ಮಂಗಳವಾರ, ಆಗಸ್ಟ್ 3, 2021
28 °C

ದಾವಣಗೆರೆ: ಪೊಲೀಸ್ ಕಾನ್‌ಸ್ಟೇಬಲ್‌ಗೆ ಕೊರೊನಾ ಸೋಂಕು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದಾವಣಗೆರೆ: ಕೋವಿಡ್ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸಿದ ಬಡಾವಣೆ ಪೊಲೀಸ್ ಠಾಣೆಯ ಹೆಡ್ ಕಾನ್‌ಸ್ಟೇಬಲ್‌ಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ‌.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ಈ ಬಗ್ಗೆ ಮಾಹಿತಿ ನೀಡಿದರು.

ಎರಡು ದಿನಗಳ ಹಿಂದೆ ಗಂಟಲು ದ್ರವ ಸಂಗ್ರಹ ಮಾಡಿ ಕಳುಹಿಸಲಾಗಿತ್ತು. ಕೆಲ ದಿನ ದಾವಣಗೆರೆ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಕೆಲಸ ಮಾಡಿದ್ದರು. ಜೊತೆಗಿದ್ದ ಸಿಬ್ಬಂದಿಯ ವರದಿ ನೆಗೆಟಿವ್ ಬಂದಿದೆ.

ಸೋಂಕಿತ ಫೊಲೀಸ್ ಸಿಬ್ಬಂದಿಯ ಕುಟುಂಬ ಸದಸ್ಯರ  ಮಾದರಿ ಸಂಗ್ರಹ ಮಾಡಲಾಗಿದೆ.

ಸೋಂಕಿತರಿಗೆ ಜಿಲ್ಲಾ  ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಈ ಹಿಂದೆ ಕಂಟೈಮೆಂಟ್ ಜೋನ್‌ನಲ್ಲಿ ಸೇವೆ ಮಾಡಿದ ಪೊಲೀಸ್ ಕಾನ್‌ಸ್ಟೇಬಲ್‌ಗೆ ಸೋಂಕು ಪತ್ತೆ ಆಗಿತ್ತು. ಅವರು ಗುಣಮುಖರಾಗಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು