ದಾವಣಗೆರೆ: ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಟಿಕೆಟ್ ಹಂಚಿಕೆಯ ವಿಚಾರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಹಾಗೂ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ನಡುವೆ ಸೃಷ್ಟಿಯಾದ ವೈಮನಸ್ಸು ಇನ್ನೂ ತಣಿದಂತೆ ಕಾಣುತ್ತಿಲ್ಲ.

ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆಗೆ ಜಮೀರ್ ಅಹ್ಮದ್ ಗೈರಾಗಿದ್ದು ಹಾಗೂ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್ ಮನವೊಲಿಕೆಗೆ ಅವರು ಬಾರದೇ ಇರುವುದು ಈ ಅನುಮಾನವನ್ನು ಇನ್ನಷ್ಟು ಹೆಚ್ಚಿಸಿದೆ.

ಶಾಮನೂರು ಶಿವಶಂಕರಪ್ಪ ನಿಧನದಿಂದ ತೆರವಾಗಿರುವ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ಘೋಷಣೆ ಆಗುವುದಕ್ಕೂ ಮುನ್ನವೇ ಟಿಕೆಟ್ ವಿಚಾರದಲ್ಲಿ ಕಾಂಗ್ರೆಸ್ನಲ್ಲಿ ಭಿನ್ನಾಭಿಪ್ರಾಯ ಸ್ಫೋಟಗೊಂಡಿತ್ತು. ಕ್ಷೇತ್ರದಲ್ಲಿ ಹೆಚ್ಚು ಮತದಾರರನ್ನು ಹೊಂದಿರುವ ಮುಸ್ಲಿಂ ಸಮುದಾಯಕ್ಕೆ ಟಿಕೆಟ್ ನೀಡಬೇಕು ಎಂಬುದಾಗಿ ವಿಧಾನಪರಿಷತ್ ಸದಸ್ಯ ಕೆ.ಅಬ್ದುಲ್ ಜಬ್ಬಾರ್ ಪಟ್ಟುಹಿಡಿದ್ದರು. ಇದಕ್ಕೆ ಸಚಿವ ಜಮೀರ್ ಅಹ್ಮದ್ ಬೆಂಬಲ ಸೂಚಿಸಿದ್ದರು.

ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಭೇಟಿ ನೀಡಿದ್ದ ಜಮೀರ್ ಸಮುದಾಯದ ಸಭೆ ನಡೆಸಿ ಅಹವಾಲು ಸ್ವೀಕರಿಸಿದ್ದರು. ಇದಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ತೀವ್ರ ಅಸಮಾಧಾನ ಹೊರಹಾಕಿದ್ದರು. ಇದನ್ನು ಪಕ್ಷದ ವರಿಷ್ಠರ ಗಮನಕ್ಕೆ ತಂದಿದ್ದರು. ಬೆಂಬಲಿಗರನ್ನು ಬೆಂಗಳೂರಿಗೆ ಕರೆದೊಯ್ದು ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಎದುರು ಶಕ್ತಿಪ್ರದರ್ಶನ ಮಾಡಿದ್ದರು.

ಟಿಕೆಟ್ ಹಂಚಿಕೆ ವಿಚಾರ ಕಗ್ಗಂಟಾಗುತ್ತಿದ್ದಂತೆ ಮಧ್ಯಪ್ರವೇಶ ಮಾಡಿದ್ದ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಪರಿಸ್ಥಿತಿ ತಿಳಿಗೊಳಿಸಲು ಪ್ರಯತ್ನಿಸಿದ್ದರು. ಮುಸ್ಲಿಂ ಸಮುದಾಯದ ಶಾಸಕರು, ಸಚಿವರೊಂದಿಗೆ ಸಭೆ ನಡೆಸಿ ಮನವೊಲಿಸಲು ಶ್ರಮಿಸಿದರು. ಶಾಮನೂರು ಕುಟುಂಬಕ್ಕೆ ಟಿಕೆಟ್ ಘೋಷಣೆ ಮಾಡಿದ ಹೈಕಮಾಂಡ್ ತೀರ್ಮಾನ ಒಪ್ಪಿಕೊಂಡ ಮುಸ್ಲಿಂ ಸಮುದಾಯದ ಮುಖಂಡರು ಅಭ್ಯರ್ಥಿಯ ನಾಮಪತ್ರ ಸಲ್ಲಿಕೆಯ ಸಂದರ್ಭದಲ್ಲಿ ಗೈರಾದರು.

ಮನವೊಲಿಕೆಗೆ ಬಾರದ ಜಮೀರ್

ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್ ಅವರ ಮನವೊಲಿಸಲು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರಿಗೆ ಕೆಪಿಸಿಸಿ ಹೊಣೆ ನಿಗದಿಪಡಿಸಿತ್ತು. ಗುರುವಾರ ಬೆಳಿಗ್ಗೆ ದಾವಣಗೆರೆಗೆ ಬರುವುದಾಗಿ ಜಮೀರ್ ಅವರು ಬಂಡಾಯ ಅಭ್ಯರ್ಥಿಗೂ ಮಾಹಿತಿ ನೀಡಿದ್ದರು. ಆದರೆ, ಕೊನೆಯ ಗಳಿಗೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಹಾಗೂ ಶಾಸಕ ರಿಜ್ವಾನ್ ಅರ್ಷದ್ ಧಾವಿಸಿದರು.

‘ದಕ್ಷಿಣ ವಿಧಾನಸಭಾ ಕ್ಷೇತ್ರದ ಬಂಡಾಯಕ್ಕೆ ಸಂಬಂಧಿಸಿದಂತೆ ಬುಧವಾರ ಬೆಂಗಳೂರಿನಲ್ಲಿ ಸಭೆ ನಡೆದಿತ್ತು. ಬಂಡಾಯ ಶಮನಗೊಳಿಸುವ ಹೊಣೆಗಾರಿಕೆಯನ್ನು ವಸತಿ ಸಚಿವ ಜಮೀರ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ್ದರು. ಗುರುವಾರ ಬೆಳಿಗ್ಗೆ ದಾವಣಗೆರೆಗೆ ಬರಬೇಕಾಗಿದ್ದ ಅವರು, 11 ಗಂಟೆಯ ಬಳಿಕ ನಿರ್ಧಾರ ಬದಲಿಸಿ ಸಲೀಂ ಅಹ್ಮದ್ ಹಾಗೂ ರಿಜ್ವಾನ್ ಅರ್ಷದ್ ಅವರನ್ನು ಕಳುಹಿಸಿಕೊಟ್ಟರು’ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.

ಕೊನೆಯ ಗಳಿಗೆಯಲ್ಲಿ ಸಾದಿಕ್ ಮನೆಗೆ ಭೇಟಿ ನೀಡಿದ ನಿಯೋಗದ ಬಗ್ಗೆಯೂ ಅನೇಕರು ಅನುಮಾನ ವ್ಯಕ್ತಪಡಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.