ದಾವಣಗೆರೆ: ಮಹಿಳೆಯ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ 41 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಗ್ರಾಮಾಂತರ ಠಾಣೆಯ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
.ದಾವಣಗೆರೆ: ಕ್ಷೇತ್ರನಾಥ ವೀರಭದ್ರಸ್ವಾಮಿ ಮಹಾರಥೋತ್ಸವ.
ತಾಲ್ಲೂಕಿನ ಹಾಲುವರ್ತಿಯ ಹನುಮಂತಪ್ಪ (82) ಬಂಧಿತ. ಆರೋಪಿಯನ್ನು ನ್ಯಾಯಾಧೀಶರ ಎದುರು ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಜಮೀನು ವಿಚಾರವಾಗಿ ನಡೆದ ಗಲಾಟೆಯಲ್ಲಿ ಮಹಿಳೆಯೊಬ್ಬರ ಮೇಲೆ ಆರೋಪಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದ. ಪ್ರಕರಣದ ತನಿಖೆ ನಡೆಸಿದ ಪೊಲೀಸರು, ನ್ಯಾಯಾಲಯಕ್ಕೆ ದೋಷಾರೋಪಪಟ್ಟಿ ಸಲ್ಲಿಸಿದ್ದರು. ವಿಚಾರಣೆಗೆ ಹಾಜರಾಗದ ಆರೋಪಿಯ ವಿರುದ್ಧದ ಪ್ರಕರಣವನ್ನು ಪೊಲೀಸರು 1989ರಲ್ಲಿ ಪತ್ತೆಯಾಗದ ಪ್ರಕರಣಗಳ ಪಟ್ಟಿಗೆ ಸೇರಿಸಿದ್ದರು.
.2027ಕ್ಕೆ ದಾವಣಗೆರೆ– ಚಿತ್ರದುರ್ಗ– ತುಮಕೂರು ನೇರ ರೈಲು ಮಾರ್ಗ ಪೂರ್ಣ: ವಿ.ಸೋಮಣ್ಣ.
ಪೊಲೀಸ್ ವರಿಷ್ಠಾಧಿಕಾರಿ ಎಚ್.ಟಿ. ಶೇಖರ್ ಸೂಚನೆಯ ಮೇರೆಗೆ ಆರೋಪಿಗಳ ಪತ್ತೆಗೆ ಇನ್ಸ್ಪೆಕ್ಟರ್ ಅಣ್ಣಯ್ಯ ಕೆ.ಟಿ. ನೇತೃತ್ವದಲ್ಲಿ ತಂಡ ರಚಿಸಲಾಗಿತ್ತು. ತನಿಖೆ ಆರಂಭಿಸಿದ ಪೊಲೀಸರು ಆರೋಪಿಯನ್ನು ತಾಲ್ಲೂಕಿನ ಹಾಲೇಕಲ್ಲು ಗ್ರಾಮದಲ್ಲಿ ಪತ್ತೆ ಮಾಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದ ಇನ್ನೂ ಇಬ್ಬರು ಆರೋಪಿಗಳು ಮೃತಪಟ್ಟಿದ್ದು ಖಚಿತವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
.ದಾವಣಗೆರೆ | ದುರ್ಗಾಂಬಿಕಾ ದೇವಿಗೆ ಮಹಾಪೂಜೆ: ಹರಕೆ ತೀರಿಸಿ ಪುನೀತರಾದ ಭಕ್ತರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.