ಗುರುವಾರ , ಮೇ 26, 2022
24 °C

ದಾವಣಗೆರೆ ಸಂಸದ ಸಿದ್ದೇಶ್ವರಗೆ ಕೋವಿಡ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದಾವಣಗೆರೆ: ಸಂಸದ ಜಿ.ಎಂ. ಸಿದ್ದೇಶ್ವರ ಅವರಿಗೆ ಕೋವಿಡ್‌ ಇರುವುದು ಮಂಗಳವಾರ ದೃಢಪಟ್ಟಿದೆ.
ಕೋವಿಡ್‌ ರೋಗ ಲಕ್ಷಣ ಅಲ್ಪ ಪ್ರಮಾಣದಲ್ಲಿ ಕಾಣಿಸಿಕೊಂಡಿದ್ದರಿಂದ ಮಂಗಳವಾರ ಮಧ್ಯಾಹ್ನ ಮಾದರಿಯನ್ನು ಪರೀಕ್ಷೆಗೆ ಕಳುಹಿಸಿಕೊಟ್ಟಿದ್ದರು.

ರಾತ್ರಿಯ ಹೊತ್ತಿಗೆ ಬಂದ ವರದಿಯು ಸಂಸದರಲ್ಲಿ ಕೊರೊನಾ ವೈರಸ್‌ ಇರುವುದನ್ನು ಖಚಿತಪಡಿಸಿದೆ.

‘ಕೋವಿಡ್‌ ಪರೀಕ್ಷೆ ಸಲುವಾಗಿ ಮಧ್ಯಾಹ್ನ ಮಾದರಿಯನ್ನು ಕಳುಹಿಸಿಕೊಟ್ಟಿದ್ದೆ. ಆ ಬಳಿಕ ಯಾವುದೇ ಕಾರ್ಯಕ್ರಮದಲ್ಲೂ ಪಾಲ್ಗೊಂಡಿಲ್ಲ. ಕೋವಿಡ್‌ ಪಾಸಿಟಿವ್‌ ಎಂದು ರಾತ್ರಿ ವರದಿ ಬಂದಿದೆ. ಆರೋಗ್ಯವಾಗಿದ್ದೇನೆ. ಜಿಎಂಐಟಿ ಗೆಸ್ಟ್‌ಹೌಸ್‌ನಲ್ಲಿ ಮುಂದಿನ ಏಳು ದಿನಗಳ ಕಾಲ ಹೋಂ ಐಸೋಲೇಷನ್‌ನಲ್ಲಿ ಇರುತ್ತೇನೆ’ ಎಂದು ಸಿದ್ದೇಶ್ವರ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು