ದಾವಣಗೆರೆ: ‘ಒಂದು ವೇಳೆ ಪ್ರಪಂಚದಲ್ಲಿ ಸುಳ್ಳುಗಳಿಗೂ ಆಸ್ಕರ್ ಪ್ರಶಸ್ತಿ ನೀಡುವಂತಿದ್ದರೆ ಅದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಿಗುತ್ತಿತ್ತು’ ಎಂದು ವಿಧಾನಪರಿಷತ್ ಮುಖ್ಯ ಸಚೇತಕ ಸಲೀಂ ಅಹಮ್ಮದ್ ವ್ಯಂಗ್ಯವಾಡಿದರು.

‘12 ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಮೋದಿ ಅವರು ಸುಳ್ಳು ಹೇಳುವುದು ಬಿಟ್ಟು ಬೇರೇನೂ ಕೆಲಸ ಮಾಡಿಲ್ಲ. ಉಪಚುನಾವಣೆಯ ಕಣದಲ್ಲಿ ಮುಂದಿನ 10 ದಿನಗಳಲ್ಲಿ ಬಿಜೆಪಿಯ ಸುಳ್ಳುಗಳನ್ನು ಜನರಿಗೆ ತಲುಪಿಸಲಿದ್ದೇವೆ. ರಾಜ್ಯದಲ್ಲಿ ಕಾಂಗ್ರೆಸ್ ನುಡಿದಂತೆ ನಡೆದಿದೆ. ಕೇಂದ್ರದಲ್ಲಿ ಬಿಜೆಪಿ ಏನು ಮಾಡಿದೆ’ ಎಂದು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಪ್ರಶ್ನಿಸಿದರು.

‘ಕಪ್ಪುಹಣ ಮರಳಿ ತರುವ ಹಾಗೂ ಉದ್ಯೋಗ ಸೃಷ್ಟಿಸುವುದಾಗಿ ನೀಡಿದ ಭರವಸೆಗಳು ಹುಸಿಯಾಗಿವೆ. ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದಾಗ ₹ 55 ಇದ್ದ ಲೀಟರ್ ಪೆಟ್ರೋಲ್ ಬೆಲೆ ₹ 104ಕ್ಕೆ ಹಾಗೂ ಎಲ್ಪಿಜಿ ಸಿಲಿಂಡರ್ ದರ ₹ 400ರಿಂದ ₹ 1,000ಕ್ಕೆ ಏರಿಕೆಯಾಗಿದೆ. ಕೋವಿಡ್ ಸಂದರ್ಭದಲ್ಲಿ ದೇಶದ ಜನರು ನರಕಯಾತನೆ ಅನುಭವಿಸಿದ್ದಾರೆ’ ಎಂದು ಆರೋಪಿಸಿದರು.

‘ರಾಜ್ಯದಿಂದ ಆಯ್ಕೆಯಾದ ಐವರು ಸಂಸದರು ಕೇಂದ್ರ ಸಚಿವರಾಗಿದ್ದಾರೆ. ಅನುದಾನ ಹಂಚಿಕೆಯಲ್ಲಿ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ ತಡೆಯುವ ಪ್ರಯತ್ನವನ್ನು ಯಾರೊಬ್ಬರೂ ಮಾಡು ತ್ತಿಲ್ಲ. ಮಹಾದಾಯಿ, ಮೇಕೆದಾಟು ಯೋಜನೆಗಳಿಗೆ ಕೇಂದ್ರ ಇನ್ನೂ ಅನುಮತಿ ನೀಡಿಲ್ಲ. ‘ಮನರೇಗಾ’ ಯೋಜನೆಯನ್ನು ಬದಲಿಸಿ ಮಹಾತ್ಮಾ ಗಾಂಧೀಜಿ ಅವರ ಆಶಯಗಳನ್ನು ಮಣ್ಣುಪಾಲು ಮಾಡಲಾಗಿದೆ’ ಎಂದು ದೂರಿದರು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಿ.ಬಸವರಾಜ್, ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಬಿ. ಮಂಜಪ್ಪ, ಬಿಎಂಟಿಸಿ ಅಧ್ಯಕ್ಷ ವಿ.ಎಸ್. ಆರಾಧ್ಯ, ಮುಖಂಡರಾದ ರಾಮಚಂದ್ರಪ್ಪ, ಚಾಂದ್ಪಾಷ, ಮಕಂದಾರ್, ಸೈಯದ್ ಖಾಲಿದ್, ಮೈನುದ್ದೀನ್ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260331-43-775853494

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.