ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಚನ್ನಗಿರಿ: ಶಿವಮೊಗ್ಗದಲ್ಲಿ ಮೋದಿ ಕಾರ್ಯಕ್ರಮ; ಪ್ರಯಾಣಿಕರ ಪರದಾಟ

Published 18 ಮಾರ್ಚ್ 2024, 16:09 IST
Last Updated 18 ಮಾರ್ಚ್ 2024, 16:09 IST
ಅಕ್ಷರ ಗಾತ್ರ

ಚನ್ನಗಿರಿ: ಸೋಮವಾರ ಶಿವಮೊಗ್ಗ ನಗರಕ್ಕೆ ನರೇಂದ್ರ ಮೋದಿ ಅವರ ಚುನಾವಣಾ ಪ್ರಚಾರ ಕಾರ್ಯಕ್ರಮ ಇದ್ದ ಕಾರಣ ತಾಲ್ಲೂಕಿನಿಂದ 200ಕ್ಕೂ ಹೆಚ್ಚು ಬಸ್‌ಗಳು ಕಾರ್ಯಕರ್ತರನ್ನು ಕರೆದುಕೊಂಡು ಹೋಗಿದ್ದರಿಂದ ಪಟ್ಟಣದಲ್ಲಿ ಬಸ್ ಸಂಚಾರ ವಿರಳವಾಗಿತ್ತು. ಇದರಿಂದ ಪ್ರಯಾಣಿಕರು ದೂರದ ಊರುಗಳಿಗೆ ಹೋಗಲು ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿದೆ.

ಬೆರಳಿಣಿಕೆಯಷ್ಟು ಪ್ರಮಾಣದಲ್ಲಿ ಖಾಸಗಿ ಹಾಗೂ ಕೆಎಸ್‌ಆರ್‌ಟಿಸಿ ಬಸ್‌ಗಳು ಸಂಚರಿಸಿದ್ದರಿಂದ ಪ್ರಯಾಣಿಕರು ದೂರದ ಊರುಗಳಿಗೆ ಹೋಗಲು ಗಂಟೆಗಟ್ಟಲೆ ಬಸ್ ನಿಲ್ದಾಣದಲ್ಲಿ ಬಿರು ಬಿಸಿಲಿನ ತಾಪದಲ್ಲಿ ನಿಂತು ಕಾಯುವಂತಾಗಿತ್ತು.

ಈ ತಾಲ್ಲೂಕಿನಲ್ಲಿ ಪ್ರತಿ ದಿನ 250ಕ್ಕಿಂತ ಹೆಚ್ಚು ಖಾಸಗಿ ಹಾಗೂ 150ಕ್ಕಿಂತ ಹೆಚ್ಚು ಕೆಎಸ್‌ಆರ್‌ಟಿಸಿ ಬಸ್‌ಗಳು ಸಂಚರಿಸುತ್ತವೆ. ಆದರೆ ಕಾರ್ಯಕ್ರಮದ ನಿಮಿತ್ತ 20ರಿಂದ 30 ಬಸ್‌ಗಳು ಮಾತ್ರ ಸಂಚಾರ ನಡೆಸಿದವು. ಬಸ್‌ಗಳ ಸಂಖ್ಯೆ ವಿರಳವಾಗಿದ್ದರಿಂದ ಪ್ರಯಾಣಿಕರು  ಪ್ರಯಾಸ ಪಡುವಂತಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT