ದಾವಣಗೆರೆ: ‘ತಮಿಳುನಾಡು ಹಾಗೂ ಪಶ್ಚಿಮ ಬಂಗಾಳ ರಾಜ್ಯಗಳ ವಿಧಾನಸಭಾ ಚುನಾವಣೆಯ ಲಾಭ ಪಡೆಯಲು ಬಿಜೆಪಿಯು ಮಹಿಳಾ ಮೀಸಲಾತಿ ಮಸೂದೆಯನ್ನು ಬಳಸಿಕೊಳ್ಳುತ್ತಿದೆ’ ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಆರೋಪಿಸಿದರು.

‘1993ರಲ್ಲೇ ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಕಾಂಗ್ರೆಸ್ ಮೀಸಲಾತಿ ಕಲ್ಪಿಸಿತ್ತು. ಕಾಂಗ್ರೆಸ್ ನಾಯಕರನ್ನು ಟೀಕಿಸುವ ಯಾವ ನೈತಿಕತೆಯೂ ಬಿಜೆಪಿಗೆ ಇಲ್ಲ’ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

‘ಕಾಂಗ್ರೆಸ್ ಯಾವಾಗಲೂ ಮಹಿಳೆಯರ ಪರ ಇದೆ. ಆದರೆ, ಬಿಜೆಪಿಯು ಕ್ಷೇತ್ರ ಪುನರ್ ವಿಂಗಡಣೆಯನ್ನು ಮಹಿಳಾ ಮೀಸಲಾತಿ ಮಸೂದೆಯೊಂದಿಗೆ ತಳುಕು ಹಾಕಿ ಜನರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ. ಮಹಿಳಾ ಮೀಸಲಾತಿ ಮಸೂದೆ ಬಗ್ಗೆ ಸಂಸದರಿಗೆ ಚರ್ಚೆಗೆ ಅವಕಾಶವನ್ನೇ ನೀಡಿಲ್ಲ’ ಎಂದು ದೂರಿದರು.

‘ಜನಸಂಖ್ಯೆ ಆಧಾರದಲ್ಲಿ ಕ್ಷೇತ್ರ ವಿಂಗಡಣೆ ಮಾಡುವುದರಿಂದ ದಕ್ಷಿಣದ ರಾಜ್ಯಗಳಿಗೆ ಬಹುದೊಡ್ಡ ಅನ್ಯಾಯವಾಗಲಿದೆ. ಈಗಾಗಲೇ ಕೇಂದ್ರ ಸರ್ಕಾರದಿಂದ ಕರ್ನಾಟಕ ಸೇರಿದಂತೆ ದಕ್ಷಿಣದ ರಾಜ್ಯಗಳಿಗೆ ಆರ್ಥಿಕವಾಗಿ ಬಲವಾದ ಪೆಟ್ಟು ಬಿದ್ದಿದೆ’ ಎಂದರು.

‘ಲೋಕಸಭೆ ಕ್ಷೇತ್ರಗಳ ಒಟ್ಟು ಸಂಖ್ಯೆಯನ್ನು ದುಪ್ಪಟ್ಟು ಮಾಡುವುದಾಗಿ ಬಿಜೆಪಿ ನಾಯಕರು ಹೇಳುತ್ತಿದ್ದಾರೆ. ರಾಜ್ಯ ವಿಧಾನಸಭಾ ಕ್ಷೇತ್ರಗಳ ಸಂಖ್ಯೆ ಬಗ್ಗೆ ಸ್ಪಷ್ಟತೆ ಇಲ್ಲ. ಯಾವ ಮಾನದಂಡಗಳನ್ನು ಇರಿಸಿಕೊಂಡು ಕ್ಷೇತ್ರ ಪುನರ್ ವಿಂಗಡಣೆ ಮಾಡುತ್ತಾರೆ ಎಂಬ ಬಗ್ಗೆಯೂ ಅವರಿಗೆ ಸ್ಪಷ್ಟತೆ ಇಲ್ಲ’ ಎಂದು ಹೇಳಿದರು.

‘ಹಾಲಿ ಇರುವ 543 ಕ್ಷೇತ್ರಗಳಿಗೆ ಅನ್ವಯವಾಗುವಂತೆ ಮಹಿಳೆಯರಿಗೆ ಮೀಸಲಾತಿ ಕಲ್ಪಿಸಬಹುದು. ಬಿಜೆಪಿಯವರಿಗೆ ಮಹಿಳೆಯರಿಗೆ ಮೀಸಲಾತಿ ಕಲ್ಪಿಸುವ ಬಗ್ಗೆ ಬದ್ಧತೆ ಇಲ್ಲ’ ಎಂದರು.

ಕಾಂಗ್ರೆಸ್ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಅನಿತಾ ಮಾಲತೇಶ್, ಕಾಂಗ್ರೆಸ್ ಮುಖಂಡರಾದ ಎ.ನಾಗರಾಜ್, ಅಯೂಬ್ ಪೈಲ್ವಾನ್, ಕೆ.ಜಿ.ಶಿವಕುಮಾರ್ ಸೇರಿದಂತೆ ಇನ್ನಿತರರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260428-43-432851617

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.