ದಾವಣಗೆರೆ: ‘ಕುಡಿಯುವ ನೀರು ಪೂರೈಕೆ ಹಾಗೂ ಮೂಲಸೌಲಭ್ಯಕ್ಕೆ ಸಂಬಂಧಿಸಿದ ದೂರುಗಳು ಜನಪ್ರತಿನಿಧಿಗಳ ಬಳಿಗೆ ಬರಬಾರದು. ಸರ್ಕಾರಿ ಇಲಾಖೆಗಳ ನಡುವೆ ಸಮನ್ವಯತೆ ಕಾಪಾಡಿಕೊಂಡು ಕೆಲಸ ಮಾಡಬೇಕು’ ಎಂದು ಶಾಸಕ ಸಮರ್ಥ್ ಶಾಮನೂರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇಲ್ಲಿನ ಪಶುಸಂಗೋಪನಾ ಮತ್ತು ಪಶುಪಾಲನಾ ಇಲಾಖೆಯ ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿಸಿದ್ದ ದಕ್ಷಿಣ ವಿಧಾನಸಭಾ ಕ್ಷೇತ್ರದ ನೀರಿನ ಸಮಸ್ಯೆ ಹಾಗೂ ವಿವಿಧ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಮೂರು ವರ್ಷಗಳಿಂದ ಕ್ಷೇತ್ರದಲ್ಲಿ ಹಲವು ಅಭಿವೃದ್ಧಿ ಕೆಲಸಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಇವುಗಳಲ್ಲಿ ಇನ್ನೂ ಕೆಲವು ಪ್ರಗತಿಯಲ್ಲಿರುವುದು ಗಮನಕ್ಕೆ ಬಂದಿದೆ. ಇಂತಹ ಕಾಮಗಾರಿಗಳನ್ನು ಕೂಡಲೇ ಪೂರ್ಣಗೊಳಿಸಬೇಕು. ಹೊಸ ಕಾಮಗಾರಿ ಕೈಗೆತ್ತಿಕೊಳ್ಳುವ ನಿಟ್ಟಿನಲ್ಲಿ ಸಿದ್ಧತೆಗಳನ್ನು ನಡೆಸಬೇಕು’ ಎಂದರು.

‘ಕುಡಿಯುವ ನೀರು, ವಿದ್ಯುತ್, ಸ್ಮಶಾನ ಸೇರಿ ಹಲವು ಸಮಸ್ಯೆಗಳು ಕ್ಷೇತ್ರದಲ್ಲಿ ಇರುವುದು ಗೊತ್ತಾಗಿದೆ. ಜನರು ಅಹವಾಲುಗಳನ್ನು ಹಿಡಿದು ಶಾಸಕರ ಬಳಿಗೆ ಬರುತ್ತಿದ್ದಾರೆ. ದೂರವಾಣಿ ಮೂಲಕವೂ ಗಮನಕ್ಕೆ ತರುತ್ತಿದ್ದಾರೆ. ಎಲ್ಲ ಇಲಾಖೆಯ ಅಧಿಕಾರಿಗಳು ಸರಿಯಾಗಿ ಕೆಲಸ ಮಾಡಬೇಕು’ ಎಂದು ತಾಕೀತು ಮಾಡಿದರು.

ಸ್ಮಶಾನ ನಿರ್ಮಾಣಕ್ಕೆ ಭೂಮಿ: ‘ಕೈದಾಳೆ ಕ್ಯಾಂಪ್ ಹೊಸ ಗ್ರಾಮವಾಗಿ ಘೋಷಣೆಯಾಗಿದೆ. ಗ್ರಾಮ ವ್ಯಾಪ್ತಿಯಲ್ಲಿ ಸ್ಮಶಾನ ನಿರ್ಮಾಣಕ್ಕೆ ಅರ್ಧ ಎಕರೆ ಭೂಮಿ ಬೇಕಿದೆ. ಇಲ್ಲಿ ಒಂದು ಎಕರೆ ಸರ್ಕಾರಿ ಭೂಮಿ ಲಭ್ಯವಿದೆ. ಇದನ್ನು ಕೂಡಲೇ ಗ್ರಾಮ ಪಂಚಾಯಿತಿಗೆ ಹಸ್ತಾಂತರಿಸಲಾಗುವುದು’ ಎಂದು ತಹಶಿಲ್ದಾರ್ ಎಂ.ಬಿ. ಅಶ್ವತ್ಥ್ ವಿವರಿಸಿದರು.

