ಹರಿಹರ (ದಾವಣಗೆರೆ): ಟ್ರಸ್ಟಿಗಳು ಹಾಗೂ ವಚನಾನಂದ ಸ್ವಾಮೀಜಿ ಬೆಂಬಲಿಗರ ನಡುವಣ ಸಂಘರ್ಷದ ಕಾರಣ ಕಾನೂನು ಸುವ್ಯವಸ್ಥೆ ಕಾಪಾಡಲು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಇಲ್ಲಿನ ವೀರಶೈವ ಲಿಂಗಾಯತ ಪಂಚಮಸಾಲಿ ಗುರುಪೀಠದ ಆವರಣದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ.

ಶಾಂತಿ ಕಾಪಾಡುವ ಉದ್ದೇಶದಿಂದ ಮೇ 4ರಿಂದ ಮೇ 31ರವರೆಗೆ ಗುರುಪೀಠದ ಆವರಣದಲ್ಲಿ ಯಾವುದೇ ಸಭೆ- ಸಮಾರಂಭ ಹಾಗೂ ಪತ್ರಿಕಾಗೋಷ್ಠಿಗಳನ್ನು ನಡೆಸದಂತೆ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯ ಕಲಂ– 163ರ ಅಡಿ ಸೋಮವಾರ ಆದೇಶ ಹೊರಡಿಸಿದ್ದಾರೆ.

‘ಮಾ.10 ರಿಂದ ಏ.27ರವರೆಗೆ ಮಠದಲ್ಲಿ ಟ್ರಸ್ಟಿಗಳು ಮತ್ತು ವಚನಾನಂದ ಸ್ವಾಮೀಜಿ ಬೆಂಬಲಿಗರು ಸರಣಿ ಸಭೆ ಹಾಗೂ ಪತ್ರಿಕಾಗೋಷ್ಠಿಗಳನ್ನು ನಡೆಸಿದ್ದಾರೆ. ಉದ್ರಿಕ್ತ ಭಾಷಣ ಮಾಡಿ, ಹೇಳಿಕೆ ನೀಡಿ, ಅವುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಬಿತ್ತರಿಸಿದ್ದಾರೆ. ಇದರಿಂದ ಸಾರ್ವಜನಿಕ ಶಾಂತಿಗೆ ಧಕ್ಕೆಯಾಗಿದೆ. ಪ್ರಾಣ ಹಾನಿಯಾಗುವ, ಮಠದ ಆಸ್ತಿಗೆ ಧಕ್ಕೆಯಾಗುವ ಸಾಧ್ಯತೆಗಳು ಇರುವುದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವರದಿ ನೀಡಿದ್ದಾರೆ. ಈ ಕಾರಣಕ್ಕೆ ನಿಷೇಧಾಜ್ಞೆ ಜಾರಿಗೊಳಿಸಲಾಗುತ್ತಿದೆ’ ಎಂದು ಆದೇಶದಲ್ಲಿ ವಿವರಿಸಲಾಗಿದೆ.

‘ನಿಷೇಧಾಜ್ಞೆಯು ಸಭೆ, ಸಮಾರಂಭ ಮತ್ತು ಪತ್ರಿಕಾಗೋಷ್ಠಿಗಳಿಗಷ್ಟೇ ಅನ್ವಯಿಸಲಿದ್ದು, ಗುರುಪೀಠದಲ್ಲಿ ನಡೆಯುವ ದೈನಂದಿನ ಧಾರ್ಮಿಕ ಪೂಜಾ ವಿಧಿ ವಿಧಾನಗಳಿಗೆ ಯಾವುದೇ ಅಡ್ಡಿಯಿರುವುದಿಲ್ಲ. ಮೇ 31ರವರೆಗೆ ಯಾವುದೇ ಬಣಗಳು ಶಕ್ತಿ ಪ್ರದರ್ಶನ ಮಾಡಲು ಆಸ್ಪದವಿಲ್ಲ’ ಎಂದು ತಿಳಿಸಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260505-51-1343424128

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.