯ ದಿವಾಳಿಯಾಗುತ್ತದೆ ಎನ್ನುವವರ ಟೀಕೆಗಳಿಗೆ ಜನರ ಬದುಕಿನಲ್ಲಿ ಕಂಡುಬಂದಿರುವ ಬದಲಾವಣೆಯೇ ಉತ್ತರ’ ಎಂದು ಹೇಳಿದರು.

ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ದಿನೇಶ್ ಗೂಳಿಗೌಡ, ‘ಗ್ಯಾರಂಟಿ ಯೋಜನೆಗಳು ರಾಜ್ಯದ ಬಹುತೇಕ ಮಹಿಳೆಯರಿಗೆ ತಲುಪುತ್ತಿವೆ. ಗೃಹಲಕ್ಷ್ಮಿ ಯೋಜನೆಯಡಿ ರಾಜ್ಯದ 1.24 ಕೋಟಿ ಮಹಿಳೆಯರಿಗೆ 26 ಕಂತುಗಳ ಮೂಲಕ ₹ 68,628 ಕೋಟಿ ನೀಡಲಾಗಿದೆ. ಪ್ರತಿ ಮಹಿಳೆಯ ಖಾತೆಗೆ ₹ 52,000 ತಲುಪಿದೆ’ ಎಂದರು.

‘ಶಕ್ತಿ ಯೋಜನೆಯಡಿ ₹ 17,606 ಕೋಟಿ ವೆಚ್ಚ ಮಾಡಲಾಗಿದೆ. ಅನ್ನಭಾಗ್ಯ ಯೋಜನೆಯಡಿ ₹ 18,000 ಕೋಟಿ ವ್ಯಯಿಸಲಾಗಿದೆ. ಗೃಹಜ್ಯೋತಿ ಯೋಜನೆಯಡಿ ₹ 27,600 ಕೋಟಿ ಬಿಡುಗಡೆ ಮಾಡಲಾಗಿದೆ. ಯುವನಿಧಿ ಯೋಜನೆಯಡಿ ₹ 916 ಕೋಟಿ ನಿರುದ್ಯೋಗಿ ಭತ್ಯೆ ನೀಡಲಾಗಿದೆ. ಸರ್ಕಾರವು ಗ್ಯಾರಂಟಿಗಳ ಜೊತೆಗೆ ಅಭಿವೃದ್ಧಿಗೂ ಆದ್ಯತೆ ನೀಡಿದೆ’ ಎಂದರು.

‘₹ 4.09 ಲಕ್ಷ ಕೋಟಿ ಬಜೆಟ್ನಲ್ಲಿ ₹ 1.36 ಲಕ್ಷ ಕೋಟಿಯನ್ನು ಅಭಿವೃದ್ಧಿ ಕಾಮಗಾರಿಗಳಿಗೆ ಮೀಸಲಿಡಲಾಗಿದೆ. ₹ 22,600 ಕೋಟಿ ಶೂನ್ಯ ಬಡ್ಡಿ ದರದ ಸಾಲ ನೀಡಿ ರೈತರಿಗೆ ಆಸರೆಯಾಗಿದೆ. ಇದರಿಂದ ಕೃಷಿ ಚಟುವಟಿಕೆಗಳಿಗೆ ಉತ್ತೇಜನ ಸಿಕ್ಕಿದೆ’ ಎಂದರು.

ನಗರದ ಬಿ.ಆರ್. ಅಂಬೇಡ್ಕರ್ ವೃತ್ತದಿಂದ ಗುಂಡಿ ವೃತ್ತದವರೆಗೆ ಜಾಥಾ ನಡೆಯಿತು. ಜಾಗೃತ ಕರ್ನಾಟಕದ ರಾಜ್ಯ ಸಮಿತಿ ಸದಸ್ಯ ಜಿ.ಕೆ. ಮೋಹನ್ ಗ್ಯಾರಂಟಿ ಯೋಜನೆಗಳ ಕುರಿತು ವಿಷಯ ಮಂಡಿಸಿದರು.

ಶಾಸಕರಾದ ಡಿ.ಜಿ. ಶಾಂತನಗೌಡ, ಕೆ.ಎಸ್. ಬಸವಂತಪ್ಪ, ಅಬ್ದುಲ್ ಜಬ್ಬಾರ್, ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಎಸ್.ಆರ್. ಪಾಟೀಲ, ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಅಸಗೋಡು ಜಯಸಿಂಹ, ಜೀವ ವೈವಿಧ್ಯ ಮಂಡಳಿ ಅಧ್ಯಕ್ಷ ವಡ್ನಾಳು ಜಗದೀಶ್, ಬಯಲುಸೀಮೆ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಎಚ್.ಬಿ. ಮಂಜಪ್ಪ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಶಾಮನೂರು ಬಸವರಾಜು, ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗಿತ್ತೆ ಮಾಧವ ವಿಠ್ಠಲರಾವ್ ಹಾಜರಿದ್ದರು.ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಕೇವಲ ಭರವಸೆಗಳಲ್ಲ. ಬಡವರ ಪಾಲಿನ ಆರ್ಥಿಕ ಶಕ್ತಿ. ಜನರಿಗೆ ಪಂಚಾಮೃತವಾಗಿರುವ ಈ ಯೋಜನೆಗಳನ್ನು ಸ್ಥಗಿತಗೊಳಿಸುವುದಿಲ್ಲ ಎಸ್.ಎಸ್. ಮಲ್ಲಿಕಾರ್ಜುನ್ ಜಿಲ್ಲಾ ಉಸ್ತುವಾರಿ ಸಚಿವ

ಸ್ವಾವಲಂಬನೆ ಮತ್ತು ಅಭಿವೃದ್ಧಿಗೆ ಒತ್ತು ನೀಡಿದ ‘ಗ್ಯಾರಂಟಿ’ ಯೋಜನೆಗಳ ಯಶೋಗಾಥೆಗಳು ಎಲ್ಲೆಡೆ ಸಿಗುತ್ತವೆ. ಟೀಕೆ ಮಾಡಿದವರೇ ಬೇರೆ ರಾಜ್ಯಗಳಲ್ಲಿ ಇದನ್ನು ಅನುಷ್ಠಾನಗೊಳಿಸಿದ್ದಾರೆ
- ಡಾ.ಪ್ರಭಾ ಮಲ್ಲಿಕಾರ್ಜುನ್, ಸಂಸದೆ

ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಕೇವಲ ಭರವಸೆಗಳಲ್ಲ. ಬಡವರ ಪಾಲಿನ ಆರ್ಥಿಕ ಶಕ್ತಿ. ಜನರಿಗೆ ಪಂಚಾಮೃತವಾಗಿರುವ ಈ ಯೋಜನೆಗಳನ್ನು ಸ್ಥಗಿತಗೊಳಿಸುವುದಿಲ್ಲ.
ಎಸ್.ಎಸ್. ಮಲ್ಲಿಕಾರ್ಜುನ್, ಜಿಲ್ಲಾ ಉಸ್ತುವಾರಿ ಸಚಿವ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.