‘ಕುಕ್ಕವಾಡ ಗ್ರಾಮದ ಸ್ಮಶಾನ ಒತ್ತುವರಿಯನ್ನು ಪೊಲೀಸ್ ಭದ್ರತೆಯಲ್ಲಿ ತೆರವುಗೊಳಿಸಿ ಗ್ರಾಮ ಪಂಚಾಯಿತಿಗೆ ಹಸ್ತಾಂತರಿಸಲಾಗಿದೆ. ಇದನ್ನು ರಕ್ಷಣೆ ಮಾಡಿಕೊಳ್ಳುವ ಹೊಣೆ ಪಂಚಾಯಿತಿಗೆ ಸೇರಿದ್ದು. ಇತ್ತೀಚೆಗೆ ಸುರಿದ ಬಿರುಗಾಳಿ ಸಹಿತ ಮಳೆಗೆ 2 ಎಕರೆ ಅಡಿಕೆ ಹಾಗೂ 4 ಎಕರೆ ಭತ್ತಕ್ಕೆ ಹಾನಿಯಾಗಿದೆ. ಮುದಹದಡಿ ಬಳಿ ಸಿಡಿಲಿಗೆ ಬಲಿಯಾದ ಕುರಿಗಾಹಿ ಕುಟುಂಬಕ್ಕೆ ಪರಿಹಾರ ವಿತರಿಸುವ ಸಿದ್ಧತೆ ನಡೆಯುತ್ತಿದೆ’ ಎಂದು ಮಾಹಿತಿ ನೀಡಿದರು.

ವಸತಿ, ‘ಇ–ಸ್ವತ್ತಿ’ಗೆ ಒತ್ತು: ‘ಕ್ಷೇತ್ರದ ಶಾಸಕರಾಗಿದ್ದ ಶಾಮನೂರು ಶಿವಶಂಕರಪ್ಪ ವಸತಿ ಸೌಲಭ್ಯಕ್ಕೆ ಹೆಚ್ಚು ಒತ್ತು ನೀಡಿದ್ದರು. ವಸತಿ ಸೌಲಭ್ಯಕ್ಕೆ ಕ್ಷೇತ್ರದಲ್ಲಿ ಸಾಕಷ್ಟು ಬೇಡಿಕೆ ಇದೆ. ರಾಜ್ಯ ಸರ್ಕಾರದ ಬಸವ ಹಾಗೂ ಅಂಬೇಡ್ಕರ್ ವಸತಿ ಯೋಜನೆಯಡಿ ಫಲಾನುಭವಿಗಳ ಆಯ್ಕೆ ಪ್ರಕ್ರಿಯೆ ಪ್ರಗತಿಯಲ್ಲಿದೆ. ನಿವೇಶನ ಇರುವವರಿಗೆ ಈ ಸೌಲಭ್ಯ ನೀಡಲಾಗುತ್ತಿದೆ’ ಎಂದು ತಾಲ್ಲೂಕು ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಮ ಭೋವಿ ತಿಳಿಸಿದರು.

‘ಗ್ರಾಮ ಠಾಣಾ ವ್ಯಾಪ್ತಿಯಲ್ಲಿ ‘ಇ–ಸ್ವತ್ತು’ಗಳನ್ನು ನೀಡಲಾಗುತ್ತಿದೆ. ಈವರೆಗೆ ಇದ್ದ ತಾಂತ್ರಿಕ ಸಮಸ್ಯೆಗಳನ್ನು ಪರಿಹರಿಸಲಾಗಿದೆ. ಕಂದಾಯ ಭೂಮಿಯಲ್ಲಿರುವ ಮನೆಗಳಿಗೆ ‘ಇ–ಸ್ವತ್ತು’ ವಿತರಿಸುವಲ್ಲಿ ಕೆಲ ಅಡತಡೆಗಳು ಎದುರಾಗುತ್ತಿವೆ. ಆದರೂ, ಜನರನ್ನು ವಿಶ್ವಾಸಕ್ಕೆ ಪಡೆದು ‘ಇ–ಸ್ವತ್ತು’ ಅರ್ಜಿಗಳನ್ನು ಕಾಲಮಿತಿಯಲ್ಲಿ ವಿಲೇವಾರಿ ಮಾಡಲಾಗುತ್ತಿದೆ’ ಎಂದರು.

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಮಮತಾ ಹೊಸಗೌಡರ್, ಪಶುಪಾಲನಾ ಇಲಾಖೆಯ ಉಪ ನಿರ್ದೇಶಕ ಡಾ.ಮಹೇಶ್ವರಪ್ಪ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260516-43-1677066181

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.