ದಾವಣಗೆರೆ: ‘ಧೂಡಾ‘ ಅಧ್ಯಕ್ಷ ದಿನೇಶ್ ಶೆಟ್ಟಿ ಅವರು ಶಾಮನೂರು ಕುಟುಂಬವನ್ನು ಓಲೈಸುವ ಉದ್ದೇಶದಿಂದ ಹರಿಹರ ಶಾಸಕ ಬಿ.ಪಿ. ಹರೀಶ್ ವಿರುದ್ಧ ನಿರಾಧಾರ ಆರೋಪ ಮಾಡುತ್ತಿದ್ದಾರೆ’ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ದೊಗ್ಗಳ್ಳಿ ವೀರೇಶ್ ಆರೋಪಿಸಿದರು.

ಬುಧವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.

‘ತಮ್ಮ ಕುರ್ಚಿಗೆ ಕುತ್ತು ಬರುವ ಮುನ್ಸೂಚನೆ ದಿನೇಶ್ ಅವರಿಗೆ ಸಿಕ್ಕಿದ್ದು, ಅಭಿವೃದ್ಧಿ ವಿಚಾರ ಮುಂದಿಟ್ಟುಕೊಂಡು ಶಾಸಕರ ವಿರುದ್ಧ ವಿನಾಕಾರಣ ಆರೋಪ ಹೊರಿಸುತ್ತಿದ್ದಾರೆ. ಇದರಲ್ಲಿ ಸತ್ಯಾಂಶವಿಲ್ಲ’ ಎಂದರು.

‘ನಗರದಲ್ಲಿ ಜರ್ಮನ್ ಶೈಲಿಯ ವೃತ್ತ ನಿರ್ಮಾಣ, ಗುಂಡಿ ವೃತ್ತದ ನವೀಕರಣ ಹೆಸರಿನಲ್ಲಿ ಹಣವನ್ನು ಪೋಲು ಮಾಡಲಾಗುತ್ತಿದೆ. ಈ ಅನುದಾನವನ್ನು ಬೇರೆ ಕಾಮಗಾರಿಗಳಿಗೆ ಬಳಸಬಹುದಿತ್ತು’ ಎಂದು ಅವರು ಹೇಳಿದರು.

‘ಉಪಚುನಾವಣೆಯಲ್ಲಿ ಟಿಕೆಟ್ ಕೇಳಿದ ಅಲ್ಪಸಂಖ್ಯಾತರ ಮೇಲೆ ಕಾಂಗ್ರೆಸ್ ಗದಾಪ್ರಹಾರ ಮಾಡಿದೆ. ಇದನ್ನು ನೋಡಿದರೆ ಪಕ್ಷದ ಮುಖಂಡರು ಸೋಲನ್ನು ಒಪ್ಪಿಕೊಂಡಂತೆ ಕಾಣುತ್ತಿದೆ’ ಎಂದು ಆರೋಪಿಸಿದರು.

ಅಣಬೇರು ಜೀವನ್ಮೂರ್ತಿ, ವಸಂತ್ ಕುಮಾರ್, ಎ.ವೈ ಪ್ರಕಾಶ್, ಕಾಡಪ್ಪ, ಮಂಜುನಾಥ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260430-43-69490330

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.