ದಾವಣಗೆರೆ: ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದ ಪದಚ್ಯುತ ಪೀಠಾಧಿಪತಿ ವಚನಾನಂದ ಶ್ರೀ ಅವರು ಮಸಾಜ್ಗೆ ವಿದ್ಯಾರ್ಥಿಗಳನ್ನು ಬಳಸಿಕೊಂಡ ಆರೋಪ ಕುರಿತು ಮಾಹಿತಿ ನೀಡುವಂತೆ ಪೀಠದ ಧರ್ಮದರ್ಶಿಗಳು ಹಾಗೂ ಕಾರ್ಯದರ್ಶಿಗಳಿಗೆ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ನೋಟಿಸ್ ನೀಡಿದೆ.

‘ಶ್ರೀಗಳಿಂದ ಮಸಾಜ್ಗೆ ವಿದ್ಯಾರ್ಥಿಗಳ ಬಳಕೆ’ ಶೀರ್ಷಿಕೆಯಡಿ ‘ಪ್ರಜಾವಾಣಿ’ಯಲ್ಲಿ ಏ.15ರಂದು ವರದಿ ಪ್ರಕಟವಾಗಿದೆ. ಪೀಠದಲ್ಲಿ 5 ವರ್ಷಗಳಿಂದ ದಾಖಲಾದ ಮಕ್ಕಳ ವಿವರ ಸಲ್ಲಿಸಿ’ ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ನೋಟಿಸ್ನಲ್ಲಿ ತಿಳಿಸಿದ್ದಾರೆ. ನೋಟಿಸ್ ನೀಡಿ ಎರಡು ವಾರ ಕಳೆದಿದೆ. ಇದುವರೆಗೂ ಉತ್ತರ ಬಂದಿಲ್ಲ ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಕವಿತಾ ಟಿ.ಎನ್. ತಿಳಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260517-51-1181889392

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.